Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್‌ ಗೈಡ್ಸ್‌ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*
  • *ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ*
  • *ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*
  • *ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್‌ಇಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ*
  • *ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*
  • *ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*
  • *ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*
  • *ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*

ಜುಲೈ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಜು.25 NEWS DESK : “ನೀಟ್” ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಯುವ ಸಮೂಹ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ವಾಯ್ಸ್ ಆಫ್ ಯೂತ್ ಸಂಘಟನೆ ನಗರದಲ್ಲಿ ಪ್ರತಿಭಟನೆ ನಡೆಸಿತು. ನೀಟ್ ಪರೀಕ್ಷಾ ಪ್ರಕರಣದ ಹಿನ್ನೆಲೆ ವಾಟ್ಸ್ ಗ್ರೂಪ್ ಆಗಿ ವಾಯ್ಸ್ ಆಫ್ ಯೂತ್   ಗ್ರೂಪ್ ಅಸ್ತಿತ್ವಕ್ಕೆ ಬಂದಿದ್ದು, ಶನಿವಾರದಂದು ಇದರ ಸದಸ್ಯ ವಿದ್ಯಾರ್ಥಿಗಳು ಹಾಗೂ ಕೆಲ ಸಾರ್ವಜನಿಕರು ಮುಖಕ್ಕೆ “ಕೆಂಪು-ಕಪ್ಪು” ಬಣ್ಣವನ್ನು ಬಳಿದುಕೊಂಡು ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ಯುವ ಸಮೂಹ ಪ್ರಶ್ನಿಸುವ ಮನೋಭಾವÀವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಾಯ್ಸ್ ಆಫ್ ಯೂತ್‍ನ ಸದಸ್ಯೆ ಗೌರಿ ಮಂಡೀರ ಮಾತನಾಡಿ, ವಾಯ್ಸ್ ಆಫ್ ಯೂತ್ ಎನ್ನುವುದು ಯಾವುದೇ ರಾಜಕೀಯ ಪಕ್ಷವಲ್ಲ, ಶಿಕ್ಷಣ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಹರಡಿದ್ದು, ಇದು ಯುವ ಸಮೂಹವನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದರು. ಪ್ರಸ್ತುತ ಇರುವ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಇರಬೇಕೆಂಬುದು ಯುವ ಸಮೂಹದ ಬೇಡಿಕೆಯಾಗಿದೆಯೆಂದು ಸ್ಪಷ್ಟಪಡಿಸಿದರು. ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ನೀಟ್‍ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಸಮರ್ಪಕವಾಗಿ ನಡೆಯುತ್ತಿಲ್ಲವೆಂದು ತೀವ್ರ ಅಸಮಧಾನ ವ್ಯಕ್ತಪಡಿಸಿದ ಅವರು, ಪ್ರಸ್ತುತ ಶಿಕ್ಷಣ ವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮನಬಂದಂತೆ “ಕೋಚಿಂಗ್ ಸೆಂಟರ್”ಗಳು ತಲೆ ಎತ್ತುತ್ತಿರುವುದಾಗಿ ಬೇಸರ ವ್ಯಕ್ತಪಡಿಸಿ, ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ವಿದ್ಯಾರ್ಥಿಗಳ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸುವುದಾಗಿ ತಿಳಿಸಿದರು. ಕಪ್ಪು ಮತ್ತು ಕೆಂಪು… ಸಂಘಟನೆಯ ಸದಸ್ಯ ಪ್ರಸನ್ನ ಅವರು ಮಾತನಾಡಿ, ಇಂದಿನ ಹೋರಾಟದಲ್ಲಿ ವಿದ್ಯಾರ್ಥಿಗಳು ಮುಖಕ್ಕೆ ರಾಜಕಾರಣಿಗಳ ಜನವಿರೋಧಿ ನಿಲುವು, ಭ್ರಷ್ಟಾಚಾರಗಳ ಪ್ರತೀಕವಾಗಿ “ಕಪ್ಪು” ಬಣ್ಣವನ್ನು ಹಚ್ಚಿಕೊಂಡಿದ್ದೇವೆ. “ಕೆಂಪು” ಬಣ್ಣ ಮಕ್ಕಳ ರಕ್ತವನ್ನು ಪ್ರತಿನಿಧಿಸುತ್ತದೆ. ಯುವ ಸಮೂಹ ತನ್ನ ರಕ್ತ ಬಸಿದು ಶೈಕ್ಷಣಿಕ ಪ್ರಗತಿಗೆ ಶ್ರಮಿಸುವ ಹಂತದಲ್ಲಿ ಅದನ್ನೆ ಬಂಡವಾಳ ಮಾಡಿಕೊಂಡು ರಾಜಕಾರಣಿಗಳು ರಾಜಕೀಯ ಮಾಡುವುದನ್ನು ತೀವ್ರವಾಗಿ ವಿರೋಧಿಸುವ ನಿಟ್ಟಿನಲ್ಲಿ “ಕೆಂಪು” ಬಣ್ಣ ಬಳಿದುಕೊಂಡಿರುವುದಾಗಿ ಹೇಳಿದರು.  