Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.18 : ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಇಂದು ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಗ್ರಾ.ಪಂ ನೌಕರರು ಕಳೆದ 7-8 ವರ್ಷಗಳಿಂದ ವೇತನ ಪರಿಷ್ಕರಣೆಯಾಗದೆ ಇರುವುದರಿಂದ ಇಂದಿನ ಬೆಲೆ ಏರಿಕೆ ದಿನಗಳಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಈಗ ನೀಡುತ್ತಿರುವ ವೇತನ ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಾಕಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಪಿ.ಆರ್.ಭರತ್ ಮಾತನಾಡಿ ಸರಕಾರ ದುಡಿಯುವ ವರ್ಗಕ್ಕೆ ಸಹಾಯ ಮಾಡಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಮೇ 22, 2026 ರಂದು ಹೊರಡಿಸಿರುವ ಆದೇಶದನ್ವಯ ವೇತನ ಬಿಡುಗಡೆ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತಾಗಾರರಾಗಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಮಹಿಳಾ ವಾಹನ ಚಾಲಕಿಯರು ಹಾಗೂ ಕಸಗುಡಿಸುವ ಮಹಿಳೆಯರು ಸುಮಾರು 1-2 ವರ್ಷದಿಂದ ವೇತನವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಈ ನೌಕರರನ್ನು ಸರಕಾರ ಸಂಜೀವಿನಿ ಒಕ್ಕೂಟದಿಂದ ಬೇರ್ಪಡಿಸಿ ಪಂಚಾಯಿತಿ ಮೂಲಕ ವೇತನ ನೀಡಬೇಕೆಂದು ಎಂದು ಒತ್ತಾಯಿಸಿದರು. *ಬೇಡಿಕೆಗಳು* ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರಕಾರಿ ನೌಕರರೆಂದು ಘೋಷಿಸಬೇಕು. ಸೇವಾ ಹಿರಿತನವನ್ನು ಪರಿಗಣಿಸಿ 5 ವರ್ಷ ಸೇವೆ ಸಲ್ಲಿಸಿರುವ ನೌಕರರಿಗೆ ರೂ. 750, 10 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದವರಿಗೆ ರೂ.1500, 15 ವರ್ಷ ಮೇಲ್ಪಟ್ಟು 3,000 ಇನ್ಕಿçಮೆಂಟ್ ನೀಡಬೇಕು.
ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ನಿವೃತ್ತಿ ಅಥವಾ ಮರಣ ಹೊಂದಿದರೆ, ರೂ.6 ಲಕ್ಷ ಇಡುಗಂಟು ಘೋಷಿಸಬೇಕು. ಗ್ರಾಮ ಪಂಚಾಯತ್‌ನಲ್ಲಿ ಠರಾವು ಮೂಲಕ ನೇಮಕಾತಿಯಾಗಿರುವ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತಿ ಅನುಮೋದನೆ ಆಗದೇ ಇದ್ದರು ಅಂತಹ ಸಿಬ್ಬಂದಿಗಳಿಗೂ ಇಡಗಂಟು ನೀಡಲು ಆದೇಶ ಹೊರಡಿಸಬೇಕು. ತರಬೇತಿ ಪಡೆದಿರುವ ಎಲ್ಲಾ ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಬೇಕು. ಒಡಂಬಡಿಕೆ ಪತ್ರ ಮತ್ತು ಪ್ರತಿವರ್ಷದ ನವೀಕರಣ ಪದ್ಧತಿ ರದ್ದು ಪಡಿಸಬೇಕು. 15 ನೇ ಹಣಕಾಸಿನಲ್ಲಿ ವೇತನ ಪಾವತಿ ಮಾಡಬೇಕು. ಗ್ರಾಮ ಪಂಚಾಯತಿಗಳಿಗೆ ಎರಡನೇ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅವಕಾಶ ನೀಡಿದ್ದು ಸ್ವಾಗತ. ಆದರೆ ಈಗಾಗಲೇ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಂಡು ಮುಂದುವರೆಸಬೇಕು. ಅಲ್ಲದೇ ಈಗಾಗಲೇ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರು ಕಂಪ್ಯೂಟರ್ ಜ್ಞಾನ ಹಾಗೂ ವಿದ್ಯಾರ್ಹತೆ ಹೊಂದಿದ್ದರೆ ಅವರಿಗೆ ಅವಕಾಶ ನೀಡಬೇಕು. ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕೆ, 2017ರ ಒಳಗೆ ಇರುವ ಹೆಚ್ಚುವರಿ ಕರ ವಸೂಲಿಗಾರರಿಗೆ ಅನುಮೋದನೆ ನೀಡಬೇಕು.
ಮೊದಲನೇ ಡಾಟಾ ಎಂಟ್ರಿ ಆಪರೇರ್ಟಗಳಿಗೆ ಸ್ಪರ್ಶಿ ಹುದ್ದೆ ತರವಾದ ನಂತರ ಅನುಮೋದನೆ ನೀಡಬೇಕೆಂಬ ಷರತ್ತನ್ನು ಕೈಬಿಟ್ಟು ಅನುಮೋದನೆ ನೀಡಲು ಅವಕಾಶ ಒದಗಿಸಬೇಕು. ಗ್ರೇಡ್-1 ಕಾರ್ಯದರ್ಶಿಗಳಿಂದ ಪಿ.ಡಿ.ಓ ಹುದ್ದೆಗೆ ರಾಜ್ಯಮಟ್ಟದಲ್ಲಿ ಕೊಡುವ ಮುಂಬಡ್ತಿಯನ್ನು ಕೈಬಿಟ್ಟು ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು. ಪ್ರತಿಯೊಂದು ಗ್ರಾಮ ಪಂಚಾಯತಿಗಳಿಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಗ್ರೇಡ್-1 ಪಂಚಾಯತಿಗಳನ್ನು ಜನಸಂಖ್ಯೆಗೆ ಮೇಲ್ದರ್ಜೆಗೆ ಏರಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಶೇಕಡಾ 60 ರಷ್ಟು ಸ್ಥಾನವನ್ನು ಗ್ರೇಡ್-1 ಕಾರ್ಯದರ್ಶಿಗಳಿಗೆ ನೀಡಬೇಕು ಎಂದು ಒತ್ತಾಯಿಸಿದ ಮನವಿ ಪತ್ರವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು, ಪಂಚಾಯತ್ ರಾಜ್ ಸಚಿವರು ಹಾಗೂ ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರತಿಭಟನಾಕಾರರು ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ವಿಜಯ್, ದಿನೇಶ್, ಸತೀಶ್ ಮತ್ತಿತರರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.