
ಸುಂಟಿಕೊಪ್ಪ ಜು.13 NEWS DESK : ಮಡಿಕೇರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸುಂಟಿಕೊಪ್ಪ ವಲಯದ ಗದ್ದೆಹಳ್ಳ ಒಕ್ಕೂಟದ ವತಿಯಿಂದ ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುಂಟಿಕೊಪ್ಪ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಪರಿಸರವನ್ನು ಈಗಿನಿಂದಲೇ ಉಳಿಸಿದರೆ ಮಾತ್ರ ಮುಂದಿನ ಜನಾಂಗಕ್ಕಾಗಿ ಬೇಕಾಗಿದೆ. ಅದ್ದುದರಿಂದ ಪರಿಸರವನ್ನು ಉಳಿಸಿ ಬೆಳೆಸುವ ಬಗ್ಗೆ ತಿಳಿಸಿದರು. ಗಿಡ ನೆಡುವುದು ಒಂದು ದಿನಕ್ಕೆ ಸಿಮೀತವಾಗಬಾರದು ಅದರ ರಕ್ಷಣೆಯನ್ನು ಮಾಡುವುದರ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ಶಾಲಾ ಶಿಕ್ಷಕ ಮಂಜುನಾಥ ಅವರು ಮಕ್ಕಳಿಗೆ ಪರಿಸರದ ಉಳಿವಿಗೆ ಮಕ್ಕಳು ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಸುಕುಮಾರ್, ಪಂಚಾಯಿತಿ ಮಾಜಿ ಸದಸ್ಯರುಗಳಾದ ಗೀತಾ, ಪಾರ್ವತಿ ಸೋಮಯ್ಯ, ಎಸ್‍ಡಿಎಂಸಿ ಅಧ್ಯಕ್ಷೆ ಬಲ್ಕಿಸ್ ಅವರುಗಳು ವೇದಿಕೆಯಲ್ಲಿದ್ದರು. ತಾಲೂಕು ಕೃಷಿ ಮೇಲ್ವಿಚಾರಕರಾದ ಅಶ್ವಥ್ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ಆವರಣದ ಸುತ್ತಮುತ್ತಲಿನಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ವಲಯ ಮೇಲ್ವಿಚಾರಕರಾದಂತಹ ಸಂತೋಷ್, ಶಾಲಾ ಮುಖ್ಯ ಶಿಕ್ಷಕಿ ಹೇಮಾಕುಮಾರಿ, ಸಹಶಿಕ್ಷಕರು, ಸೇವಾ ಪ್ರತಿನಿಧಿ ಜ್ಯೋತಿ ಲಕ್ಷ್ಮಿ ಹಾಗೂ ಸ್ವಸಹಾಯ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು. ಶಾಲಾ ಶಿಕ್ಷಕಿ ಅನಿತಾ ರವರು ಶಾಲಾ ಮಕ್ಕಳಿಗೆ ಪರಿಸರಕ್ಕೆ ಸಂಬಂಧಪಟ್ಟಂತೆ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ಪ್ರಥಮ ಹಾಗೂ ದ್ವಿತೀಯ ಸ್ಥಾನ ಬಂದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.








