Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
  • *ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
  • *ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
  • *ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.18 NEWS DESK : ಕಾವೇರಿ ಕ್ಷೇತ್ರ ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅªರಿಗೆ ಸೇರಿದ ಗದ್ದೆಯಲ್ಲಿ ಆ.22 ರಂದು 34ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ನಡೆಯಲಿದೆಯೆಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಕೆ.ಕೆ.ಸುಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಮಾಹಿತಿಯನ್ನಿತ್ತ ಅವರು, ಭಾಗಮಂಡಲದಲ್ಲಿ ದ್ವಿತೀಯ ಬಾರಿಗೆ ಜಿಲ್ಲಾ ಮಟ್ಟದ ಕೆಸರು ಗದ್ದೆ ಕ್ರೀಡಾ ಕೂಟವನ್ನು ಅಯ್ಯಂಗೇರಿಯ ಶ್ರೀಕೃಷ್ಣ ಯುವಕ ಸಂಘದ ಸಹಕಾರದೊಂದಿಗೆ ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ, ಜಿಲ್ಲಾಡಳಿತ, ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಮತ್ತು ಕ್ರೀಡಾ ಇಲಾಖೆ, ಮಡಿಕೇರಿ, ವಿರಾಜಪೇಟೆ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸುತ್ತಿರುವುದಾಗಿ ಮಾಹಿತಿಯನ್ನಿತ್ತರು. ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾ ಕೂಟದಲ್ಲಿ ಪುರುಷರು ಮತ್ತು ಮಹಿಳೆಯರ ವಿಭಾಗದ ಹಗ್ಗಜಗ್ಗಾಟ, ಸಾರ್ವಜನಿಕ ಪುರುಷರ ವಿಭಾಗದ ವಾಲಿಬಾಲ್, ಸಾರ್ವಜನಿಕ ಮಹಿಳೆಯರ ವಿಭಾಗದ ಥ್ರೋಬಾಲ್ ಹಾಗೂ ವಿವಿಧ ವಿಭಾಗಗಳಲ್ಲಿ ಓಟದ ಸ್ಪರ್ಧೆಗಳು ನಡೆಯಲಿದೆ. ಬೆ.11 ಗಂಟೆಗೆ ಓಟದ ಸ್ಪರ್ಧೆಗಳು ಆರಂಭಗೊಳ್ಳಲಿದ್ದು, ಇದಕ್ಕೂ ಮುನ್ನ ಬೆಳಗ್ಗೆ 9 ರಿಂದ ಹಗ್ಗಜಗ್ಗಾಟ ಸೇರಿದಂತೆ ಇತರ ಸ್ಪರ್ಧೆಗಳು ನಡೆಯಲಿರುವುದಾಗಿ ತಿಳಿಸಿದರು. ಹಗ್ಗ-ಜಗ್ಗಾಟದ ಸಾರ್ವಜನಿಕ ಪುರುಷರ ವಿಭಾಗದ ತಂಡಗಳಿಗೆ ಪ್ರವೇಶ ಶುಲ್ಕ 1,500 ರೂ., ಸಾರ್ವಜನಿಕ ಮಹಿಳೆಯರ ವಿಭಾಗದ ಹಗ್ಗ-ಜಗ್ಗಾಟ ತಂಡಗಳಿಗೆ ಪ್ರವೇಶ ಶುಲ್ಕ 1ಸಾವಿರ. ವಾಲಿಬಾಲ್ ಸಾರ್ವಜನಿಕ ಪುರುಷರ ವಿಭಾಗದ ತಂಡಗಳಿಗೆ ಪ್ರವೇಶ ಶುಲ್ಕ 1ಸಾವಿರ, ಥ್ರೋಬಾಲ್ ಸಾರ್ವಜನಿಕ ಮಹಿಳೆಯರ ವಿಭಾಗದ ತಂಡಗಳಿಗೆ ಪ್ರವೇಶ ಶುಲ್ಕ 1ಸಾವಿರ ಆಗಿರುತ್ತದೆ. ತಂಡಗಳು ಆ.21ರ ಸಂಜೆ 5 ಗಂಟೆಯ ಒಳಗಾಗಿ ತಂಡದ ಹೆಸರು ನೋಂದಾವಣೆ ಮಾಡಿಕೊಳ್ಳುವಂತೆ ಕೋರಿದರು.ವಾಲಿಬಾಲ್, ಥ್ರೋಬಾಲ್ ನೋಂದಣಿ ಮಾಡುವವರು ಅಭಿಷೇಕ್ 6361621643/ 7337779833, ಹಗ್ಗಜಗ್ಗಾಟ ಬಿದ್ದಿಯಂಡ ಸುಭಾμï 9845053501/ 8431816593 ಸಂಪರ್ಕಿಸಬಹುದೆಂದರು. :: ಉದ್ಘಾಟನೆ :: ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ಬಾಳಾಡಿ ದಿಲೀಪ್ ಕುಮಾರ್ ಮಾತನಾಡಿ, ಕೆಸರು ಗದ್ದೆ ಕ್ರೀಡಾ ಕೂಟಕ್ಕೆ ಆ.22ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ನರೇಂದ್ರ ಸ್ವಾಮಿ ಅವರು ಚಾಲನೆ ನೀಡಲಿದ್ದು, ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂಎಲ್‍ಸಿ ಎಂ.ಪಿ.ಸುಜಾಕುಶಾಲಪ್ಪ ಸೇರಿದಂತೆ ಹಲ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಮಾರೋಪ ಸಮಾರಂಭ ಸಂಜೆ 6 ಗಂಟೆಗೆ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆಯೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀಕೃಷ್ಣ ಯುವಕ ಸಂಘದ ಗೌರವಾಧ್ಯಕ್ಷ ಜೀವನ್ ಕುಮಾರ್,ಕಾರ್ಯದರ್ಶಿ ಬಿಸಿ.ಅಭಿಜಿತ್, ಸದಸ್ಯರುಗಳಾದ ಬಿದ್ದಿಯಂಡ ಸುಭಾಷ್ ಮತ್ತು ಮಂಜು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.18 NEWS DESK : ಮಾನವ–ಪ್ರಾಣಿ ಸಂಘರ್ಷ ಹಾಗೂ ಜಮ್ಮಾಮಲೆ ಸಮಸ್ಯೆ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಎದುರಾಗುತ್ತಿರುವ ವಿವಿಧ…

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.