Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜನತೆಯ ಇಚ್ಛೆಯಂತೆ ಅಭಿವೃದ್ಧಿ ಕಾರ್ಯ: ಶಾಸಕ ಡಾ.ಮಂತರ್ ಗೌಡ*
  • *ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*
  • *ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*
  • *ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ : ವಿರಾಜಪೇಟೆಯಲ್ಲಿ ಪೋಸ್ಟರ್ ಬಿಡುಗಡೆ, ಸಹಿ ಸಂಗ್ರಹ ಅಭಿಯಾನ*
  • *ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ* 
  • *ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆ ಕುರಿತ ಜಾಗೃತಿ : ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ ಅಗತ್ಯ : ಟಿ.ಜಿ.ಪ್ರೇಮಕುಮಾರ್* 
  • *ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ*
  • *ಮಡಿಕೇರಿ : ಕಾನೂನು ಸೇವಾ ಪ್ರಾಧಿಕಾರದಿಂದ ದುರ್ಬಲರಿಗೆ ಕಾನೂನು ನೆರವು : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
  • *ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ-ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯಿಂದ ಮಲ್ಲಿಕಾರ್ಜುನ ಸ್ವಾಮಿಗೆ ಸನ್ಮಾನ*
  • *ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಅಂತಿಮ ವರ್ಷದ ಫಲಿತಾಂಶ ಪ್ರಕಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದುರ್ಬಲರಿಗೆ ಕಾನೂನು ನೆರವು : ಜೀವನ ಎಂಬುವುದು ಸದಾ ಸಂತೋಷದಿಂದ ಇರುವುದಿಲ್ಲ. ಎಲ್ಲರ ಜೀವನದಲ್ಲಿಯೂ ಏರಿಳಿತ ಇರುತ್ತದೆ ಇಂತಹ ಸಂದರ್ಭ ಧೈರ್ಯದಿಂದ ಬದುಕು ಎದುರಿಸಬೇಕು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದುರ್ಬಲರಿಗೆ ಕಾನೂನು ನೆರವು : ಜೀವನ ಎಂಬುವುದು ಸದಾ ಸಂತೋಷದಿಂದ ಇರುವುದಿಲ್ಲ. ಎಲ್ಲರ ಜೀವನದಲ್ಲಿಯೂ ಏರಿಳಿತ ಇರುತ್ತದೆ ಇಂತಹ ಸಂದರ್ಭ ಧೈರ್ಯದಿಂದ ಬದುಕು ಎದುರಿಸಬೇಕು*

