
ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ ಶಾಲೆ, ನಗರಸಭಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎ.ವಿ. ಶಾಲೆಗಳ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ ಮಾಡುವ ಮೂಲಕ ಮಡಿಕೇರಿ ನಗರ ಯುವ ಕಾಂಗ್ರೆಸ್ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣಗೊಳಿಸಿತು.
ಸ್ವಾತಂತ್ರ‍್ಯ ದಿನಾಚರಣೆ ಸಮಾಜದ ಪ್ರತಿಯೊಬ್ಬರಿಗೂ ಸ್ಪಂದಿಸುವ ಹಾಗೂ ಅಗತ್ಯವಿರುವವರಿಗೆ ನೆರವಾಗುವ ದಿನವಾಗಬೇಕು. ಮಳೆ ಹಾಗೂ ಬಿಸಿಲಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ದೈನಂದಿನ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಪ್ರಯತ್ನ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೋಮಣ್ಣ, ನಗರಸಭಾ ಮಾಜಿ ಉಪಾಧ್ಯಕ್ಷ ಟಿ.ಎಂ.ಅಯ್ಯಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುದಯ್ ನಾಣಯ್ಯ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರಾಹುಲ್ ಮಾರ್ಷಲ್ ಹಾಗೂ ಅನ್ಫಲ್, ಯುವ ಕಾಂಗ್ರೆಸ್ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕವನ್ ಕೊತ್ತೋಳಿ, ಪೊನ್ನಂಪೇಟೆ ಅಧ್ಯಕ್ಷ ಧ್ಯಾನ್, ಮಡಿಕೇರಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಟಿ.ಆರ್., ಉಪಾಧ್ಯಕ್ಷರಾದ ಸುಹೇಬ್ ಎಂ.ಆರ್., ಥೋಮಸ್, ನಾಜಿಯ ಬೇಗಂ ಎಂ.ಕೆ., ಪ್ರಧಾನ ಕಾರ್ಯದರ್ಶಿ ಶಾಹುಲ್ ಅಮೀನ್, ಸಂಘಟನಾ ಕಾರ್ಯದರ್ಶಿ ಪ್ರತಾಪ್, ಮಡಿಕೇರಿ ನಗರ ಎನ್‌ಎಸ್‌ಯುಐ ಅಧ್ಯಕ್ಷ ಕಾನೆಹಿತ್ಲು ದೀಕ್ಷಿತ್, ಎನ್‌ಎಸ್‌ಯುಐ ನಗರ ಪ್ರಧಾನ ಕಾರ್ಯದರ್ಶಿ ಅಭಿಲಾಷ್ ಎನ್., ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ವೇಣು, ಆಶಿಕ್, ಮಹೇಶ್, ಫೈಜ್ ಸೇರಿದಂತೆ ಕಾರ್ಯಕರ್ತರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಛತ್ರಿ ವಿತರಿಸಿ ಶೈಕ್ಷಣಿಕ ಗುರಿ ಸಾಧನೆಗೆ ಶುಭ ಹಾರೈಸಿದರು.








