
ಮಡಿಕೇರಿ, ಆ.20 NEWS DESK : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯನ್ನು ಪೊನ್ನಂಪೇಟೆ ಸಾಮರ್ಥ್ಯ ಸೌಧದಲ್ಲಿ ಆಚರಿಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಪೊನ್ನಂಪೇಟೆ ತಹಶೀಲ್ದಾರ್ ಸಿ.ಎಸ್. ಸಂಜನಾ ಅವರು ಚಾಲನೆ ನೀಡಿ, ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಡಿ. ದೇವರಾಜ ಅರಸು ಅವರ ಕುರಿತು ಬಿ.ಸಿ. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕೇಶ್ ಅವರು ಉಪನ್ಯಾಸ ನೀಡಿದರು. ದೇವರಾಜ ಅರಸು ಅವರ ಸಾಧನೆ ಹಾಗೂ ಸಾಮಾಜಿಕ ಸುಧಾರಣೆಗಳನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಬಗರ್ ಹುಕುಂ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಎ.ಬಿ. ಅಪ್ಪಣ್ಣ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ಗ್ಯಾರಂಟಿ ಸಮಿತಿಗಳ ತಾಲೂಕು ಅಧ್ಯಕ್ಷರಾದ ಪ್ರಶಾಂತ್ ಹಾಗೂ ಜಾನ್ಸನ್, ವಿರಾಜಪೇಟೆ ತಾ.ಪಂ. ಇಒ ರಾಜೇಶ್ ಕೆ.ಆರ್., ಉಪ ತಹಶೀಲ್ದಾರ್ ಪ್ರದೀಪ್ ಕುಮಾರ್, ಸಹಾಯಕ ನಿರ್ದೇಶಕ (ಪಂ.ರಾಜ್) ಎಂ.ಡಿ. ಶ್ರೀನಿವಾಸ್, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.









