Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*
  • *ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್
  • *ಮಡಿಕೇರಿಯಲ್ಲಿ ಸಿಬಿಎಸ್‌ಇ ಅಂತರಶಾಲಾ ಪೋಸ್ಟರ್ ರಚನಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*
  • *ಕೂತಿ ಗ್ರಾಮದ ತಮ್ಮೇಗೌಡ ಗೌರಮ್ಮ ಸೌಹಾರ್ದ ಟ್ರಸ್ಟ್‌ನ ವಾರ್ಷಿಕ ಸಭೆ*
  • *ನೇರುಗಳಲೆ : ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ*
  • *ಸೋಮವಾರಪೇಟೆಯಲ್ಲಿ ಛತ್ರಪತಿ ಶಾಹು ಮಹಾರಾಜ ಜಯಂತಿ*
  • *ಆ.22ಕ್ಕೆ ಗುಂಡೂರಾಯರ ಪ್ರತಿಮೆ ಸ್ಥಾಪನೆ : ಕುಶಾಲನಗರ ಪುರಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಚರ್ಚೆ*
  • *ಕುಶಾಲನಗರ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಜೇಷ ಪೂಜೆ*
  • ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ಗೌರವಯುತವಾಗಿ ಬದಕಲು ಸಾಧ್ಯ : ಡಾ.ಜಮೀರ್ ಅಹಮದ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*

