
ಮಡಿಕೇರಿ NEWS DESK ಆ.15 : ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಚಾಲಕ ಉದಯ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ ಗೌರವ ಅರ್ಪಿಸಿದರು. ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಸ್ಟೀಫನ್, ಖಜಾಂಚಿ ಉಮೇಶ್, ಎಲ್ಲಾ ಸದಸ್ಯರು, ಟೆಂಪೋ ಚಾಲಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನೆರೆದಿದ್ದವರಿಗೆ ಸಿಹಿ ಹಂಚಿ ಸಂಭ್ರಮಿಸಿದರು.








