
ಮಡಿಕೇರಿ NEWS DESK ಆ.16 : ಬೆಂಗಳೂರು ಶಾಂತಿನಗರದ ಶಾಸಕ ಎನ್.ಎ.ಹ್ಯಾರೀಸ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ ಶಿವಕುಮಾರ್ ಪಾಲ್ಗೊಂಡು ಶುಭ ಹಾರೈಸಿದರು.
ಹ್ಯಾರೀಸ್ ಅವರ ಪುತ್ರ ಮೊಹಮ್ಮದ್ ನಲಪ್ಪಾಡ್ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ಅವರ ಪುತ್ರಿ ಮಲೀಹ ಫಾತಿಮಾ ಅವರ ವಿವಾಹ ಮಡಿಕೇರಿಯ ನಗರದಂಚಿನ ಮೇಕೇರಿ ಗ್ರಾಮದಲ್ಲಿರುವ ಮಾಜಿ ಸಚಿವ ದಿ.ಟಿ.ಜಾನ್ ಅವರಿಗೆ ಸೇರಿದ ಕೂರ್ಗ್ ವೈಲ್ಡರ್‌ನೆಸ್ ರೆಸಾರ್ಟ್ನಲ್ಲಿ ನಡೆಯಿತು.
ನಾಯಕ ನಟ ಕಿಚ್ಚ ಸುದೀಪ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.









