
ಮಡಿಕೇರಿ NEWS DESK ಆ.22 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ಮನೆಗೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ರಾಜ್ಯ ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಶೌಕತ್ ಆಲೀ, ಪಕ್ಷದ ಮುಖಂಡರಾದ ಶಾಫಿ, ಸೂರಜ್ ಹೊಸೂರು, ಅಪ್ರು ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.









