Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*
  • *ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*
  • *ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*

ಆಗಷ್ಟ್ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಆ.15 NEWS DESK : ಸೈನಿಕ ಶಾಲೆ ಕೊಡಗಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸೇನಾ ವೈಭವ ಹಾಗೂ ದೇಶಭಕ್ತಿಯ ಸಂಭ್ರಮದೊಂದಿಗೆ ಆಚರಿಸಲಾಯಿತು. ಶಾಲೆಯ ಜನರಲ್ ತಿಮ್ಮಯ್ಯ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ, ನಿವೃತ್ತ ಯೋಧರು ಹಾಗೂ ಗಣ್ಯರು ಪಾಲ್ಗೊಂಡಿದ್ದರು. ಬೆಂಗಳೂರಿನ ಏರ್ ಫೋರ್ಸ್ ಕೊಡಗು ಅಸೋಸಿಯೇಷನ್ ಅಧ್ಯಕ್ಷ ಏರ್ ಮಾರ್ಷಲ್ ಬಾಲ್ತಿಕಲಾಂಡ ಯು. ಚೆಂಗಪ್ಪ (ನಿವೃತ್ತ), ಪಿವಿಎಸ್‌ಎಂ, ಎವಿಎಸ್‌ಎಂ, ವಿಎಸ್‌ಎಂ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಹಾಗೂ ಉಪ ಪ್ರಾಂಶುಪಾಲ ವಿಂಗ್ ಕಮಾಂಡರ್ ಮಹಮದ್ ಷಾಜಿ ಅವರು ಮುಖ್ಯ ಅತಿಥಿಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಮುಖ್ಯ ಅತಿಥಿಗಳು ಶಾಲೆಯ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಬಳಿಕ ಜನರಲ್ ತಿಮ್ಮಯ್ಯ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಮೆನನ್, ಕಾರ್ಯಪ್ಪ, ಕಟಾರಿ ಹಾಗೂ ಸುಬ್ರತೋ ಹೌಸ್‌ಗಳ ತುಕಡಿಗಳ ಪರಿವೀಕ್ಷಣೆ ನಡೆಸಿದರು. ಪರೇಡ್ ಕಮಾಂಡರ್ ಕೆಡೆಟ್ ಸಿದ್ದಾಂತ್ ಹಾಗೂ ಧ್ವಜಧಾರಿ ಕೆಡೆಟ್ ಮಿತ್ರ ಅವರ ನೇತೃತ್ವದಲ್ಲಿ ಕೆಡೆಟ್‌ಗಳು ಶಿಸ್ತುಬದ್ಧ ಹಾಗೂ ಆಕರ್ಷಕ ಪಥಸಂಚಲನ ಪ್ರದರ್ಶಿಸಿದರು. :: ಸಂಸ್ಥಾಪಕರಿಗೆ ಗೌರವ ನಮನ :: ಸಂಸ್ಥೆಯ ಬೆಳವಣಿಗೆಗೆ ಶ್ರಮಿಸಿದ ಗಣ್ಯರನ್ನು ಗೌರವಿಸುವ ಸಲುವಾಗಿ ಶಾಲೆಯ ಆಡಳಿತ ಭವನ ಕೌಟಿಲ್ಯ ಬ್ಲಾಕ್‌ನಲ್ಲಿ ಏರ್ ಮಾರ್ಷಲ್ ಚೆಂಗಪ್ಪ ಅವರು ಸ್ಮರಣಾರ್ಥ ಫಲಕವನ್ನು ಅನಾವರಣಗೊಳಿಸಿದರು. ಕೊಡಗು ಜಿಲ್ಲೆಯ ನಿವೃತ್ತ ಯೋಧರೊಂದಿಗೆ ಸಂಸ್ಥೆಯ ಆರಂಭಿಕ ಬೆಳವಣಿಗೆಗೆ ಕಾರಣೀಕರ್ತರಾದ ವಿಂಗ್ ಕಮಾಂಡರ್ ಅಪ್ಪಣ್ಣ (ನಿವೃತ್ತ), ಲೆಫ್ಟಿನೆಂಟ್ ಕರ್ನಲ್ ಕಾವೇರಿಯಪ್ಪ ಹಾಗೂ ಸಾರ್ಜೆಂಟ್ ನಂಜಪ್ಪ ಅವರ ಸೇವೆಯನ್ನು