ಜುಲೈ 30, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.30 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಸಭೆ ನಡೆಯಿತು. ಗೃಹಲಕ್ಷ್ಮಿ ಯೋಜನೆ: ಶಿಶುಅಭಿವೃದ್ದಿ ಇಲಾಖೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮೇ ಮಾಹೆಯಲ್ಲಿ 1,05,392 ಫಲಾನುಭವಿಗಳಿಗೆ ಒಟ್ಟುರೂ. 2,10,78,400 ಹಣ ಬಿಡುಗಡೆಯಾಗಿದ್ದು ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಧನಸಹಾಯದ ಮೊತ್ತವನ್ನು ಬ್ಯಾಂಕ್ ಖಾತೆಯಿಂದ ಸರ್ಕಾರದ ಖಾತೆಗೆ ಜಮೆ ಮಾಡುವ ಕುರಿತು ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 10.07.2026 ರಂದು ಬಿಎಲ್‍ಬಿಸಿ ಸಭೆ ಏರ್ಪಡಿಸಲಾಯಿತು.
ಸಭೆಯಲ್ಲಿ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 711 ಗೃಹಲಕ್ಷ್ಮಿ ಫಲಾನುಭವಿಗಳು ಮರಣ ಹೊಂದಿರುವ ಮಾಹಿತಿ ಲಭ್ಯವಾಗಿದ್ದು, ಲೀಡ್ ಬ್ಯಾಂಕ್ ಮ್ಯಾನೇಜರ್ ಅವರು ಪ್ರತಿ ಮರಣ ಫಲಾನುಭವಿಯ ಬ್ಯಾಂಕ್ ಖಾತೆಯ ಐಎಫ್‍ಎಸ್‍ಸಿ ಕೋಡ್ ನೀಡುವಂತೆ ತಿಳಿಸಿದರು. ಅದರಂತೆ ಆಹಾರ ಶಾಖೆಯವರಿಗೆ ಪತ್ರ ಮುಖೇನ ಗ್ರಾಮವಾರು ಮಾಹಿತಿ ಕೇಳಿದ್ದು,ಮಾಹಿತಿ ಪಡೆದ ನಂತರ ಐಎಫ್‍ಎಸ್‍ಸಿ ಕೋಡ್ ಮಹಿತಿಯನ್ನು ಕಲೆ ಹಾಕಿ ಲೀಡ್ ಬ್ಯಾಂಕ್ ಇವರಿಗೆ ಮುಂದಿನ ಕ್ರಮಕ್ಕಾಗಿ ಮಾಹಿತಿ ನೀಡಲಾಗುವುದು ಹಾಗೂ ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತಿಗಳಿಂದ ಮರಣ ದೃಢೀಕರಣ ವಿತರಿಸುವ ಬಗ್ಗೆ ಪ್ರತಿ ತಿಂಗಳು ಮಾಹಿತಿ ಪಡೆದು ಪರಿಶೀಲಿಸಿ ಗೃಹಲಕ್ಷ್ಮಿ ಫಲಾನುಭವಿ ಮರಣ ಹೊಂದಿದ್ದರೆ ಇವರ ಮರಣ ದೃಢಿಕರಣ ಪತ್ರ, ಆಧಾರ್ ಕಾರ್ಡ್ ಪಡೆದುಕೊಂಡು ಮರಣ ಹೊಂದಿದವರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುವುದನ್ನು ಸ್ಧಗಿತಗೊಳಿಸಿ, ಈ ಕುಟುಂಬದ ಅರ್ಹ ಮಹಿಳಾ ಸದಸ್ಯರು ಇದ್ದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಕ್ರಮವಹಿಸುವಂತೆ ತಿಳಿಸಿದ್ದು ಅದರಂತೆ ಗೂಗಲ್ ಶೀಟ್ ರಚಿಸಿದ್ದು ಪ್ರತಿ ಗ್ರಾಮ ಪಂಚಾಯತಿಯವರಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಅರ್ಜಿ ಮರುಪರಿಶೀಲನೆ ಮಾಡುವ ಸಂಬಂಧ ಮಾಸ್ಟರ್ ಟ್ರೈನರ್ ಗಳಿಗೆ ತರಬೇತಿ ನೀಡಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮನೆಗೆ ತೆರಳಿ ಪೇಸ್ ಕ್ಯಾಪ್ಚರ್ ಮಾಡುವ ಮುಖಾಂತರ ಮರುಪರಿಶೀಲನೆ ಮಾಡಲು ಪ್ರಧಾನ ಕಚೇರಿಯಿಂದ ನಿರ್ದೇಶನ ನೀಡಿರುವ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಅಧ್ಯಕ್ಷರು ಮಾತನಾಡಿ ಗೃಹಲಕ್ಷ್ಮಿ ಯೋಜನೆಗೆ 03 ವರ್ಷ ತುಂಬಿರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡುವಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವರಿಂದ ಪತ್ರ ಬಂದಿದ್ದು, ಅದರಂತೆ ಮಡಿಕೇರಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ ಗಿಡನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಮವಹಿಸುವಂತೆ ಸಭೆಯಲ್ಲಿ ತಿಳಿಸಿದರು. ಶಕ್ತಿ ಯೋಜನೆ: ಶಕ್ತಿ ಯೋಜನೆಯಲ್ಲಿ ಒಟ್ಟು 1,85,14,504 ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು 4,54,103 ಹೆಣ್ಣು ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿ ಸದರಿ ಯೋಜನೆ ಪಡೆದುಕೊಂಡಿದ್ದಾರೆ, ಸರಾಸರಿ 16,747 ಪ್ರಯಾಣಿಕರು ಒಂದು ದಿನಕ್ಕೆ ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿದ್ದು ಶಕ್ತಿ ಯೋಜನೆಯಿಂದ 21/07/2026 ರ ವರೆಗೆ ಒಟ್ಟು 81,68,82,131 ರೂ. ಸಂಸ್ಥೆಗೆ ಆದಾಯ ಬಂದಿರುತ್ತದೆ ಎಂದು ಇಲಾಖೆಯ ಸಿಬ್ಬಂದಿಯವರು ಸಭೆಗೆ ಮಾಹಿತಿ ನೀಡಿದರು. ಯುವನಿಧಿ: ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ 2024,2025 ಮತ್ತು 2026 ರಲ್ಲಿ ಪದವಿ ಮತ್ತು ಡಿಪೆÇ್ಲೀಮಾ ಉತ್ತೀರ್ಣರಾಗಿ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಅಲ್ಲದೆ ಈ ಯೋಜನೆಯ ಪ್ರಯೋಜನ ಮುಂದುವರಿಸಬೇಕಿದ್ದಲ್ಲಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ಘೋಷಣೆ ಮಾಡಬೇಕು, ನಿರುದ್ಯೋಗಿಗಳು ಸ್ವಯಂ ದೃಢೀಕರಣ ನೀಡಿದ್ದಲ್ಲಿ ಮಾತ್ರ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಇಲಾಖಾ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು ಮತ್ತು ಜೂನ್ ಮಾಹೆಯವರೆಗೆ ಒಟ್ಟು 639 ಜನ ನೋಂದಣಿಯಾಗಿದ್ದು, ಒಟ್ಟು 1,59,49,500 ರೂ.