
ಮಡಿಕೇರಿ ಜು.13 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್‍ನಲ್ಲಿ ಜುಲೈ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಕಿಗ್ಗಾಲು, ಮುತ್ತಾರ್‍ಮುಡಿ, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.