ಜುಲೈ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ NEWS DESK ಜು.22 -ಕಾನೂನು ಸೇವಾ ಪ್ರಾಧಿಕಾರವು ದುರ್ಬಲರಿಗೆ ಅಗತ್ಯ ನೆರವು ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ದ್ಯೇಯದಂತೆ ಪ್ರಾಧಿಕಾರವು ಕಾರ್ಯನಿರ್ವಹಿಸುತ್ತಾ ಬಂದಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹೇಳಿದ್ದಾರೆ. ನಗರದ ಲಯನ್ಸ್ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಮಡಿಕೇರಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿತ ಸ್ನೇಹಾಶ್ರಯ ಸಮಿತಿ ಮತ್ತು ಓಡಿಪಿ ಸಂಸ್ಥೆಗಳ 18 ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಎಚ್.ಐ.ವಿ. ಪೀಡಿತ ಮಕ್ಕಳ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಉಭಯ ಸಂಸ್ಥೆಗಳು ಮಹತ್ತರ ಪಾತ್ರ ವಹಿಸಿರುವುದನ್ನು ಶ್ಲಾಘಿಸಿದ ಶುಭ ಅವರು, ಸಮಾಜದ ವಿವಿಧ ಸೇವಾ ಸಂಸ್ಥೆಗಳು ಇಂತಹ ಕಾರ್ಯಕ್ಕೆ ಕೈಜೋಡಿಸಿ ಸಹಕಾರ ನೀಡಬೇಕೆಂದು ಕರೆ ನೀಡಿದರು. ಎಚ್.ಐ.ವಿ. ಪೀಡಿತರಿಗೆ ಕಾನೂನು ಸೇವೆಯ ನೆರವು ನೀಡಲು ಪ್ರಾಧಿಕಾರ ಸದಾ ಸಿದ್ಧವಿದೆ ಎಂದು ಹೇಳಿದ ನ್ಯಾಯಾಧೀಶರಾದ ಶುಭ, ಎಚ್.ಐ.ವಿ. ಇದೆ ಎಂದು ಗೊತ್ತಾದಾಗ ಭಯ ಪಡದೇ ಕಾಯಿಲೆಯಿಂದ ಮುಕ್ತರಾಗುವ ನಿಟ್ಟಿನಲ್ಲಿ ಪೀಡಿತರು ಧೈರ್ಯದಿಂದ ವರ್ತಿಸಬೇಕೆಂದು ಸಲಹೆ ನೀಡಿದರು. ಜೀವನ ಎಂಬುದು ಸದಾ ಸಂತೋಷದಿಂದ ಇರುವುದಿಲ್ಲ. ಎಲ್ಲರ ಜೀವನದಲ್ಲಿಯೂ ಏರಿಳಿತ ಇರುತ್ತದೆ ಇಂತಹ ಸಂದರ್ಭ ಧೈರ್ಯದಿಂದ ಬದುಕು ಎದುರಿಸಬೇಕು ಎಂದು ಶುಭ ಅವರು ಕಿವಿಮಾತು ಹೇಳಿದರು. ಓಡಿಪಿ ಸಂಸ್ಥೆ ಮೈಸೂರಿನ ನಿರ್ದೇಶಕರಾದ ಟೆನ್ನಿ ಕುರಿಯನ್ ಮಾತನಾಡಿ. ಸಮಾಜದಲ್ಲಿಂದು ಮೌಲ್ಯಗಳು ಕಡಿಮೆಯಾಗುತ್ತಿವೆ. ಹಿರಿಯರಿಗೆ ಗೌರವ ಬಾವನೆ ದೊರಕುತ್ತಿಲ್ಲ. ಈ ನಿಟ್ಟಿನಲ್ಲಿ ಜೀವನ ಮೌಲ್ಯಗಳನ್ನು ಕಲಿಸುವ ಕಾರ್ಯ ಮೊದಲು ಆಗಬೇಕೆಂದು ಸಲಹೆ ನೀಡಿದರು.  ಸಂತ ಮೈಕಲರ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರು ಮತ್ತು ಸಂತಮೈಕಲರ ಚರ್ಚ್ ಧರ್ಮ ಗುರು ಪ್ಯಾಟ್ರಿಕ್ ಕ್ಲೇವಿಯರ್ ಮಾತನಾಡಿ ಎಚ್.ಐ.ವಿ. ಪೀಡಿತರಿಗೆ ಸಮಾಜದ ಸರ್ವ ವರ್ಗದ ಜನ ಸಹನೂಭೂತಿಯೊಂದಿಗೆ ನೆರವಿನ ಹಸ್ತ ಚಾಚಬೇಕೆಂದು ಮನವಿ ಮಾಡಿದರು.
ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಭಾರತದಲ್ಲಿ 70 ಸಾವಿರ ಮತ್ತು ಕರ್ನಾಟಕದಲ್ಲಿ 11 ಸಾವಿರ ಎಚ್.ಐ.ವಿ. ಪೀಡಿತರಿದ್ದಾರೆ. ಪೀಡಿತರು ಜೀವನವನ್ನು ಸವಾಲಾಗಿ ಸ್ವೀಕರಿಸಿ ಸಂತೋಷದ ಬಾಳ್ವೆ ನಡೆಸಬೇಕೆಂದು ಹೇಳಿದರು. ಪತ್ರಕರ್ತ ಅನಿಲ್ ಎಚ್.ಟಿ. ಮಾತನಾಡಿ, ಎಚ್.ಐ.ವಿ ಪೀಡಿತರಿಗೆ ಅಗತ್ಯ ನೆರವನ್ನು 18 ವರ್ಷಗಳಿಂದ ನೀಡುವ ಮೂಲಕ ಸ್ನೇಹಾಶ್ರಯ ಮತ್ತು ಓಡಿಪಿ ಸಂಸ್ಥೆಗಳು ದೇವರು ಮೆಚ್ಚುವಂತಹ ಕೆಲಸ ಮಾಡುತ್ತಿವೆ ಎಂದು ಶ್ಲಾಘಿಸಿದರು.
ಎಚ್.ಐ.ವಿ. ಪೀಡಿತ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸಾಮಾಜಿಕ ಸೇವಾ ಸಂಸ್ಥೆಗಳು ಪ್ರಯತ್ನಿಸಬೇಕು ಎಂದು ಅನಿಲ್ ಸಲಹೆ ನೀಡಿದರು. ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್ ಮಾತನಾಡಿ, ಎಚ್.ಐ.ವಿ ಪೀಡಿತರಿಗೆ ನೆರವಿನ ಮೂಲಕ ಜೀವನದಲ್ಲಿ ಹೊಸ ಭರವಸೆ ಮೂಡಿಸುವ ಪ್ರಯತ್ನ ಶ್ಲಾಘನೀಯ ಎಂದರು.
18 ವರ್ಷಗಳ ಹಿಂದೆ ಸ್ನೇಹಾಶ್ರಯ ಸಂಸ್ಥೆಯ ಹುಟ್ಟಿಗೆ ಕಾರಣರಾದವರಲ್ಲಿ ಪ್ರಮುಖರಾಗಿದ್ದ ಆರೋಗ್ಯ ಅಧಿಕಾರಿ ಡಾ.ಸಿದ್ದಯ್ಯ ಅವರು ಮಾತನಾಡಿ, ವಿಶ್ವದಲ್ಲಿ ಮಾರಕ ರೋಗಗಳ ಪೈಕಿ ಎಚ್.ಐ.ವಿ. 3ನೇ ಸ್ಥಾನದಲ್ಲಿದೆ. ಈ ಕಾಯಿಲೆಯಿಂದ ಬಳಲುವ ಮಕ್ಕಳಿಗೆ ಸೂಕ್ತ ಆರೈಕೆಯೊಂದಿಗೆ ಮಾನಸಿಕವಾಗಿಯೂ ಧೈರ್ಯ ತುಂಬುವ ಅಗತ್ಯವಿದೆ ಎಂದರು.
ಸ್ನೇಹಾಶ್ರಯ ಸಂಸ್ಥೆಯ ಕಾರ್ಯಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು,, ಮಡಿಕೇರಿಯ ಅನೇಕ ಕೊಡುಗೈ ದಾನಿಗಳ ಸಹಕಾರದಿಂದ ಸ್ನೇಹಾಶ್ರಯ 18 ವರ್ಷ ಪೂರೈಸಿದ್ದು ನೂರಾರು ಎಚ್.ಐ.ವಿ ಪೀಡಿತರಿಗೆ ದಾನಿಗಳ ಸಹಕಾರ ಜೀವನದಲ್ಲಿ ಹೊಸ ಭರವಸೆ ಮೂಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಲಯನ್ಸ್ ಟ್ರಸ್ಟ್ ಅಧ್ಯಕ್ಷ ಎ.ಕೆ. ನವೀನ್, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್. ರಾಜೇಶ್ ವೇದಿಕೆಯಲ್ಲಿದ್ದರು. ದಾನಿಗಳು ಈ ಸಂದರ್ಭ ಎಚ್.ಐ.ವಿ ಪೀಡಿತ ಮಕ್ಕಳಿಗೆ ವಿವಿಧ ರೀತಿಯ ನೆರವು ನೀಡಿದರು. ಸುನಿತಾ ಮುತ್ತಣ್ಣ ಸ್ವಾಗತಿಸಿ, ಜಾಯ್ಸ್ ಮೆನೇಜಸ್ ನಿರೂಪಿಸಿದರು. ಆರೈಕೆ ಮತ್ತು ಬೆಂಬಲ ಕೇಂದ್ರದ ಜಿಲ್ಲಾ ಸಂಯೋಜಕರಾದ ಬೈನಿ ಅವರು ವಂದಿಸಿದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜನತೆಯ ಇಚ್ಛೆಯಂತೆ ಅಭಿವೃದ್ಧಿ ಕಾರ್ಯ: ಶಾಸಕ ಡಾ.ಮಂತರ್ ಗೌಡ*

