
ಮಡಿಕೇರಿ ಆ.10 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 14 ರಂದು ಕಲ್ಯಾಣಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್, ಅರೆನಾ-ವಿರಾಜಪೇಟೆ, ಇಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ “ನೇರ ಸಂದರ್ಶನ” ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಕಲ್ಯಾಣಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್, ಅರೆನಾ- ವಿರಾಜಪೇಟೆ, ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಸಂದರ್ಶನದಲ್ಲಿ Relationship Manager, Front office Executive, Service Advisor, Driver, and Technician, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಪಿ.ಯು.ಸಿ, ಪದವಿ, ಡಿಪ್ಲೋಮಾ, ಹಾಗೂ ಐ.ಟಿ.ಐ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್– 8296020826 ಇವರನ್ನು ಸಂಪರ್ಕಿಸಬಹುದು.









