Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ : ವಿರಾಜಪೇಟೆಯಲ್ಲಿ ಪೋಸ್ಟರ್ ಬಿಡುಗಡೆ, ಸಹಿ ಸಂಗ್ರಹ ಅಭಿಯಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ : ವಿರಾಜಪೇಟೆಯಲ್ಲಿ ಪೋಸ್ಟರ್ ಬಿಡುಗಡೆ, ಸಹಿ ಸಂಗ್ರಹ ಅಭಿಯಾನ*

ಜುಲೈ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link

ವಿರಾಜಪೇಟೆ ಜು.22 NEWS DESK : ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜನಗಣತಿ ಹಾಗೂ ಕ್ಷೇತ್ರ ಮರು ವಿಂಗಡಣೆ ಪ್ರಕ್ರಿಯೆಯಿಂದ ಮಹಿಳಾ ಮೀಸಲಾತಿಯನ್ನು ಬೇರ್ಪಡಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಮಂಡಿಸಬೇಕು. ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳ ಕ್ಷೇತ್ರಗಳ ಆಧಾರದ ಮೇಲೆಯೇ ಮುಂದಿನ ಚುನಾವಣೆಯಿಂದ ಶೇ.33ರ ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ವತಿಯಿಂದ ವಿರಾಜಪೇಟೆಯಲ್ಲಿ ಪೋಸ್ಟರ್  ಬಿಡುಗಡೆ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಸಿತು. ವಿರಾಜಪೇಟೆಯಲ್ಲಿ ಸಂಘಟನೆಯ ಕಛೇರಿಯಲ್ಲಿ ಜಾಗೃತಿ  ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದ ಮುಖಂಡರು, ಬಳಿಕ ಸಾರ್ವಜನಿಕರು, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಂದ ಸಹಿ ಸಂಗ್ರಹಿಸುವ ಮೂಲಕ ಕೇಂದ್ರ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ರಾಜಕೀಯದಲ್ಲಿ ಮಹಿಳೆಯರ ಸಮಾನ ಪ್ರಾತಿನಿಧ್ಯ ಮತ್ತು ಶೇ.33 ಮೀಸಲಾತಿಯ ಅಗತ್ಯತೆಯನ್ನು ಸಾರುವ ವಿಶೇಷ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು. ಮುಂಬರುವ ಚುನಾವಣೆಗಳಿಂದಲೇ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ ಕ್ಷೇತ್ರಗಳ ಆಧಾರದ ಮೇಲೆ ಶೇಕಡಾ 33 ರಷ್ಟು ಮಹಿಳಾ ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತರಬೇಕೆಂದು ಆಗ್ರಹಿಸಿದರು. ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಬಿರುಸಿನ ಸಹಿ ಸಂಗ್ರಹ ನಡೆಯಿತು. ಸಾವಿರಾರು ನಾಗರಿಕರು ಸಹಿ ಮಾಡುವ ಮೂಲಕ ಈ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಮೀಸಲಾತಿಯನ್ನು ಕೇವಲ ಕಾಗದದ ಮೇಲೆ ಇಡದೇ, ಬರುವ ಮುಂದಿನ ಚುನಾವಣೆಗಳಿಂದಲೇ ಕ್ಷೇತ್ರಗಳ ಆಧಾರದಲ್ಲಿ ಜಾರಿಗೆ ತರಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು ಬಲವಾಗಿ ಆಗ್ರಹಿಸಿದರು.ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಅಥವಾ ಜನಗಣತಿಯ ನೆಪ ಹೇಳಿ ಮೀಸಲಾತಿ ಜಾರಿಯನ್ನು ವಿಳಂಬ ಮಾಡಬಾರದು ಎಂದು ಮುಖಂಡರು ಒತ್ತಾಯಿಸಿದರು. ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಂಚಾಲಕಿ ಪದ್ಮಿನಿ ಶ್ರೀಧರ್,”ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳೆಯರು ಯಶಸ್ವಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಆದರೆ ಶಾಸನಸಭೆ ಮತ್ತು ಸಂಸತ್ತಿನಲ್ಲಿ ಮಹಿಳೆಯರ ಪ್ರಾತಿನಿಧ್ಯ ಇಂದಿಗೂ ತುಂಬಾ ಕಡಿಮೆಯಿದೆ. ಮಹಿಳೆಯರ ಸಬಲೀಕರಣಕ್ಕಾಗಿ %33 ಮೀಸಲಾತಿಯನ್ನು ಮುಂದಿನ ಚುನಾವಣೆಯಿಂದಲೇ ಜಾರಿಗೊಳಿಸದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು,”ಎಂದು ಎಚ್ಚರಿಸಿದರು. ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಅವರ ದಕ್ಷಿನ ರಾಜಕೀಯ ಪ್ರಾತಿನಿಧ್ಯ ಸಿಗಲೇ ಬೇಕು. ದೀರ್ಘ ಕಾಲದವರೆಗೆ, ಸಮಾನ ರಾಜಕೀಯ ಪ್ರತಿನಿಧಿತ್ವಕ್ಕಾಗಿ ಭಾರತದ ಮಹಿಳೆಯರು ಬಹಳ ದೀರ್ಘಕಾಲದಿಂದ ಕಾಯುತ್ತಿದ್ದಾರೆ. ಈ ಐತಿಹಾಸಿಕ ಭರವಸೆಯನ್ನು ಕಾರ್ಯರೂಪಗೊಳಿಸಬೇಕು. ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಈಗಲೇ ಆಗಲೇಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಜನವಾದಿ ಸಂಘಟನೆಯ ಸದಸ್ಯರಾದ ಪ್ರೇಮಾ, ಸೀತೆ, ಸುಮತಿ, ನಂದಿನಿ, ಬಿಂದು, ಮಂಗಳಾ ಸೇರಿದಂತೆ ಪದಾಧಿಕಾರಿಗಳು, ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಎ.ಸಿ. ಸಾಬು, ಡಿವೈಎಫ್‍ಐ ಸಂಘಟನೆಯ ಮುಖಂಡರಾದ ಸಾಧಿಕ್, ವಿವಿಧ ಸಾಮಾಜಿಕ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.