ಡಿಬಿಟಿ ಯಾಗಿರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು. ಗೃಹಜ್ಯೋತಿ ಯೋಜನೆ: ಇಲಾಖಾಧಿಕಾರಿ ಅವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ 52713 ಅರ್ಹ ವಿದ್ಯುತ್ ಸ್ಥಾವರಗಳಿದ್ದು, ಗೃಹಜ್ಯೋತಿ ಯೋಜನೆಯಡಿ 52121 ನೋಂದಣಿಗೊಂಡ ಅರ್ಜಿಗಳಾಗಿದ್ದು, 592 ಸ್ಥಾವರಗಳು ಬಾಕಿ ಇದ್ದು, ಶೇ. 98.88 ಶೇಕಡವಾರು ಪ್ರಗತಿಯಾಗಿದ್ದು ಮೇ-2026 ಹಾಗೂ ಜೂನ್-2026 ಮಾಹೆಗಳಲ್ಲಿ 1310 ಸ್ಥಾವರಗಳು ಹೊಸದಾಗಿ ಸಂಪರ್ಕಗೊಂಡಿದ್ದು, ಮಾಸಾಂತ್ಯದೊಳಗಾಗಿ ಗೃಹಜ್ಯೋತಿ ಯೋಜನೆಯಡಿ ನೋಂದಾಯಿಸಲ್ಪಡುತ್ತದೆ ಹಾಗೂ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ 17,250 ಫಲಾನುಭವಿಗಳ ಪುನರ್ ಪರಿಶೀಲನೆ ಮುಗಿದಿದ್ದು, ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ ಮಾಡಲು ಪ್ರತಿ ಮನೆಗೂ ಮೀಟರ್ ರೀಡರ್ ಗಳು ಹಾಗೂ ಲೈನ್‍ಮ್ಯಾನ್ ಗಳು ಭೇಟಿ ನೀಡುತ್ತಿರುವ ಬಗ್ಗೆ ಹಾಗೂ ಮಳೆಯಿಂದ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ 599 ಕಂಬಗಳು ಹಾನಿಗೊಂಡಿದ್ದು ಈ ಕಂಬಗಳನ್ನು ಬದಲಾಯಿಸಿ ಹೊಸ ಕಂಬಗಳನ್ನು ಹಾಕಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಸದಸ್ಯರಾದ ಪ್ರಭು ರೈ ಅವರು ಮಾತನಾಡಿ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಗೃಹಜ್ಯೋತಿ ಮರುಪರಿಶೀಲನೆಯ ಪ್ರಗತಿ ಕುಂಠಿತವಾಗಿದ್ದು ಪ್ರಗತಿ ಸಾಧಿಸುವಂತೆ ಹಾಗೂ ಮಡಿಕೇರಿ ನಗರದ ಕೋಟೆ ರಸ್ತೆಯಲ್ಲಿ, ರಾಜರಾಜೇಶ್ವರಿ ಶಾಲೆ ಸಮೀಪ ಹಾಗೂ ಹೊಸ ತಹಶೀಲ್ದಾರರ ಕಚೇರಿ ಬಳಿ ಹಳೆ ಕಂಬಗಳನ್ನು ತೆರವುಗೊಳಿಸಿ ರಸ್ತೆ ಬದಿ ಹಾಕಲಾಗಿದ್ದು ಈ ಕಂಬಗಳನ್ನು ತೆರವುಗೊಳಿಸುವಂತೆ ತಿಳಿಸಿದರು. ಅನ್ನಭಾಗ್ಯ ಯೋಜನೆ: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38,226 ಪಡಿತರ ಚೀಟಿ ಇದ್ದು 1,21,005 ಒಟ್ಟು ಫಲಾನುಭವಿಗಳಿರುತ್ತಾರೆ ಅದರಲ್ಲಿ 1893 ಎಎವೈ ಪಡಿತರ ಚೀಟಿ ಇದ್ದು 7543 ಎಎವೈ ಫಲಾನುಭವಿಗಳು ಇರುತ್ತಾರೆ, 21,847 ಪಿ.ಹೆಚ್ ಹೆಚ್ ಪಡಿತರ ಚೀಟಿ ಇದ್ದು 70,932 ಫಲಾನುಭವಿಗಳು, 14,486 ಎನ್‍ಪಿಹೆಚ್‍ಹೆಚ್ ಪಡಿತರ ಚೀಟಿ ಇದ್ದು 42,530 ಫಲಾನುಭವಿಗಳಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಪತ್ತೆ ಹಚ್ಚಿರುವ ಅನರ್ಹ ಫಲಾನುಭವಿಗಳ ಸಂಖ್ಯೆ 1388 ಆಗಿದೆ ಹಾಗೂ ಪ್ರಸ್ತುತ ಆಹಾರ ಇಲಾಖೆಯಲ್ಲಿ ಹೊಸಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವುದನ್ನು ಸ್ಥಗಿತಗೊಳಿಸಲಾಗಿದ್ದು, ಆಸ್ಷತ್ರೆ ಚಿಕಿತ್ಸೆಗಾಗಿ ಹೊಸಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ಸದಸ್ಯರ ಹೆಸರು ಸೇರ್ಪಡೆ ಮಾಡುವ/ ವರ್ಗಾವಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಮುಂದುವರೆದು ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೊಂದಿರುವ ಬಿ.ಪಿ.ಎಲ್ ಪಡಿತರ ಚೀಟಿಗೆ ಪರಿಶಿಷ್ಟರ ಜಾತಿ ಪ್ರಮಾಣ ಪತ್ರವನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಜಾತಿ ಪ್ರಮಾಣ ಪತ್ರ ಮ್ಯಾಂಪಿಂಗ್ ಮಾಡುವುದಕ್ಕೆ ಹಾಗೂ ಅನ್ನಭಾಗ್ಯ ಯೋಜನೆಗೆ ಯಾವುದೇ ರೀತಿಯ ಸಂಬಂಧವಿರುವುದಿಲ್ಲ, ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ಇದರ ಬಗ್ಗೆ ಗೊಂದಲಕ್ಕೀಡಾಗುವ ಅವಶ್ಯತೆ ಇಲ್ಲ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.


Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 30, 2026

ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್

ಜುಲೈ 30, 2026

*ಮಡಿಕೇರಿಯಲ್ಲಿ ಸಿಬಿಎಸ್‌ಇ ಅಂತರಶಾಲಾ ಪೋಸ್ಟರ್ ರಚನಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*

ಜುಲೈ 30, 2026

*ಎಸ್‍ಐಆರ್ ಪ್ರಕ್ರಿಯೆ : ಕೊಡಗಿನಲ್ಲಿ ಶೇ.86 ರಷ್ಟು ಡಿಜಿಟಲೀಕರಣ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.30 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್‍ಐಆರ್) ಡಿಜಿಟಲೀಕರಣವು ಜಿಲ್ಲೆಯಲ್ಲಿ ಶೇ.86 ರಷ್ಟು ಪೂರ್ಣಗೊಂಡಿದೆ…

ವಿರಾಜಪೇಟೆ : ಪರಿಸರ ಸ್ವಚ್ಛತೆಯ ಪರಿಪಾಠ ಮನೆಗಳಿಂದಲೇ ಆರಂಭವಾಗಬೇಕು: ತಹಶೀಲ್ದಾರ್ ಪ್ರವೀಣ್ ಕುಮಾರ್

ಜುಲೈ 30, 2026

*ಮಡಿಕೇರಿಯಲ್ಲಿ ಸಿಬಿಎಸ್‌ಇ ಅಂತರಶಾಲಾ ಪೋಸ್ಟರ್ ರಚನಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*

ಜುಲೈ 30, 2026

*ಕೂತಿ ಗ್ರಾಮದ ತಮ್ಮೇಗೌಡ ಗೌರಮ್ಮ ಸೌಹಾರ್ದ ಟ್ರಸ್ಟ್‌ನ ವಾರ್ಷಿಕ ಸಭೆ*

ಜುಲೈ 30, 2026

*ನೇರುಗಳಲೆ : ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ*

ಜುಲೈ 30, 2026

*ಸೋಮವಾರಪೇಟೆಯಲ್ಲಿ ಛತ್ರಪತಿ ಶಾಹು ಮಹಾರಾಜ ಜಯಂತಿ*

ಜುಲೈ 30, 2026

*ಆ.22ಕ್ಕೆ ಗುಂಡೂರಾಯರ ಪ್ರತಿಮೆ ಸ್ಥಾಪನೆ : ಕುಶಾಲನಗರ ಪುರಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಚರ್ಚೆ*

ಜುಲೈ 30, 2026

*ಕುಶಾಲನಗರ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಜೇಷ ಪೂಜೆ*

ಜುಲೈ 30, 2026

ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ಗೌರವಯುತವಾಗಿ ಬದಕಲು ಸಾಧ್ಯ : ಡಾ.ಜಮೀರ್ ಅಹಮದ್*

ಜುಲೈ 30, 2026

*ಕಾವೇರಿ ಉಳಿಯಬೇಕಾದರೆ ಮೊದಲು ಕೊಡಗು ಉಳಿಯಬೇಕು*

ಜುಲೈ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.