ಸ್ಮರಿಸಲಾಯಿತು. :: ಸಾಧಕ ವಿದ್ಯಾರ್ಥಿಗಳು, ಸಿಬ್ಬಂದಿಗೆ ಸನ್ಮಾನ :: 2025-26ನೇ ಶೈಕ್ಷಣಿಕ ಸಾಲಿನ ಅತ್ಯುತ್ತಮ ನಿರ್ಗಮಿತ ವಿದ್ಯಾರ್ಥಿ ಪ್ರಶಸ್ತಿಯನ್ನು ಎನ್‌ಡಿಎ ಪ್ರವೇಶ ಪಡೆದ ಕೆಡೆಟ್ ಹಾಲಚಂದ್ರ, ಶೈಕ್ಷಣಿಕ ವಿಭಾಗದ ಅತ್ಯುತ್ತಮ ಸಾಧಕ ಪ್ರಶಸ್ತಿಯನ್ನು ಎನ್‌ಡಿಎ ಪ್ರವೇಶ ಪಡೆದ ಕೆಡೆಟ್ ಕಲ್ಲೇಶ್ ಬೇವಿನಾಳ್ ಹಾಗೂ ಕ್ರೀಡಾ ವಿಭಾಗದ ಅತ್ಯುತ್ತಮ ಸಾಧಕ ಪ್ರಶಸ್ತಿಯನ್ನು ಕೆಡೆಟ್ ಹೃದಯ ಅವರಿಗೆ ನೀಡಿ ಗೌರವಿಸಲಾಯಿತು. ಸಿಬಿಎಸ್‌ಇ 10ನೇ ತರಗತಿಯಲ್ಲಿ ಶೇ.97.8 ಅಂಕ ಗಳಿಸಿ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ಕೆಡೆಟ್ ಗಗನ್ ದೀಪ್ ಆರ್., ಗಣಿತದಲ್ಲಿ 100ಕ್ಕೆ 100 ಅಂಕ ಪಡೆದ ಕೆಡೆಟ್ ಹೃಷಿಕೇಶ್ ರೂಗಿ ಹಾಗೂ ಕೃತಕ ಬುದ್ಧಿಮತ್ತೆ (AI) ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ಕೆಡೆಟ್ ಪ್ರಣವ್ ನರೇಂದ್ರ ರಾವ್, ಕೆಡೆಟ್ ಶಾಶ್ವತ್ ಸಿಂಗ್ ಮತ್ತು ಕೆಡೆಟ್ ಹಿಮಾಂಕ್ ಕುಮಾರ್ ಭಯಾನ ಅವರನ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಬೋಧಕರಾದ ಎನ್. ಸುಬ್ಬರಂಗಯ್ಯ, ದಾದಾ ಡಿ. ಕುಸನಾಳೆ, ಗೋವಿಂದರಾಜ ಕೆ. ಹಾಗೂ ಹನುಮಂತ ರೆಡ್ಡಿ ಅವರ ಸೇವೆಯನ್ನು ಶ್ಲಾಘಿಸಲಾಯಿತು. ಇದೇ ವೇಳೆ ಸಂಸ್ಥೆಗೆ ಸಲ್ಲಿಸಿದ ಗಣನೀಯ ಸೇವೆಗಾಗಿ ಟಿಜಿಟಿ ವಿಜ್ಞಾನ ಶಿಕ್ಷಕ ಬಿ.ಎಲ್.ವಿ. ಪ್ರಸಾದ್ ರಾಜು, ಕ್ವಾರ್ಟರ್ ಮಾಸ್ಟರ್ ಸುನೀಲ್ ಕುಮಾರ್ ಇ. ಹಾಗೂ ಸಾಮಾನ್ಯ ನೌಕರ ಶ್ರೀನಿವಾಸ ಕೆ. ಅವರಿಗೆ ‘ಪ್ರಾಂಶುಪಾಲರ ಅಭಿನಂದನಾ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಏರ್ ಮಾರ್ಷಲ್ ಚೆಂಗಪ್ಪ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಪ್ರಾಮಾಣಿಕತೆ, ಶಿಸ್ತು ಹಾಗೂ ಸಮರ್ಪಣಾ ಭಾವದಿಂದ ಮುನ್ನಡೆಯಬೇಕು ಎಂದು ಕರೆ ನೀಡಿದರು. ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026

*ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿ ಕುರಿತು ಮಡಿಕೇರಿ ತಾಲ್ಲೂಕು ಗ್ಯಾರಂಟಿ…

*ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*

ಅಕ್ಟೋಬರ್ 7, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.