Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
  • *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
  • *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ : ವೈದ್ಯಾಧಿಕಾರಿಗಳಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ : ವೈದ್ಯಾಧಿಕಾರಿಗಳಿಗೆ ಸನ್ಮಾನ*

ಜುಲೈ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link

ಸೋಮವಾರಪೇಟೆ ಜು.14 NEWS DESK : ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಆಚರಿಸಿ, ಆಸ್ಪತ್ರೆಯ ವೈದ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಜಮೀರ್, ಸೋಮವಾರಪೇಟೆಯಲ್ಲಿ ಸೇವೆ ಸಲ್ಲಿಸುವುದು ಸಂತೋಷ ತಂದಿದ್ದು, ಸಾರ್ವಜನಿಕರು ಆಸ್ಪತ್ರೆಯ ಸಿಬ್ಬಂದಿಯೊಂದಿಗೆ ಸೌಜನ್ಯದಿಂದ ವರ್ತಿಸಿ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ಕೆಲವು ವೈದ್ಯರ ಕೊರತೆ ಇದ್ದರೂ, ಲಭ್ಯವಿರುವ ವೈದ್ಯರು ಎಲ್ಲ ರೋಗಿಗಳಿಗೂ ಉತ್ತಮ ಚಿಕಿತ್ಸೆ ನೀಡಲು ಶ್ರಮಿಸುತ್ತಿದ್ದಾರೆ ಎಂದರು. ವೈದ್ಯರ ದಿನಾಚರಣೆಯ ಅಂಗವಾಗಿ ತಮ್ಮನ್ನು ಸನ್ಮಾನಿಸಿರುವುದು ವೈದ್ಯರ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಮಾತನಾಡಿ, ಕೊಡಗು ಜಿಲ್ಲೆಗೆ ವೈದ್ಯರು ಸೇವೆಗೆ ಬರಲು ಹಿಂದೇಟು ಹಾಕುತ್ತಿರುವುದು ಸವಾಲಿನ ವಿಷಯವಾಗಿದೆ. ಈ ಕುರಿತು ಜಿಲ್ಲೆಯ ಶಾಸಕರು ಸರ್ಕಾರದ ಗಮನ ಸೆಳೆದಿದ್ದಾರೆ ಎಂದು ಹೇಳಿದರು. ಈಗಾಗಲೇ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ಬಹುತೇಕ ನೀಗಿಸಲಾಗಿದ್ದು, ಪ್ರಸ್ತುತ ಒಂಬತ್ತು ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವು ವೈದ್ಯಕೀಯ ಉಪಕರಣಗಳ ಕೊರತೆ ಇದ್ದು, ಅವುಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಮಾತನಾಡಿ, ಆಸ್ಪತ್ರೆಯ ವೈದ್ಯರು ಉತ್ತಮ ಸೇವೆ ನೀಡುತ್ತಿದ್ದರೂ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಸಾಗಿಸಲು ಅಗತ್ಯ ಸಂಖ್ಯೆಯ ಆಂಬುಲೆನ್ಸ್‍ಗಳ ಕೊರತೆ ಇದೆ ಎಂದು ಹೇಳಿದರು. ಸಣ್ಣಪುಟ್ಟ ಶಸ್ತ್ರಚಿಕಿತ್ಸೆಗಳಿಗೂ ರೋಗಿಗಳು ಜಿಲ್ಲಾ ಆಸ್ಪತ್ರೆಗೆ ತೆರಳಬೇಕಾಗಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ತಾಲೂಕು ಆಸ್ಪತ್ರೆಗೆ ಅರಿವಳಿಕೆ (ಅನಸ್ತೇಶಿಯಾ) ತಜ್ಞರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು. ಈ ಭಾಗದಲ್ಲಿ ಕೂಲಿ ಕಾರ್ಮಿಕರು ಹಾಗೂ ರೈತರ ಸಂಖ್ಯೆ ಹೆಚ್ಚಿರುವುದರಿಂದ ಮೂಳೆ ಮುರಿತದಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಆದ್ದರಿಂದ ತಾಲೂಕು ಆಸ್ಪತ್ರೆಗೆ ಮೂಳೆ ರೋಗ ತಜ್ಞರನ್ನೂ ನೇಮಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವೈದ್ಯರಾದ ಡಾ. ಕೆ. ಕಿರಣ್, ಡಾ. ಆರ್. ಪ್ರತಿಭಾ, ಡಾ. ಎನ್. ಅಶ್ವಿನಿ.,ಡಾ. ಎಚ್.ಎಂ.ಶೇಖರಾಜು., ಡಾ.ಜಿ. ಮಂಜಳ., ಡಾ. ಯಶಸ್ ಗಾಂಧಿ ಹಾಗೂ ಡಾ. ಲೋಕೇಶ್ ಅವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕರವೇ ಪದಾಧಿಕಾರಿಗಳಾದ ಮಂಜುನಾಥ್, ವಸಂತ್, ರವೀಶ್ ಸೇರಿದಂತೆ ಹಲವರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಲಿಬೆಟ್ಟ, NEWS DESK ಸೆ.21: ಶ್ರೀ ಗೌರಿ-ಗಣೇಶೋತ್ಸವದ ಪ್ರಯುಕ್ತ 36ನೇ ವರ್ಷದ ಕಾವೇರಿ ಗಣೇಶೋತ್ಸವ ಸಮಿತಿಯ ವತಿಯಿಂದ ಸೆಪ್ಟೆಂಬರ್ 18ರಂದು…

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.