Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.18 : ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಮಿತಿ ಮೀರಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿವೆ. ಅರಣ್ಯ ಇಲಾಖೆಯಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಣ್ಣೊರೆಸುವ ತಂತ್ರಗಾರಿಕೆ ನಡೆಯುತ್ತಿದೆಯೇ ಹೊರತು ಶಾಶ್ವತ ಪರಿಹಾರದ ಯಾವುದೇ ಆಸಕ್ತಿ ಕಂಡು ಬರುತ್ತಿಲ್ಲವೆಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ಕಾಡಾನೆಗಳ ದಾಳಿಯಾಗುತ್ತಿದ್ದು, ಇಡೀ ಕೊಡಗು ಜಿಲ್ಲೆಯೇ ಆತಂಕದಲ್ಲಿದೆ. ಪರಿಸ್ಥಿತಿ ಇಷ್ಟು ಗಂಭೀರವಾಗಿದ್ದರೂ ರಾಜ್ಯ ಸರಕಾರ ಮಾತ್ರ ನಿದ್ರಾವಸ್ಥೆಯಲ್ಲಿದೆ ಎಂದು ಟೀಕಿಸಿದ್ದಾರೆ.
ಕಾಡಾನೆಗಳು ಎಲ್ಲಿ, ಯಾವಾಗ ಬೇಕಾದರೂ ದಾಳಿ ಮಾಡಬಹುದಾಗಿದೆ. ಜನನಿಬಿಡ ಪ್ರದೇಶದಲ್ಲಿ, ಹೆದ್ದಾರಿಗಳಲ್ಲಿ ರಾತ್ರಿ ಹಗಲೆನ್ನದೆ ಆನೆಗಳು ಸಂಚರಿಸುತ್ತಿದ್ದು, ಯಾವಾಗ ಬೇಕಾದರೂ ದಾಳಿ ಮಾಡಬಹುದಾಗಿದೆ. ಯಾರೂ ಸುರಕ್ಷಿತವಾಗಿಲ್ಲ ಎನ್ನುವ ಭಯ ಆವರಿಸಿದೆ. ಹಿಂಡು ಹಿಂಡಾಗಿ ತೋಟಗಳಲ್ಲಿ ಆಶ್ರಯ ಪಡೆದಿರುವ ಕಾಡಾನೆಗಳ ದಾಳಿಯಿಂದ ಇತ್ತೀಚೆಗೆ ಅನೇಕ ಜೀವಗಳು ಬಲಿಯಾಗಿವೆ. ಅಮಾಯಕರು ಮೃತಪಟ್ಟಾಗ ಪ್ರತಿಭಟನೆಗೆ ಮಣಿಯುವ ಅರಣ್ಯ ಇಲಾಖೆ ಪುಂಡಾನೆಯನ್ನು ಸೆರೆ ಹಿಡಿಯುವ ನಾಟಕವಾಡುತ್ತಿದೆಯೇ ಹೊರತು ಶಾಶ್ವತ ಪರಿಹಾರದ ವೈಜ್ಞಾನಿಕ ರೂಪು ರೇಷೆಗಳನ್ನು ಸಿದ್ಧಪಡಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಒಂದೆರಡು ಆನೆಗಳನ್ನು ಸೆರೆ ಹಿಡಿದಾಕ್ಷಣ ಸಮಸ್ಯೆ ಬಗೆಹರಿಯಿತು ಎಂದು ಭಾವಿಸುವ ಸರಕಾರದ ನಡೆ ಹಾಸ್ಯಾಸ್ಪದವಾಗಿದೆ. ನೂರಾರು ಕಾಡಾನೆಗಳು ಕೃಷಿ ಪ್ರದೇಶದಲ್ಲಿ ಆಶ್ರಯ ಪಡೆದಿರುವಾಗ ಇವುಗಳಲ್ಲಿ ಪುಂಡಾನೆ ಯಾವುದು ಎಂದು ಗುರುತಿಸುವುದಾರೂ ಹೇಗೆ, ಮಾನವ ಜೀವ ಬಲಿ ಪಡೆದ ನಂತರವಷ್ಟೇ ಇದು ಪುಂಡಾನೆ ಎಂದು ಗುರುತಿಸುವ ಕಾರ್ಯದಲ್ಲಿ ಅರಣ್ಯ ಇಲಾಖೆ ತೊಡಗಿದೆಯೇ, ಅರಣ್ಯ ಅಧಿಕಾರಿಗಳು ಹವಾನಿಯಂತ್ರಿತ ಕೊಠಡಿಯಿಂದ ಹೊರ ಬರಬೇಕಾದರೆ ಮಾನವ ಜೀವಹಾನಿಯಾಗಲೇ ಬೇಕೆ ಎಂದು ಕಂಠಿ ಕಾರ್ಯಪ್ಪ ಪ್ರಶ್ನಿಸಿದ್ದಾರೆ.
ಕಾಡಾನೆಗಳ ಸೆರೆ ಕಾರ್ಯಾಚರಣೆಗೆ ಲಕ್ಷಾಂತರ ಹಣವನ್ನು ಅರಣ್ಯ ಇಲಾಖೆ ವ್ಯಯಿಸುತ್ತಿದ್ದು, ಇದು ಜನರ ತೆರಿಗೆ ಹಣವಾಗಿದೆ. ಈ ರೀತಿಯ ಕಣ್ಣೊರೆಸುವ ತಂತ್ರಗಾರಿಕೆಯ ಕಾರ್ಯಾಚರಣೆಯ ಮೂಲಕ ಜನರ ಹಣ ದುಂದುವೆಚ್ಚ ಮಾಡದೆ ಶಾಶ್ವತ ಪರಿಹಾರ ರೂಪಿಸಲು ಅರಣ್ಯ ಇಲಾಖೆ ಮುಂದಾಗಬೇಕು. ಜಿಲ್ಲೆಯ ಇಬ್ಬರು ಶಾಸಕರುಗಳಿಗೆ ಜಿಲ್ಲೆ ಮತ್ತು ಇಲ್ಲಿನ ಜನರ ಬಗ್ಗೆ ನೈಜ ಕಾಳಜಿ ಇದ್ದರೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೊಡಗಿನಲ್ಲೇ ಅರಣ್ಯ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸಲಿ ಎಂದು ಒತ್ತಾಯಿಸಿದ್ದಾರೆ. ಕಾಡಾನೆಗಳ ದಾಳಿಯಂತಹ ಘಟನೆಗಳು ಪ್ರವಾಸೋದ್ಯಮದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಬಹುದು. ಅಲ್ಲದೆ, ತೋಟಗಳಿಗೆ ಕಾರ್ಮಿಕರು ಬಾರದೆ ಕೃಷಿ ಚಟುವಟಿಕೆಗೂ ಹಿನ್ನಡೆಯಾಗಬಹುದು. ಪರಿಸ್ಥಿತಿ ಕೈಮೀರುವ ಮೊದಲು ಸರಕಾರ ಎಚ್ಚೆತ್ತುಕೊಳ್ಳಬೇಕು ಎಂದು ಕಂಠಿ ಕಾರ್ಯಪ್ಪ ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.