Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು : ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*
  • *ಕೊಡಗಿನ ವಿವಿಧೆಡೆ ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ*
  • *ಪೊನ್ನಂಪೇಟೆಯಲ್ಲಿ ಗಮನ ಸೆಳೆದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ*
  • *ವಿರಾಜಪೇಟೆ : ಪೊಲೀಸ್ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ*
  • *ಮಡಿಕೇರಿಯಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ*
  • *ಕುಟ್ಟ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ*
  • *ಯುವಜನತೆ ಕೃಷಿಯತ್ತ ಹೆಚ್ಚು ಗಮನ ಹರಿಸಲಿ : ಹೆಚ್.ವಿ.ರಾಮದಾಸ್ *
  • *ಕಾರ್ಮಿಕರ ಪರಿಹಾರ ವಿಚಾರದಲ್ಲಿ ರಾಜಕೀಯ ಸಲ್ಲದು : ಯೂನೈಟೆಡ್ ಪ್ಲಾಂಟೇಶನ್ ವರ್ಕರ್ಸ್ ಯೂನಿಯನ್ ಖಂಡನೆ*
  • *ಆ.5 ರಂದು ಕೊಡಗು ಡೆಕೊರೇಷನ್, ಶಾಮಿಯಾನ, ಲೈಟಿಂಗ್ಸ್ ಮಾಲೀಕರ ಸಂಘದ ಉದ್ಘಾಟನೆ*  
  • *ಸಚಿವ ಸ್ಥಾನ ಸಿಗದೆ ಕೊಡಗು ಜಿಲ್ಲೆಗೆ ಅನ್ಯಾಯವಾಗಿದೆ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಬೇಸರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ವಿವಿಧೆಡೆ ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ವಿವಿಧೆಡೆ ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ*

ಆಗಷ್ಟ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.4 : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಿಂದೂ ಜಾಗರಣ ವೇದಿಕೆ ವತಿಯಿಂದ ಕೊಡಗಿನ ಏಳು ಕಡೆಗಳಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಭಾಗವಾಗಿ ಸಭಾ ಕಾರ್ಯಕ್ರಮ, ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥವನ್ನು ಆಯೋಜಿಸಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಭೋಜೇಗೌಡ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಆ.7ರಂದು ಸಂಜೆ 6 ಗಂಟೆಗೆ ನಗರದ ಕುಂದುರುಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸುವುದರ ಮೂಲಕ ಪಂಜಿನ ಮೆರವಣಿಗೆ ಆರಂಭಗೊಳ್ಳಲಿದೆ. ಸಂಜೆ 7 ಗಂಟೆಗೆ ಕಾವೇರಿ ಹಾಲ್‌ನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ಆ.8ರಂದು ಸಂಜೆ 6 ಗಂಟೆಗೆ ಮಾದಾಪುರದ ಇಗ್ಗೋಡ್ಲು ಶ್ರೀ ಚಾಮುಂಡೇಶ್ವರಿ ದೇವಾಲಯದಿಂದ ಪಂಜಿನ ಮೆರವಣಿಗೆ ಆರಂಭವಾಗಿ ಎಫ್‌ಎಂಸಿ ರಸ್ತೆಯ ಮೂಲಕ ಶ್ರೀಗಣಪತಿ ದೇವಾಲಯದವರೆಗೆ ಸಾಗಲಿದೆ. 7.30ಗಂಟೆಗೆೆ ಸಭಾ ಕಾರ್ಯಕ್ರಮ ನಡೆಯಲಿದೆ. ಕೊಡ್ಲಿಪೇಟೆಯಲ್ಲಿ ಆ.9 ರಂದು ಸಂಜೆ 6 ಗಂಟೆಗೆ ಆರ್‌ಎಂಸಿ ಮಾರುಕಟ್ಟೆ ಸಮೀಪದ ಶ್ರೀ ಗಣಪತಿ ದೇವಸ್ಥಾನದಿಂದ ಪಂಜಿನ ಮೆರವಣಿಗೆ ಆರಂಭಗೊoಡು ಮುಖ್ಯ ರಸ್ತೆಗಳಲ್ಲಿ ಸಂಚರಿಸಲಿದೆ. ಸಂಜೆ 7.30ಗಂಟೆಗೆ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪೊನ್ನಂಪೇಟೆಯಲ್ಲಿ ಆ.10ರಂದು ಬೆಳಿಗ್ಗೆ 10 ಗಂಟೆಗೆ ಗೋಣಿಕೊಪ್ಪ ಆರ್.ಎಂ.ಸಿ. ಆವರಣದಿಂದ ಖಾಸಗಿ ಬಸ್ ನಿಲ್ದಾಣದ ಮೂಲಕ ಬೈಪಾಸ್ ರಸ್ತೆಗಾಗಿ ಪೊನ್ನಂಪೇಟೆ ಕೊಡವ ಸಮಾಜದವರೆಗೆ ವಾಹನ ಜಾಥಾ ಸಾಗಲಿದೆ. ಸಭಾ ಕಾರ್ಯಕ್ರಮ ಬೆಳಗ್ಗೆ 11.30 ಗಂಟೆಗೆ ನಡೆಯಲಿದೆ. ಅಖಂಡ ಭಾರತದ ಸಂಕಲ್ಪ ದಿನದ ಪಂಜಿನ ಮೆರವಣಿಗೆ ವಿರಾಜಪೇಟೆಯಲ್ಲಿ ಆ.12ರಂದು ಸಂಜೆ 6 ಗಂಟೆಗೆ ತೆಲುಗರ ಬೀದಿ ಮಾರಿಯಮ್ಮ ದೇವಾಲಯದಿಂದ ಆರಂಭಗೊoಡು ನಗರದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ನಗರದ ಮಹಿಳಾ ಸಮಾಜದಲ್ಲಿ ಸಂಜೆ 7.30 ಗಂಟೆಗೆ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕುಶಾಲನಗರದಲ್ಲಿ ಆ.14ರಂದು ಸಂಜೆ 6 ಗಂಟೆಗೆ ಬೈಚನಹಳ್ಳಿ ಶ್ರೀಮಾರಿಯಮ್ಮ ದೇವಾಲಯದಿಂದ ಪಂಜಿನ ಮೆರವಣಿಗೆ ಆರಂಭಗೊoಡು ನಗರ ವ್ಯಾಪ್ತಿಯಲ್ಲಿ ಸಂಚರಿಸಲಿದೆ. ರೈತಭವನದಲ್ಲಿ ಸಭಾ ಕಾರ್ಯಕ್ರಮ ಸಂಜೆ 7.30 ಗಂಟೆಗೆ ನಡೆಯಲಿದೆ ಎಂದು ಭೋಜೇಗೌಡ ತಿಳಿಸಿದರು. *ಒಪ್ಪಿಗೆಗೆ ತೊಡಕು* ಸ್ವಾತಂತ್ರ್ಯೋತ್ಸವ  ಸಂದರ್ಭ ನಡೆಸುವ ಕಾರ್ಯಕ್ರಮಗಳಿಗೆ ಸಂಬoಧಿಸಿದoತೆ ಪೊಲೀಸ್ ಇಲಾಖೆಯಿಂದ ಅನುಮತಿ ಪತ್ರ ಪಡೆದುಕೊಳ್ಳಲು ವಿವಿಧ ಇಲಾಖೆಗಳ ಸಮ್ಮತಿ ಪತ್ರ ಕೇಳಲಾಗುತ್ತಿದೆ ಮತ್ತು 3 ಲಕ್ಷ ರೂ.ಗಳ ಬಾಂಡ್ ಪಡೆಯಲಾಗುತ್ತಿದೆ ಎಂದು ಆರೋಪಿಸಿದ ಅವರು ಇಂತಹ ಕ್ರಮಗಳನ್ನು ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕ ಶರತ್ ಪೆಮ್ಮಯ್ಯ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಎಲ್.ಹರೀಶ್, ಶಾಂತೆಯoಡ ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕು ಸಂಯೋಜಕ ಬಿ.ಬಿ.ಸಜೀವ್ ಹಾಗೂ ಮಡಿಕೇರಿ ತಾಲ್ಲೂಕು ಸಂಯೋಜಕ ಅಪ್ಪು ಬಾಲಕೃಷ್ಣ ರೈ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು : ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*

