Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*
  • *ಮಾದರಿ ದಾನಿಗಳು: ಕಡಿಯತ್ತೂರು ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಕಾಶ್ ರೈ ದಂಪತಿಯಿಂದ ರೂ.12.78 ಲಕ್ಷ ನೆರವು*
  • *ಅ.11ರಿಂದ 20ರವರೆಗೆ ಮಡಿಕೇರಿ ದಸರಾ ಕ್ರೀಡಾಕೂಟ; ರಾಜ್ಯ ಮಟ್ಟದ ಹೋರಿ ಪ್ರದರ್ಶನ ಈ ಬಾರಿಯ ವಿಶೇಷ*
  • *ಮಡಿಕೇರಿ, ಗೋಣಿಕೊಪ್ಪ ದಸರಾ: ನಿಯಮ ಪಾಲಿಸಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
  • *ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*
  • *ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*
  • *ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*
  • *ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*
  • *ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರ್ಥವತ್ತಾಗಿ ನಡೆದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ‘ಕಕ್ಕಡ ನಮ್ಮೆ’*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರ್ಥವತ್ತಾಗಿ ನಡೆದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ‘ಕಕ್ಕಡ ನಮ್ಮೆ’*

ಆಗಷ್ಟ್ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಆ.9 : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ವತಿಯಿಂದ 17ನೇ ವರ್ಷದ ‘ಕಕ್ಕಡ ನಮ್ಮೆ’ ಅರ್ಥವತ್ತಾಗಿ ನಡೆಯಿತು. ವಿರಾಜಪೇಟೆಯ ಅಖಿಲ ಕೊಡವ ಸಮಾಜದಲ್ಲಿ ಸಂಭ್ರಮದಿಂದ ನಡೆದ ‘ಕಕ್ಕಡ ನಮ್ಮೆ’ ಯಲ್ಲಿ ಪರಿಷತ್ ನ ಆಡಳಿತ ಮಂಡಳಿಯ ಪದಾಧಿಕಾರಿಗಳು ತಯಾರಿಸಿದ್ದ ‘ಕಕ್ಕಡ ಖಾದ್ಯ’ ಗಳೊಂದಿಗೆ ಭೋಜನ ಸವಿದು ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ಇದಕ್ಕೂ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ಅಧ್ಯಕ್ಷೆ ಐಚಂಡ ರಶ್ಮಿ ಮೇದಪ್ಪ ಅವರು ಅಳಿವಿನಂಚಿನಲ್ಲಿರುವ ಕೊಡವ ಭಾಷೆಯನ್ನು ಉಳಿಸಲು ಹೆಚ್ಚು ಅಧ್ಯಯನ ಪುಸ್ತಕಗಳು ರಚನೆಯಾಗಬೇಕು ಮತ್ತು ಕೊಡವರು ಕೊಡವ ಸಾಹಿತ್ಯದ ಬಗ್ಗೆ ಆಸಕ್ತಿ ತೋರಿ ಪುಸ್ತಕ ರಚನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಯಾವುದೇ ಭಾಷೆ ಬೆಳೆಯಬೇಕಾದರೆ ಆ ಭಾಷೆಯ ಸಾಹಿತ್ಯ ಹಾಗೂ ಅಧ್ಯಯನ ಕೃತಿಗಳ ಕೊಡುಗೆ ಮಹತ್ವದ್ದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕೊಡವ ಭಾಷೆಗೆ ಆದ್ಯತೆ ನೀಡುವ ಉದ್ದೇಶದಿಂದ ಕೊಡವ ಭಾಷೆಯ ಮತ್ತು ಕೊಡಗಿಗೆ ಸಂಬಂಧಿಸಿದ ಎಲ್ಲಾ ಪುಸ್ತಕಗಳನ್ನು ಒಂದೇ ಸೂರಿನಡಿ ಸಿಗುವಂತೆ ಮಾಡುವ ಉದ್ದೇಶವನ್ನು ಪೊಮ್ಮಕ್ಕಡ ಪರಿಷತ್ ಹೊಂದಿದೆ. ಕೊಡವ ಸಾಹಿತ್ಯ ಅಕಾಡೆಮಿ ನಡೆಸುತ್ತಿರುವ ಪುಸ್ತಕ ಪತ್ತಾಯ ಕಾರ್ಯಕ್ರಮದ ಜೊತೆಗೆ ಕೊಡಗಿನ ಬೇರೆ ಬೇರೆ ಲೇಖಕರು ಬರೆದ ಪುಸ್ತಕಗಳನ್ನು ಒಳಗೊಂಡ ಪತ್ತಾಯವನ್ನು ತುಂಬುವ ಕಾರ್ಯಕ್ರಮವನ್ನು ಇದೇ ಸಂದರ್ಭ ಪರಿಷತ್ ನಿಂದ ಹಮ್ಮಿಕೊಳ್ಳಲಾಯಿತು. ಕೊಡಗು ಎಜುಕೇಷನ್ ಸೋಷಿಯಲ್ ಸರ್ವಿಸ್ ಟ್ರಸ್ಟ್ ಪುಸ್ತಕ ಪತ್ತಾಯಕ್ಕೆ ದಾನಿಗಳಾಗಿ ಪೊಮ್ಮಕ್ಕಡ ಪರಿಷತ್ ಗೆ ಸಹಕಾರ ನೀಡಿದೆ. ಕೊಡಗಿನಲ್ಲಿರುವ ಹಲವು ಲೇಖಕರ ಅಧ್ಯಯನ ಪುಸ್ತಕ ಮತ್ತಿತರ ಪುಸ್ತಕಗಳನ್ನು ತೆಗೆದುಕೊಳ್ಳಲು ಕೂಡ ಸಹಕರಿಸಿದೆ. ಜ್ಞಾನ ಭಂಡಾರವಾದ ಪುಸ್ತಕ ಪತ್ತಾಯಕ್ಕೆ ಹಲವು ಸಾಹಿತಿಗಳು ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ್ದಾರೆೆ. ಮುಂದಿನ ದಿನಗಳಲ್ಲಿ ಪುಸ್ತಕಗಳನ್ನು ನೀಡುವವರು ಯಾವ ರೀತಿಯಲ್ಲಿ ಬೇಕಾದರು ನೀಡಬಹುದೆಂದು ತಿಳಿಸಿದರು. ಪುಸ್ತಕ ಪತ್ತಾಯವನ್ನು ಉದ್ಘಾಟಿಸಿ ಮಾತನಾಡಿದ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮಹೇಶ್ ನಾಚಯ್ಯ ಅವರು ಪ್ರಕೃತಿಯೊಂದಿಗೆ ಬೆರೆತಿರುವ ಕೊಡವ ಸಂಸ್ಕೃತಿ, ಆಚಾರ, ವಿಚಾರ ಮತ್ತು ಕೊಡವರ ಅತಿಥಿ ಸತ್ಕಾರದ ಗತವೈಭವವನ್ನು ಸ್ಮರಿಸಿದರು. ಕೊಡವ ಸಾಹಿತ್ಯದ ಬೆಳವಣಿಗೆಗೆ ಓದುಗರ ಸಂಖ್ಯೆ ಹೆಚ್ಚಾಗಬೇಕೆಂದು ತಿಳಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಕೊಡವ ಪದ್ಧತಿಯಂತೆ ಒಕ್ಕಣೆ ಕಟ್ಟಿ ಪತ್ತಾಯ ತೆರೆದು ಮಾತನಾಡಿ ಕೊಡವ ಹಬ್ಬಗಳ ಮೂಲವಾದ ಕೃಷಿ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕೆಂದು ಆಶಿಸಿದರು. ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಎಜುಕೇಷನ್ ಸೋಷಿಯಲ್ ಸರ್ವಿಸ್ ಟ್ರಸ್ಟ್ ನ ಕಾರ್ಯದರ್ಶಿ ಮಾರ್ಚಂಡ ಗಣೇಶ್ ಪೊನ್ನಪ್ಪ ಅವರು ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಸದಾ ಸಿದ್ಧವಿದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಮತ್ತೊಬ್ಬ ಅತಿಥಿ ಪೊಮ್ಮಕ್ಕಡ ಪರಿಷತ್ ನ ಮಾಜಿ ಉಪಾಧ್ಯಕ್ಷೆ ಮಳವಂಡ ಪೂವಿ ಮುತ್ತಪ್ಪ ಅವರು ಮಾತನಾಡಿ ಪರಿಷತ್ತು ಮಾಡುವ ಉತ್ತಮ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅಖಿಲ ಕೊಡವ ಸಮಾಜದ ಮಾಜಿ ನಿರ್ದೇಶಕಿ ಹಾಗೂ ಪೊಮ್ಮಕ್ಕಡ ಪರಿಷತ್ ನ ನಿರ್ದೇಶಕಿ ಮೂವೇರ ರೇಖ ಪ್ರಕಾಶ್ ಅವರು “ಕಕ್ಕಡ ಅಂದ್ ಇಂದ್” ಎನ್ನುವ ವಿಚಾರವನ್ನು ಮಂಡಿಸಿದರು. ಪುಸ್ತಕ ದಾನಿಗಳ ಹೆಸರನ್ನು ಖಜಾಂಚಿ ಧರಣಿ ಸಭೆಯ ಗಮನಕ್ಕೆ ತಂದರು. ನಿರ್ದೇಶಕಿ ಅಜ್ಜಮಾಡ ಸಾವಿತ್ರಿ ಪ್ರಾರ್ಥಿಸಿ, ಕಾರ್ಯದರ್ಶಿ ಕೋಡಂಗಡ ಡೈನಾ ಸ್ವಾಗತಿಸಿ, ಉಪಾಧ್ಯಕ್ಷೆ ಕರವಂಡ ಸರಸು ವಂದಿಸಿದರು. ಸುಳ್ಳಿಮಾಡ ಶಿಲ್ಪ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ಮಂಡೇಪಂಡ ತ್ಯಾಗಿ, ಮಾಚಿಮಂಡ ಪುಷ್ಪ, ಕಡೇಮಾಡ ಕವಿತ, ಪಟ್ರಪಂಡ ಗೀತಾ, ನೂರೇರ ರತಿ, ಅಚ್ಚಕಾಳೆರ ಸವಿತ, ಮೊಣ್ಣಂಡ ವಿನು, ಚೇನಂಡ ಅಕ್ಷಿತ ಹಾಗೂ ಪೊಮ್ಮಕ್ಕಡ ಪರಿಷತ್ ನ ಸದಸ್ಯರು, ಕೇಂದ್ರೀಯ ಸಮಿತಿಯ ನಿರ್ದೇಶಕರು, ಮಾಜಿ ಸದಸ್ಯರುಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026

