
ಮಡಿಕೇರಿ ಆ.13 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಆಗಸ್ಟ್ 14, 15 ಮತ್ತು 16 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಉಪಾಧ್ಯಕ್ಷರು, ಆಗಸ್ಟ್ 14 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ. ಆ.15 ರಂದು ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿರುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 7 ಗಂಟೆಗೆ ಲಯನ್ಸ್ ಇಂಟರ್ ನ್ಯಾಷನಲ್ ಸಂಸ್ಥೆ ವತಿಯಿಂದ ಆಯೋಜಿಸಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆ.16 ರಂದು ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.








