
ವಿರಾಜಪೇಟೆ ಜು.27 NEWS DESK : ಮೂಲತಃ ವಿ.ಬಾಡಗ ಗ್ರಾಮದ ನಿವಾಸಿಯೂ ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಮಳವಂಡ ಆಶಿಕ ಪೃಥ್ವಿ ಹಾಗೂ ಅವರ ಸ್ನೇಹಿತರು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೆರವಾಗುವ ನಿಟ್ಟಿನಲ್ಲಿ ಈ ಸಾಮಾಜಿಕ ಸೇವೆಯನ್ನು ಕೈಗೊಂಡ ಮಳವಂಡ ಆಶಿಕ ಪೃಥ್ವಿ ಮತ್ತು ಅವರ ಮಿತ್ರವೃಂದಕ್ಕೆ ಶಾಲೆಯ ಶಿಕ್ಷಕ ವೃಂದ, ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಶ್ಲಾಘನೆ ವ್ಯಕ್ತಪಡಿಸಿದರು.