*ಮಾದರಿ ದಾನಿಗಳು: ಕಡಿಯತ್ತೂರು ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಕಾಶ್ ರೈ ದಂಪತಿಯಿಂದ ರೂ.12.78 ಲಕ್ಷ ನೆರವು*

ಅಕ್ಟೋಬರ್ 7, 2026

*ಅ.11ರಿಂದ 20ರವರೆಗೆ ಮಡಿಕೇರಿ ದಸರಾ ಕ್ರೀಡಾಕೂಟ; ರಾಜ್ಯ ಮಟ್ಟದ ಹೋರಿ ಪ್ರದರ್ಶನ ಈ ಬಾರಿಯ ವಿಶೇಷ*

ಅಕ್ಟೋಬರ್ 7, 2026

*ಮಾದರಿ ದಾನಿಗಳು: ಕಡಿಯತ್ತೂರು ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಕಾಶ್ ರೈ ದಂಪತಿಯಿಂದ ರೂ.12.78 ಲಕ್ಷ ನೆರವು*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.7: ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಕಡಿಯತ್ತೂರು ಗ್ರಾಮದ ಸುಮಾರು 400 ವರ್ಷಗಳ ಇತಿಹಾಸ ಹೊಂದಿರುವ…

*ಅ.11ರಿಂದ 20ರವರೆಗೆ ಮಡಿಕೇರಿ ದಸರಾ ಕ್ರೀಡಾಕೂಟ; ರಾಜ್ಯ ಮಟ್ಟದ ಹೋರಿ ಪ್ರದರ್ಶನ ಈ ಬಾರಿಯ ವಿಶೇಷ*

ಅಕ್ಟೋಬರ್ 7, 2026

*ಮಡಿಕೇರಿ, ಗೋಣಿಕೊಪ್ಪ ದಸರಾ: ನಿಯಮ ಪಾಲಿಸಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.