
ಮಡಿಕೇರಿ ಜು.22 NEWS DESK : 2024, 2025, ಹಾಗೂ 2026ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ , ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು ರೂ.3,000 ಗಳು ಹಾಗೂ ಡಿಪ್ಲೋಮಾ ಪಡೆದವರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ ಮತ್ತು ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯತ್ತಿರುವ ಫಲಾನುಭವಿಗಳು, ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆಯನ್ನು ಮಾಡಿಕೊಳ್ಳಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800–599-7154 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.








