Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*
  • *ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*
  • *ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
  • *ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*
  • ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  

ಜುಲೈ 25, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.25 : ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ತನಿಖೆಗೆ ಆದೇಶಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದರೂ ಸಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ ಎಂದು ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿಜೆಪಿ ಮತ್ತು ಕಾಂಗ್ರೆಸ್ ನೀಟ್ ಪ್ರಕರಣವನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿವೆ ಎಂದು ಟೀಕಿಸಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ. ಇದು ಕ್ಷಮಿಸಲಾಗದ ಅಪರಾಧವಾಗಿದ್ದು, ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ತ್ವರಿತ ವಿಚಾರಣೆ ನಡೆಸಿ ಕಾನೂನು ಪ್ರಕಾರ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ‍್ಯಾಕ್ ನ್ಯಾಯಾಲಯದ ಮೂಲಕ ಕ್ರಮ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಈ ಪ್ರಕರಣದ ಹಿಂದೆ ಇರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಹಾಗೂ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಆದರೂ ಕಾನೂನು ಬಾಹಿರವಾಗಿ ಪ್ರತಿಭಟನೆಗಳನ್ನು ಮಾಡಿ ಅಶಾಂತಿ ಮೂಡಿಸುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ವಿದ್ಯಾರ್ಥಿಗಳ ಒಂದು ವರ್ಷ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ತಕ್ಷಣವೇ ನೀಟ್ ಮರುಪರೀಕ್ಷೆ ನಡೆಸಿದ್ದು, ಅದರ ಫಲಿತಾಂಶವೂ ಜುಲೈ 19ರಂದು ಪ್ರಕಟವಾಗಿದೆ. ಇಷ್ಟೆಲ್ಲ ಕ್ರಮಗಳ ಬಳಿಕವೂ ಕೇಂದ್ರ ಸರಕಾರ ಏನೂ ಮಾಡಿಲ್ಲ ಎಂಬ ರೀತಿಯಲ್ಲಿ ಬಿಂಬಿಸಿ, ವಿದ್ಯಾರ್ಥಿಗಳ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು ದೇಶದಲ್ಲಿ ಅಶಾಂತಿ ಸೃಷ್ಟಿಸುವ ರೀತಿಯ ಪ್ರತಿಭಟನೆಗಳು ನಡೆಯುತ್ತಿದೆ. ಪ್ರತಿಭಟನೆಯ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸುವುದು, ದೇಶ ಹಾಗೂ ಧರ್ಮದ ವಿರುದ್ಧ ಘೋಷಣೆಗಳನ್ನು ಕೂಗುವುದು, ಪ್ರತಿಭಟನಾ ಸ್ಥಳದಲ್ಲಿ ಕುಣಿದು ಕುಪ್ಪಳಿಸುವುದು ಮತ್ತಿತರ ಚಟುವಟಿಕೆಗಳನ್ನು ಗಮನಿಸಿದರೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿಗಿಂತ ಬೇರೆ ಉದ್ದೇಶವೇ ಇರುವಂತಿದೆ ಎಂಬ ಅನುಮಾನ ಮೂಡುತ್ತದೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಪ್ರತಿಭಟನೆಗೆ ವಿದೇಶಗಳಿಂದಲೂ ಹಣ ಬರುತ್ತಿದೆ ಎನ್ನಲಾಗುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದೇಶಿ ಹಣಕಾಸಿನ ನಡುವೆ ಏನು ಸಂಬಂಧ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೂ ಬೆಂಬಲ ನೀಡುತ್ತಿರುವಂತೆ ಕಾಣುತ್ತಿದೆ ಎಂದು ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಹಾಗೂ ಅದರ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರಿಗೆ ವಿದ್ಯಾರ್ಥಿಗಳ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ, ನೀಟ್ ಮರುಪರೀಕ್ಷೆ ನಡೆದ ದಿನವೇ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸುತ್ತಿರಲಿಲ್ಲ. ಆ ಕಾರ್ಯಕ್ರಮದಿಂದ ಉಂಟಾದ ವಾಹನ ದಟ್ಟಣೆಯಿಂದ ಹಲವಾರು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಹರಸಾಹಸ ಪಡಬೇಕಾಯಿತು. ಕೆಲವರು ಪರೀಕ್ಷೆಯಿಂದಲೇ ವಂಚಿತರಾದರು. ಈ ವಿಚಾರದ ಬಗ್ಗೆ ಸಿಜೆಪಿ ಮತ್ತು ಕಾಂಗ್ರೆಸ್ ಯಾಕೆ ಮೌನ ವಹಿಸಿವೆ ಎಂದು ಪ್ರಶ್ನಿಸಿದ್ದಾರೆ. ವಿದ್ಯಾರ್ಥಿಗಳನ್ನು ಸಿಜೆಪಿ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಗುತ್ತಿಗೆ ನೀಡಿಲ್ಲ. ಪ್ರತಿಭಟನೆಯ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮುಂದುವರಿದರೆ, ಅದರ ವಿರುದ್ಧ ಬಿಜೆಪಿ ಕೂಡ ಬೀದಿಗಿಳಿದು ಹೋರಾಟ ನಡೆಸಬೇಕಾದ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.  ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇರುವಂತೆ ಮಾತನಾಡುತ್ತಿರುವ ಕಾಂಗ್ರೆಸ್, ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಕುರಿತು ಯಾಕೆ ಮೌನವಾಗಿದೆ? ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಭ್ರಷ್ಟಾಚಾರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲವೇ? ಎಂದು ಪ್ರಶ್ನಿಸಿರುವ ರಾಕೇಶ್ ದೇವಯ್ಯ ರಾಜ್ಯ ಸರಕಾರವೇ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿರುವಾಗ ಈಗ ವಿದ್ಯಾರ್ಥಿಗಳ ಬಗ್ಗೆ ಭಾರೀ ಕಾಳಜಿ ಇರುವಂತೆ ವರ್ತಿಸುತ್ತಿರುವುದು ಕೇವಲ ಮೊಸಳೆ ಕಣ್ಣೀರಿನ ರಾಜಕೀಯ ನಾಟಕ ಎಂದು ಚೆಪ್ಪುಡೀರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. *ಶೈಕ್ಷಣಿಕ ಪ್ರಗತಿ* ಕೇಂದ್ರ ಸರಕಾರದ ಕಾಳಜಿಯಿಂದ ರಾಷ್ಟ್ರದಲ್ಲಿ ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ. ಉನ್ನತ ಶಿಕ್ಷಣ ದಾಖಲಾತಿ ಪ್ರಮಾಣ 2014ರಲ್ಲಿ ಶೇ.23.7 ರಷ್ಟಿತ್ತು, ಇದು 2023ರ ವೇಳೆಗೆ ಶೇ.28.4ಕ್ಕೆ ಏರಿಕೆಯಾಗಿದೆ. ವಿಶ್ವವಿದ್ಯಾಲಯಗಳ ಸಂಖ್ಯೆ 2014ರಲ್ಲಿ ಸುಮಾರು 760 ಇತ್ತು, 2024ರ ವೇಳೆಗೆ 1,200ಕ್ಕೂ ಹೆಚ್ಚು ಆಗಿವೆ. ಐಐಟಿ 2014ರಲ್ಲಿ 16 ಇದ್ದವು, ಈಗ 23, ಐಐಎಂ 2014ರಲ್ಲಿ 13 ಇದ್ದವು, ಈಗ 21 ಆಗಿದೆ. ಎಐಐಎಂಎಸ್ 2014ರಲ್ಲಿ 7, ಪ್ರಸ್ತುತ 23ಕ್ಕೂ ಹೆಚ್ಚು ಕಾರ್ಯನಿರ್ವಹಿಸುತ್ತಿವೆ. 600ರಿಂದ 660ಕ್ಕೂ ಹೆಚ್ಚು ನವೋದಯ ವಿದ್ಯಾಲಯಗಳಿವೆ. ಆದಿವಾಸಿ ವಿದ್ಯಾರ್ಥಿಗಳಿಗಾಗಿ ಏಕಲವ್ಯ ಮಾದರಿ ವಸತಿ ಶಾಲೆಗಳು 700ಕ್ಕೂ ಹೆಚ್ಚು ಇವೆ. ರಾಷ್ಟ್ರೀಯ ಶಿಕ್ಷಣ ನೀತಿ, ಬಹುಶಾಖಾ ಶಿಕ್ಷಣ, ಮಾತೃಭಾಷೆಯಲ್ಲಿ ಶಿಕ್ಷಣ ಸೇರಿದಂತೆ ಹಲವು ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಭಾರತೀಯ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಸುಧಾರಣೆಗೆ ಒತ್ತು ನೀಡಲಾಗಿದೆ. ಕ್ಯುಎಸ್ ವಿಶ್ವ ವಿಶ್ವವಿದ್ಯಾನಿಲಯದ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯ ವಿಶ್ವವಿದ್ಯಾಲಯಗಳ ಸಂಖ್ಯೆ ಕಳೆದ ಕೆಲವು ವರ್ಷಗಳಲ್ಲಿ ಗಮನಾರ್ಹವಾಗಿ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಈ ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ಇಷ್ಟೊಂದು ಶೈಕ್ಷಣಿಕ ಪ್ರಗತಿಯನ್ನು ಸಾಧಿಸಿದೆ. ಆದರೂ ಸಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮುಗ್ಧ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ದೇಶದ ಕಾನೂನಿಗೆ ಅಗೌರವ ತೋರಿ ಪ್ರತಿಭಟನೆ ನಡೆಸುತ್ತಿರುವುದು ಖಂಡನೀಯವೆಂದು ರಾಕೇಶ್ ದೇವಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಕೇಂದ್ರ ಸರಕಾರ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಗರಿಷ್ಠ 10 ವರ್ಷ ಜೈಲು ಶಿಕ್ಷೆ ಮತ್ತು ರೂ.10 ಕೋಟಿ ದಂಡ ವಿಧಿಸಲು ಅವಕಾಶ ನೀಡುವ ಕಠಿಣ ಕಾನೂನು ಮಸೂದೆಗೆ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*

ಜುಲೈ 25, 2026

*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*

ಜುಲೈ 25, 2026

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*

ಜುಲೈ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.25 : ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳನ್ನು ನಡೆಸುತ್ತಿರುವ ಸಿಜೆಪಿ…

*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  

ಜುಲೈ 25, 2026

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026

*ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*

ಜುಲೈ 24, 2026

ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ

ಜುಲೈ 24, 2026

*ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.