
ಮಡಿಕೇರಿ NEWS DESK ಆ.19 : ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ವಿಧಾನಸಭೆಯ ಕಲಾಪ ವೀಕ್ಷಿಸಿದರು. ವಿಧಾನಸೌಧಕ್ಕೆ ಆಗಮಿಸಿದ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಶುಭ ಹಾರೈಸಿದರು. ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಭೇಟಿ ನೀಡಿ ಹೊಸ ಅನುಭವ ಪಡೆದರು. ವಿಧಾನಸೌಧ ನೋಡುವ ಬಯಕೆ ಹೊಂದಿದ್ದ ವಿದ್ಯಾರ್ಥಿಗಳು ಈ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಕೋರಿದ್ದರು. ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಶಾಲೆಯ 48 ವಿದ್ಯಾರ್ಥಿಗಳಿಗೆ ವಿಧಾನಸೌಧ ಭೇಟಿಗೆ ಅವಕಾಶ ಕಲ್ಪಿಸಿಕೊಟ್ಟರು. ವಿದ್ಯಾರ್ಥಿಗಳ ಭೇಟಿಯ ಸಂದರ್ಭದಲ್ಲಿ ಖುದ್ದು ಹಾಜರಿದ್ದ ಶಾಸಕ ಡಾ. ಮಂತರ್ ಗೌಡ ಅವರು ಮಕ್ಕಳಿಗೆ ವಿಧಾನಸೌಧದ ಕಾರ್ಯವೈಖರಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಜೊತೆಗೆ ವಿದ್ಯಾರ್ಥಿಗಳ ಊಟದ ವೆಚ್ಚವನ್ನು ಶಾಸಕರೇ ಭರಿಸಿ ಮೆಚ್ಚುಗೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲೆ ಬಾಳೆಯಡ ಸವಿತಾ ಪೂವಯ್ಯ, ಶಿಕ್ಷಕಿಯರಾದ ಮಣವಟ್ಟೀರ ರೇಖಾ, ಮಾದೇಟಿರ ಪ್ರಮಿಳಾ, ನೆರವಂಡ ಬಬಿನಾ, ಮೊಟ್ಟೆರಾ ಲೀನಾ, ಶರ್ಮಿಳಾ, ಶೈಲಿ, ಭರತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.









