
ಮಡಿಕೇರಿ ಜು.31 NEWS DESK : 2026ನೇ ಸಾಲಿನ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಆಗಸ್ಟ್, 3 ರಿಂದ 5 ರವರೆಗೆ ಮಡಿಕೇರಿಯ ಶ್ರೀನಿಕೇತನದಲ್ಲಿರುವ ಶ್ರೀ ಸದ್ಗುರು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರಿದಂತೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್ಗಳನ್ನು ಮುಚ್ಚಿಸುವಂತೆ ಸಹ ತಿಳಿಸಿದೆ. ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.









