
ವಿರಾಜಪೇಟೆ NEWS DESK ಜು.24 : ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ಸುಸಜ್ಜಿತ ಕಟ್ಟಡ, ನುರಿತ ಉಪನ್ಯಾಸಕರು, ಉತ್ತಮ ಗ್ರಂಥಾಲಯ, ಇಂಡಸ್ಟ್ರಿಯಲ್ ವಿಸಿಟ್ ಕಾರ್ಯಕ್ರಮ, ಇಂಟರ್ನ್ಶಿಪ್ ಹಾಗೂ ಪ್ರಾಜೆಕ್ಟ್ ಗಳಲ್ಲಿ ತೊಡಗಿಸಿಕೊಳ್ಳುವಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಹೀಗೆ ಹತ್ತು ಹಲವು ಸೌಲಭ್ಯಗಳನ್ನು ಒಳಗೊಂಡಿದೆ. ಮಾತ್ರವಲ್ಲದೆ ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವೃತ್ತಿ ಮಾರ್ಗದರ್ಶನವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುತ್ತದೆ. ಈ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಕಚೇರಿಯ ವೇಳೆಯಲ್ಲಿ ಕಾಲೇಜಿಗೆ ಆಗಮಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.









