Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮನೆ ಬಾಗಿಲಿಗೆ ಉಚಿತವಾಗಿ ಬರಲಿದೆ ಜಾತಿ ಮತ್ತು ಶಾಶ್ವತ ನಿವಾಸ ಪ್ರಮಾಣ ಪತ್ರ : ರಾಜ್ಯಾದ್ಯಂತ ಒಟ್ಟು 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣ ಪತ್ರ : ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮನೆ ಬಾಗಿಲಿಗೆ ಉಚಿತವಾಗಿ ಬರಲಿದೆ ಜಾತಿ ಮತ್ತು ಶಾಶ್ವತ ನಿವಾಸ ಪ್ರಮಾಣ ಪತ್ರ : ರಾಜ್ಯಾದ್ಯಂತ ಒಟ್ಟು 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣ ಪತ್ರ : ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಜುಲೈ 20, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು NEWS DESK ಜು.20 : ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಜಾತಿ ಪ್ರಮಾಣ ಪತ್ರಗಳನ್ನು ಉಚಿತವಾಗಿ ವಿತರಿಸುವ ಕಂದಾಯ ಇಲಾಖೆಯ ವಿಶೇಷ ಅಭಿಯಾನ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ಸೇವೆಗೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು, ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಿದರು. ರಾಜ್ಯಾದ್ಯಂತ ಒಟ್ಟು 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣ ಪತ್ರಗಳನ್ನು ಗ್ರಾಮವಾರು ವಿಂಗಡಿಸಿ ಪಿಡಿಎಫ್ ರೂಪದಲ್ಲಿ ಜಿಲ್ಲಾಧಿಕಾರಿಗಳಿಗೆ ಒದಗಿಸಲಾಗಿದ್ದು, ಇವುಗಳನ್ನು ಮುದ್ರಿಸಿ ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಮನೆ ಮನೆಗೆ ತೆರಳಿ ಉಚಿತವಾಗಿ ನೀಡುವ ಈ ವಿಶೇಷ ಅಭಿಯಾನದ ಜೊತೆಗೆ, ಸಾರ್ವಜನಿಕರು ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಲು ವಿಶೇಷ ವೆಬ್‌ಸೈಟ್‌ (https://nadakacheri.karnataka.gov.in/AJSKCertificates) ಹಾಗೂ ಪ್ರತಿ ಹೋಬಳಿ ಮಟ್ಟದಲ್ಲಿ ಉಚಿತ ಮುದ್ರಣದ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈಗಾಗಲೇ ಸುಮಾರು 85 ಲಕ್ಷ ಜಾತಿ ಪ್ರಮಾಣ ಪತ್ರಗಳನ್ನು ಮೊಬೈಲ್ ಸಂಖ್ಯೆಗಳೊಂದಿಗೆ ಲಿಂಕ್ ಮಾಡಲಾಗಿದ್ದು, ವಾಟ್ಸ್ಆಪ್ ಅಥವಾ ಎಸ್‌ಎಂಎಸ್ ಮೂಲಕ ನೇರ ಲಿಂಕ್ ಕಳುಹಿಸಿ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ, ರಾಜ್ಯದಾದ್ಯಂತ ಏಕರೂಪದ, ಪಾರದರ್ಶಕ ಮತ್ತು ಕಾನೂನುಬದ್ಧವಾದ ಚೌಕಟ್ಟಿನಡಿಯಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಿಸುವ ಮಹತ್ವದ ಸೇವೆಗೂ ಆದ್ಯತೆಯ ಮೇರೆಗೆ ಚಾಲನೆ ನೀಡಲಾಗಿದೆ. ನಾಗರಿಕರು ಈ ಪ್ರಮಾಣ ಪತ್ರವನ್ನು ಪಡೆಯಲು ಹತ್ತಿರದ ನಾಡಕಚೇರಿ, ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಗಳು ಅಥವಾ ಅಧಿಕೃತ ಜಾಲತಾಣದ (https://ajsk.karnataka.gov.in/nk5_online/Login/Login_Public) ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.2 NEWS DESK :  ಗೋಣಿಕೊಪ್ಪ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ನಲ್ಲೂರು, ಎಫ್2 ಬಾಳಲೆ…

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.