
ಮಡಿಕೇರಿ NEWS DESK ಜು.26 : ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ನಗರದ ಕೊಡಗು ವಿದ್ಯಾಲಯದ, ಎನ್ ಸಿಸಿ ಕೆಡೆಟ್‌ಗಳು ಫೀಲ್ಡ್ ಮಾರ್ಷಲ್ ಕೆ.ಎಂ.ಕಾಯ೯ಪ್ಪ ಪ್ರತಿಮೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಕೊಡಗು ವಿದ್ಯಾಲಯದ ಎನ್.ಸಿ.ಸಿ. ಕೆಡೆಟ್‌ಗಳು ಪ್ರತಿಮೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಶಾಲೆಯ ಪ್ರಾಂಶುಪಾಲರಾದ ಕೆ. ಎಸ್. ಸುಮಿತ್ರಾ ಮಾತನಾಡಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರನ್ನು ಸ್ಮರಿಸುವುದು ಮತ್ತು ನಾಗರಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮುಖ್ಯವೆಂದು ಹೇಳಿದರು.









