ಮಡಿಕೇರಿ ಆ.21 : ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಉತ್ಸವ ಆಚರಣೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ನಗರ ದಸರಾ ಸಮಿತಿಯ ನಿಯೋಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಡಿಕೇರಿ ದಸರಾ ಉತ್ಸವಕ್ಕೆ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿತು. ಇದಕ್ಕೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು 2 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ, ಮಡಿಕೇರಿ ದಸರಾ ಸಮಿತಿ ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಕಾರ್ಯಾಧ್ಯಕ್ಷ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬೀತ, ಕಾರ್ಯದರ್ಶಿ ಮುದ್ದುರಾಜ್, ದಸರಾ ವೇದಿಕೆ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಆರ್.ಪಿ., ಅಲಂಕಾರ ಸಮಿತಿ ಅಧ್ಯಕ್ಷ ಮುನೀರ್ ಮಾಚಾರ್, ಯುವ ದಸರಾ ಅಧ್ಯಕ್ಷ ಕವನ್ ಕೊತ್ತೋಳಿ, ದಶ ಮಂಟಪ ಸಮಿತಿ ಅಧ್ಯಕ್ಷ ಸಜನ್ ಪೂಣಚ್ಚ, ಪ್ರಧಾನ ಕಾರ್ಯದರ್ಶಿ ವಿನೋದ್, ಪ್ರಕಾಶ್ ಆಚಾರ್ಯ, ಕಾರ್ಯದರ್ಶಿ ಮೋಹನ್, ಗಜೇಂದ್ರ, ಜಗದೀಶ್ ಸೇರಿದಂತೆ ದಸರಾ ಸಮಿತಿಯ ಪದಾಧಿಕಾರಿಗಳು ನಿಯೋಗದಲ್ಲಿದ್ದರು.








