Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*
  • *ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*
  • *ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*
  • *ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*
  • *ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*
  • *ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*
  • *ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಪುರಸಭೆ ಕಾರ್ಯವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಪುರಸಭೆ ಕಾರ್ಯವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ*

ಆಗಷ್ಟ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ ಆ.13 NEWS DESK : ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದು, ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಕ್ರಮಗಳು, ಬೀದಿ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಿರುವುದು ಸೇರಿದಂತೆ ಹಲವು ಆರೋಪಗಳನ್ನು ಮುಂದಿಟ್ಟುಕೊಂಡು ಕುಶಾಲನಗರ ತಾಲೂಕು ಬಿಜೆಪಿ ಕಾರ್ಯಕರ್ತರು ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪುರಸಭೆಯ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡು, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪುರಸಭೆ ಕಚೇರಿಯಲ್ಲಿ ಕೆಲವು ಮಾಜಿ ಜನಪ್ರತಿನಿಧಿಗಳು ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಟ್ಟಭದ್ರ ಹಿತಾಸಕ್ತಿಗಳು ಅಧಿಕಾರಿಗಳೊಂದಿಗೆ ಕೈಜೋಡಿಸಿ ಕಚೇರಿಯ ಆಡಳಿತದ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಮಧ್ಯವರ್ತಿಗಳ ಮೂಲಕ ಲಂಚ ಪಡೆದು ಸಾರ್ವಜನಿಕರ ಕೆಲಸಗಳನ್ನು ಮಾಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಪುರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಹೆಚ್ಚಾಗಿದೆ ಎಂದು ಬಿಜೆಪಿ ಪ್ರಮುಖರು ಆರೋಪಿಸಿದರು.
ಹಲವು ವರ್ಷಗಳಿಂದ ಮೀನು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಡ ಮೀನುಗಾರರಿಗೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಮೀನು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಈ ವಿಚಾರದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಮೀನು ಮಾರಾಟಗಾರರು ತಮ್ಮ ಮೀನಿನ ಬುಟ್ಟಿಗಳೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು. ಈ ಹಿಂದೆ ಪುರಸಭೆ ಸಿಬ್ಬಂದಿಯೊಬ್ಬರ ಮೇಲೆ ಮಧ್ಯವರ್ತಿಯಿಂದ ಹಲ್ಲೆ ನಡೆದಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿತ್ತು ಎಂದು ಪ್ರತಿಭಟನಾಕಾರರು ತಿಳಿಸಿದರು. ಇದೇ ವೇಳೆ ನೂತನವಾಗಿ ನಿರ್ಮಿಸಿರುವ ಪುರಸಭೆ ಕಚೇರಿ ಕಟ್ಟಡದ ಕಾಮಗಾರಿ ಕಳಪೆಯಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಪಟ್ಟಣದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಮಾಂಸ ಮಾರಾಟ ಮಳಿಗೆಗಳನ್ನು ಗುರುತಿಸಿ ತೆರವುಗೊಳಿಸಬೇಕು. ಸಾರ್ವಜನಿಕರಿಗೆ ತೊಂದರೆ ಹಾಗೂ ಸ್ವಚ್ಛತೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ನಡೆಯುತ್ತಿರುವ ಮಾಂಸ ಮಾರಾಟದ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಹಾಗೂ ಪುರಸಭೆಯ ಆಡಳಿತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಆಡಳಿತಾಧಿಕಾರಿ ನಿತಿನ್ ಚಿಕ್ಕಿ ಅವರು ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ, ಮನವಿಯಲ್ಲಿರುವ ವಿಷಯಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಗೌತಮ್ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಬಿ. ಭಾರತೀಶ್, ಕುಶಾಲನಗರ ಬಿಜೆಪಿ ಅಧ್ಯಕ್ಷ ಎಂ.ಎಂ. ಚರಣ್, ಕಾರ್ಯದರ್ಶಿ ಮಧುಸೂದನ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭಾಸ್ಕರ್ ನಾಯಕ್, ಪ್ರಮುಖರಾದ ಚಂದ್ರಶೇಖರ್ ಹೇರೂರು, ಕೆ.ಜಿ. ಮನು, ಶಿವಾಜಿ, ಮಂಜುನಾಥ್, ನವನೀತ್, ಸುಮನ್, ದಿನೇಶ್, ಮಹಿಳಾ ಪ್ರಮುಖರಾದ ಕನಕ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಮೀನು ಮಾರಾಟಗಾರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.7: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ ಕೊಡಗು…

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026

*ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*

ಅಕ್ಟೋಬರ್ 7, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.