
ಮಡಿಕೇರಿ ಆ.17 NEWS DESK : ಚೆಯ್ಯಂಡಾಣೆ ಬಳಿಯ ನರಿಯಂದಡ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಕೃಷಿ ಗಿಡಗಳನ್ನು ತುಳಿದು, ತಿಂದು ನಾಶಪಡಿಸಿ ಅಪಾರ ನಷ್ಟ ಉಂಟು ಮಾಡಿದೆ. ಕಾಫಿ, ಅಡಿಕೆ, ಬಾಳೆ ಸೇರಿದಂತೆ ಕೃಷಿ ಗಿಡಗಳನ್ನು ನಾಶಪಡಿಸುತ್ತಿದ್ದು ಬೆಳೆಗಾರರು ಕಂಗಾಲಾಗಿದ್ದಾರೆ. ಕಾಡಾನೆ ಭಯದಿಂದ ತೋಟದ ಕೆಲಸಕ್ಕೆ ಕಾರ್ಮಿಕರು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ದೊರಕದಂತಾಗಿದೆ ಎಂದು ಬೆಳೆಗಾರರು ಅಳಲು ತೋಡಿಕೊಂಡಿದ್ದಾರೆ. ನಷ್ಟ ಹೊಂದಿದ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತಾಯಿಸಿದ್ದಾರೆ.