ಜುಲೈ 22, 2026

*ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*

ಜುಲೈ 22, 2026

*ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*

ಜುಲೈ 22, 2026

*ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*

ಜುಲೈ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

​ಸುಂಟಿಕೊಪ್ಪ ಜು.22 NEWS DESK : ತನ್ನ ಸಹಚರರ ಜೊತೆ ಯಾವುದೇ ಸಂಘರ್ಷವಿಲ್ಲದೆ, ಧರ್ಮಾತೀತವಾಗಿ ಹಾಗೂ ಜಾತ್ಯತೀತವಾಗಿ ಸಮಾಜಕ್ಕಾಗಿ ದುಡಿಯುವವನೇ…

*ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*

ಜುಲೈ 22, 2026

*ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ : ವಿರಾಜಪೇಟೆಯಲ್ಲಿ ಪೋಸ್ಟರ್ ಬಿಡುಗಡೆ, ಸಹಿ ಸಂಗ್ರಹ ಅಭಿಯಾನ*

ಜುಲೈ 22, 2026

*ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ* 

ಜುಲೈ 22, 2026

*ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆ ಕುರಿತ ಜಾಗೃತಿ : ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ ಅಗತ್ಯ : ಟಿ.ಜಿ.ಪ್ರೇಮಕುಮಾರ್* 

ಜುಲೈ 22, 2026

*ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ*

ಜುಲೈ 22, 2026

*ಮಡಿಕೇರಿ : ಕಾನೂನು ಸೇವಾ ಪ್ರಾಧಿಕಾರದಿಂದ ದುರ್ಬಲರಿಗೆ ಕಾನೂನು ನೆರವು : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಜುಲೈ 22, 2026

*ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ-ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯಿಂದ ಮಲ್ಲಿಕಾರ್ಜುನ ಸ್ವಾಮಿಗೆ ಸನ್ಮಾನ*

ಜುಲೈ 22, 2026

*ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಅಂತಿಮ ವರ್ಷದ ಫಲಿತಾಂಶ ಪ್ರಕಟ*

ಜುಲೈ 22, 2026

*ಕುಶಾಲನಗರ, ಸೋಮವಾರಪೇಟೆ ಆಸ್ಪತ್ರೆ ಅಭಿವೃದ್ಧಿ*

ಜುಲೈ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.