ಶಿಕ್ಷಣದಿಂದ ಪ್ರಗತಿ ಎನ್ನುವ ಘೋಷ ವಾಕ್ಯಗಳಿದೆಯಾದರು, ಪ್ರಸ್ತುತ ವ್ಯವಸ್ಥೆಯಡಿ ವಿದ್ಯಾವಂತ ಯುವ ಸಮುದಾಯಕ್ಕೆ ಅಗತ್ಯ ಉದ್ಯೋಗಾವಕಾಶಗಳು ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ವ್ಯವಸ್ಥೆ ಎಷ್ಟು ಸರಿ ಎಂದು ಕೇಳಿದ ಅವರು, ಸಮಾಜದಲ್ಲಿ ಕಂಡು ಬರುತ್ತಿರುವ ಇಂತಹ ಪರಿಸ್ಥಿತಿಗಳ ಬಗ್ಗೆ ಯುವ ಸಮೂಹ ಧ್ವನಿ ಎತ್ತಬೇಕು ಮತ್ತು ಪ್ರಶ್ನಿಸಬೇಕೆಂದು ಕರೆ ನೀಡಿದರು. ಹೋರಾಟ ಆರಂಭವಷ್ಟೆ- ಸಂಘಟನೆಯ ನಿತಿನ್ ಥೋಮಸ್ ಮಾತನಾಡಿ, ನಮ್ಮ ಹೋರಾಟ ಕೇವಲ ನೀಟ್‍ಗೆ ಮಾತ್ರ  ಸೀಮಿತವಾಗಿಲ್ಲ. ಸ್ಥಳೀಯ ಸಮಸ್ಯೆಗಳು ಜನರ ಮೂಲಭೂತ ವ್ಯವಸ್ಥೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ಪ್ರಶ್ನಿಸುತ್ತದೆ. ಜಿಲ್ಲಾ ಕೇಂದ್ರ ಮಡಿಕೇರಿಯ ಮಾರುಕಟ್ಟೆಯ ಅವ್ಯವಸ್ಥೆಗಳು, ಬೀದಿನಾಯಿಗಳ ಹಾವಳಿ, ಜಿಲ್ಲಾ ಆಸ್ಪತ್ರೆಯಲ್ಲಿ ಬಡ ಮಂದಿಗೆ ದೊರಕದ ಸೂಕ್ತ ಚಿಕಿತ್ಸೆಗಳ ಬಗ್ಗೆಯೂ ನಾವು ಪ್ರಶ್ನಿಸುತ್ತಿದ್ದೇವೆ. ಪ್ರಸ್ತುತ ಪ್ರಶ್ನಿಸುವ ಮನೋಭಾವವನ್ನು ನಾವು ಬೆಳೆಸಿಕೊಳ್ಳುವ ಅಗತ್ಯವಿದೆ. ಆ ಮೂಲಕ ನಮ್ಮ ಹಕ್ಕುಗಳನ್ನು, ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ಹೋರಾಟ ಕೇವಲ ಆರಂಭವಷ್ಟೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ವಿವಿಧೆಡೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್‌ ಗೈಡ್ಸ್‌ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*

ಜುಲೈ 25, 2026

*ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ*

ಜುಲೈ 25, 2026

*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 25, 2026

*ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ*

ಜುಲೈ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.25 NEWS DESK : ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು…

*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 25, 2026

*ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಜುಲೈ 25, 2026

*ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್‌ಇಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ*

ಜುಲೈ 25, 2026

*ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*

ಜುಲೈ 25, 2026

*ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*

ಜುಲೈ 25, 2026

*ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*

ಜುಲೈ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*

ಜುಲೈ 25, 2026

*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*

ಜುಲೈ 25, 2026

*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  

ಜುಲೈ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.