ಆಗಷ್ಟ್ 4, 2026

*ಪೊನ್ನಂಪೇಟೆಯಲ್ಲಿ ಗಮನ ಸೆಳೆದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 3, 2026

*ವಿರಾಜಪೇಟೆ : ಪೊಲೀಸ್ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ*

ಆಗಷ್ಟ್ 3, 2026

*ಕೊಡಗಿನ ವಿವಿಧೆಡೆ ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ*

ಆಗಷ್ಟ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.4 : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಿಂದೂ ಜಾಗರಣ ವೇದಿಕೆ ವತಿಯಿಂದ ಕೊಡಗಿನ ಏಳು ಕಡೆಗಳಲ್ಲಿ ಅಖಂಡ ಭಾರತ…

*ಪೊನ್ನಂಪೇಟೆಯಲ್ಲಿ ಗಮನ ಸೆಳೆದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 3, 2026

*ವಿರಾಜಪೇಟೆ : ಪೊಲೀಸ್ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ*

ಆಗಷ್ಟ್ 3, 2026

*ಮಡಿಕೇರಿಯಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ*

ಆಗಷ್ಟ್ 3, 2026

*ಕುಟ್ಟ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ*

ಆಗಷ್ಟ್ 3, 2026

*ಯುವಜನತೆ ಕೃಷಿಯತ್ತ ಹೆಚ್ಚು ಗಮನ ಹರಿಸಲಿ : ಹೆಚ್.ವಿ.ರಾಮದಾಸ್ *

ಆಗಷ್ಟ್ 3, 2026

*ಕಾರ್ಮಿಕರ ಪರಿಹಾರ ವಿಚಾರದಲ್ಲಿ ರಾಜಕೀಯ ಸಲ್ಲದು : ಯೂನೈಟೆಡ್ ಪ್ಲಾಂಟೇಶನ್ ವರ್ಕರ್ಸ್ ಯೂನಿಯನ್ ಖಂಡನೆ*

ಆಗಷ್ಟ್ 3, 2026

*ಆ.5 ರಂದು ಕೊಡಗು ಡೆಕೊರೇಷನ್, ಶಾಮಿಯಾನ, ಲೈಟಿಂಗ್ಸ್ ಮಾಲೀಕರ ಸಂಘದ ಉದ್ಘಾಟನೆ*  

ಆಗಷ್ಟ್ 3, 2026

*ಸಚಿವ ಸ್ಥಾನ ಸಿಗದೆ ಕೊಡಗು ಜಿಲ್ಲೆಗೆ ಅನ್ಯಾಯವಾಗಿದೆ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಬೇಸರ*

ಆಗಷ್ಟ್ 3, 2026

*ರೋಟರಿ ಮಡಿಕೇರಿಯಲ್ಲಿ ವೈದ್ಯರ ದಿನ ಹಾಗೂ ಚಾರ್ಟರ್ಡ್ ಅಕೌಂಟೆಂಟ್ಸ್ ದಿನದ ಅರ್ಥಪೂರ್ಣ ಆಚರಣೆ*

ಆಗಷ್ಟ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.