
ಮಡಿಕೇರಿ NEWS DESK ಜು.13 : ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ 02/2027ರ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಇಲ್ಲವೇ ಎರಡು ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50 ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ವಯೋಮಿತಿ : ಅಭ್ಯರ್ಥಿಯು 2005 ಜುಲೈ, 01 ರಿಂದ 2010 ರ ಜನವರಿ, 01 ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ ರೂ.550 ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‍ಸೈಟ್ https://iafrecruitment.edcil.








