Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*
  • *ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*
  • *ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*
  • *ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*
  • *ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*
  • *ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*
  • *ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಕೊಡಗು ಬಿಜೆಪಿ ಒತ್ತಾಯ : ಕಸ್ತೂರಿ ರಂಗನ್ ವರದಿ ವಿರುದ್ಧ ಪಕ್ಷಾತೀತ ಹೋರಾಟಕ್ಕೆ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಕೊಡಗು ಬಿಜೆಪಿ ಒತ್ತಾಯ : ಕಸ್ತೂರಿ ರಂಗನ್ ವರದಿ ವಿರುದ್ಧ ಪಕ್ಷಾತೀತ ಹೋರಾಟಕ್ಕೆ ನಿರ್ಧಾರ*

ಆಗಷ್ಟ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement


ಮಡಿಕೇರಿ ಆ.13 NEWS DESK : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಅವ್ಯವಹಾರದ ಆರೋಪದಿಂದ ಮುಕ್ತರಾಗದ ನಾಗೇಂದ್ರ ಅವರಿಗೆ ಸಚಿವ ಸ್ಥಾನವನ್ನು ನೀಡುವ ಮೂಲಕ ಪರಿಶಿಷ್ಟರಿಗೆ ದ್ರೋಹ ಮಾಡಲಾಗಿದೆ ಎಂದು ಆರೋಪಿಸಿದರು. ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆಸಿರುವ ಆರೋಪಕ್ಕೆ ಗುರಿಯಾಗಿದ್ದರು. ನಂತರ ಒತ್ತಡಕ್ಕೆ ಮಣಿದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕ ಅಧಿಕಾರಿಯೊಬ್ಬರು ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದರು. ಆದರೆ ಇದೀಗ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲೇ ಮುಖ್ಯಮಂತ್ರಿಗಳು ನಾಗೇಂದ್ರ ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಏನಾದರೂ ಭಯವಿತ್ತೇ ಅಥವಾ ಹೈಕಮಾಂಡ್ ಒತ್ತಡವಿತ್ತೇ ಎಂದು ಪ್ರಶ್ನಿಸಿದರು. ನಾಗೇಂದ್ರ ಅವರ ವಿರುದ್ಧ ತನಿಖೆ ಮುಂದುವರೆದಿರುವುದರಿಂದ ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಪಡೆಯಬೇಕು. ತಪ್ಪಿದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು. ಸದನದ ಒಳಗೆ ಮತ್ತು ಹೊರಗೆ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. *ಪಕ್ಷಾತೀತ ಹೋರಾಟ* ಕೊಡಗಿನ ರೈತರು ಹಾಗೂ ಗ್ರಾಮಸ್ಥರ ಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ವಿರುದ್ಧ ಪಕ್ಷಾತೀತವಾಗಿ ಒಗ್ಗಟ್ಟಿನ ಹೋರಾಟಕ್ಕೆ ಬಿಜೆಪಿ ಸಿದ್ಧವಿದೆ ಎಂದು ರವಿ ಕಾಳಪ್ಪ ಸ್ಪಷ್ಟಪಡಿಸಿದರು. ವರದಿ ಕುರಿತು ಕೊಡಗು- ಮೈಸೂರು ಸಂಸದ ಯದುವೀರ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಜನರಿಗೆ ಮುಂದಿನ ಜೀವನೋಪಾಯಕ್ಕೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರದೊಂದಿಗೆ ವ್ಯವಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಸಂಸತ್ ಅಧಿವೇಶನ ಮುಗಿದ ನಂತರ ಎಲ್ಲಾ ಸಂಘ ಸಂಸ್ಥೆಗಳು, ಪಂಚಾಯಿತಿ ಮಟ್ಟದ ಸದಸ್ಯರುಗಳು ಹಾಗೂ ರೈತರಿಂದ ಮಾಹಿತಿ ಪಡೆಯುವುದಾಗಿ ಸಂಸದರು ತಿಳಿಸಿದ್ದಾರೆ ಎಂದರು. ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲಾ ಸಂಘ ಸಂಸ್ಥೆಗಳಿಂದ ಆಕ್ಷೇಪಣೆ ಸಲ್ಲಿಸಲು ಮನವಿ ಮಾಡಲಾಗಿದೆ. ಪಕ್ಷಾತೀತವಾಗಿ ಹೋರಾಟ ಮಾಡುವುದಾಗಿ ಬಿಜೆಪಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ತಿಳಿಸಿದರು.
*ಪ್ಯಾಕೇಜ್ ನೀಡಿ* ಕೊಡಗಿನಲ್ಲಿ ಮಳೆಯಾಗುತ್ತಿರುವುದರಿಂದ ತೋಟಗಳು ಕೊಳೆ ರೋಗಕ್ಕೆ ತುತ್ತಾಗಿವೆ. ರಾಜ್ಯ ಸರಕಾರ ತಕ್ಷಣ ರೈತರಿಗೆ ಪರಿಹಾರ ಬಿಡುಗಡೆ ಮಾಡಬೇಕು, ಇದಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದ ರವಿ ಕಾಳಪ್ಪ, ಕಳೆದ ಮೂರು ವರ್ಷಗಳಿಂದ ಸರಕಾರ ರೈತರಿಗೆ ಪರಿಹಾರವನ್ನೇ ನೀಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಮಾತನಾಡಿ ಅವ್ಯವಹಾರದ ಆರೋಪದಡಿ ತನಿಖೆ ಎದುರಿಸುತ್ತಿರುವವರಿಗೆ ಸಚಿವ ಸ್ಥಾನ ನೀಡಿರುವುದನ್ನು ಸಹಿಸಲು ಸಾಧ್ಯವಿಲ್ಲ, ಮುಖ್ಯಮಂತ್ರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ನಮ್ಮ ಬೆಂಬಲವಿದೆ ಎಂದರು. ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮಾತುಗಳನ್ನಾಡುತ್ತಿರುವ ಮುಖ್ಯಮಂತ್ರಿಗಳು ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದು ಸರಿಯಾದ ಕ್ರಮವಲ್ಲ. ಮುಖ್ಯಮಂತ್ರಿಗಳು ಒಳ್ಳೆಯ ಚಿಂತನೆಯನ್ನು ಹೊಂದಿದವರೇ ಆಗಿದ್ದರೆ ತಕ್ಷಣ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್ ಹಾಗೂ ಮಾಧ್ಯಮ ವಕ್ತಾರ ಶಜಿಲ್ ಕೃಷ್ಣನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.7: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ ಕೊಡಗು…

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026

*ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*

ಅಕ್ಟೋಬರ್ 7, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.