
ಮಡಿಕೇರಿ ಆ.13 NEWS DESK : ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮಶಾಲೆಗಳ ವಿದ್ಯಾರ್ಥಿಗಳಿಗೆ ಇಂಗ್ಲೀμï ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 9 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.12 ಸಾವಿರ ಗೌರವಧನ ನಿಗದಿಪಡಿಸಲಾಗಿದೆ. ಇಂಗ್ಲಿಷ್ ಐಚ್ಛಿಕ ವಿಷಯದಲ್ಲಿ ಪದವಿ ಹಾಗೂ ಬಿ.ಎಡ್. ಪೂರ್ಣಗೊಳಿಸಿರುವ ಅಭ್ಯರ್ಥಿಗಳಾಗಿರಬೇಕು, ಅಭ್ಯರ್ಥಿಗಳನ್ನು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ, ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಇದೇ ಆಗಸ್ಟ್ 17 ಕೊನೆಯ ದಿನವಾಗಿದೆ. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಲೋಕೋಪಯೋಗಿ ಇಲಾಖೆ ಕಟ್ಟಡದ ಹತ್ತಿರ, ಕಾನ್ವೆಂಟ್ ಜಂಕ್ಷನ್, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08272-200500 ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಭಾಗೀರಥಿ ಅವರು ತಿಳಿಸಿದ್ದಾರೆ.








