
ಮಡಿಕೇರಿ NEWS DESK ಜು.26 : ವಿರಾಜಪೇಟೆ ತಾಲ್ಲೂಕಿನ ಆನಂದಪುರ ಸಮೀಪದ ಕಾಫಿ ತೋಟವೊಂದರಲ್ಲಿ ಹೆಣ್ಣಾನೆಯ ಮೃತದೇಹ ಪತ್ತೆಯಾಗಿದೆ. ಆಹಾರ ಅರಸುತ್ತಾ ತೋಟಕ್ಕೆ ಲಗ್ಗೆ ಇಟ್ಟಿದ್ದ ಕಾಡಾನೆಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ತಾಯಿಯನ್ನು ಕಳೆದುಕೊಂಡ ಮರಿಯಾನೆ ಮೃತದೇಹದ ಬಳಿ ರೋಧಿಸುತ್ತಿದ್ದ ದೃಶ್ಯ ಕಂಡು ಬಂತು. ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ಮತ್ತು ಅಂತಿಮ ಸಂಸ್ಕಾರಕ್ಕೆ ಕ್ರಮ ಕೈಗೊಂಡರು.
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದರು.









