Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಆ.22 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ರಾಜಕೀಯ ವಿದ್ಯಮಾನಗಳು, ಅಭಿವೃದ್ಧಿ ಕಾರ್ಯ, ಕೊಡಗಿನ ಸಮಸ್ಯೆಗಳು, ಜನರಲ್ಲಿರುವ ಗೊಂದಲಗಳು ಹೀಗೆ ನಾನಾ ವಿಷಯಗಳ ಬಗ್ಗೆ ಸಂವಾದದಲ್ಲಿ ಬೆಳಕು ಚೆಲ್ಲಲಾಯಿತು.
ಸಚಿವ ಸ್ಥಾನದಿಂದ ವಂಚಿತಗೊಂಡ ಕುರಿತು ಪ್ರತಿಕ್ರಿಯಿಸಿದ ಪೊನ್ನಣ್ಣ ಅವರು, ಹಲವು ವರ್ಷಗಳ ಹಿಂದೆ ಕೊಡಗಿನ ಮೂವರು ಸಚಿವರಾಗಿದ್ದರು. ನಂತರ ದೀರ್ಘಾವಧಿಗೆ ಸಚಿವ ಭಾಗ್ಯ ಜಿಲ್ಲೆಗೆ ದೊರೆತ್ತಿಲ್ಲ‌ ಇದರ ಹಿಂದೆ ರಾಜಕೀಯ ಲೆಕ್ಕಾಚಾರವೂ ಆಡಗಿದೆ. ಹಲವು ಕ್ಷೇತ್ರಗಳನ್ನೊಳಗಂಡ ಜಿಲ್ಲೆ, ಜಾತಿ ಪ್ರಾತಿನಿಧ್ಯ ಹೀಗೆ ನಾನಾ ವಿಷಯದಡಿ ಸಚಿವ ಸ್ಥಾನ ನಿರ್ಧಾರವಾಗುತ್ತದೆ. ಈ ನಡುವೆ ತನಗೆ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿತ್ತು. ಇದಕ್ಕಾಗಿ 2 ಶರ್ಟ್ ಗಳನ್ನು ಕೂಡ ಆಯ್ಕೆ ಮಾಡಿಟ್ಟುಕೊಂಡಿದೆ‌. ಕೆಲವೇ ಕ್ಷಣಗಳಲ್ಲಿ ಸಚಿವ ಸ್ಥಾನ ಕೈತಪ್ಪಿದ ವಿಚಾರ ತಿಳಿದು ಬಂತು. ಆದರೆ, ಉಪಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಆಶ್ಚರ್ಯ ಮೂಡಿಸಿತು. ಇದೊಂದು ಸಂವಿಧಾನಾತ್ಮಕ, ಗೌರವನ್ವಿತ ಹಾಗೂ ದೊಡ್ಡ ಜವಾಬ್ದಾರಿ ಹೊಂದಿರುವ ಹುದ್ದೆಯಾಗಿದೆ. ಆದರೆ, ಈ ಹುದ್ದೆಯಲ್ಲಿದ್ದಾರೆ ಕೆಲವೊಂದು ಪರಿಮಿತಿಗೊಳಪಟ್ಟಿರಬೇಕಾಗುತ್ತದೆ. ಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ನನ್ನನ್ನು ಕಾನೂನು ಘಟಕದ ಅಧ್ಯಕ್ಷರನ್ನಾಗಿ ಮಾಡಿದ್ದರು. ನನ್ನನ್ನು ರಾಜಕೀಯವಾಗಿ ಬಳಸಿಕೊಳ್ಳಬೇಕೆಂಬುದು ಅವರ ಆಸೆಯಾಗಿತ್ತು. ಈ ಹಿನ್ನೆಲೆ ತನಗೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ತನ್ನ ಹೆಸರನ್ಬು ಪರಿಗಣಿಸಿದ್ದೆ ಹೆಮ್ಮೆ ತಂದಿದೆ‌. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರಕಾರ ಹಲವು ಬಾರಿ ತಿರಸ್ಕರಿಸಿದ್ದು, ಇದೀಗ ಮತ್ತೊಮ್ಮೆ ಕರಡು ಅಧಿಸೂಚನೆಯನ್ನು ತಿರಸ್ಕಾರ ಮಾಡಿದೆ. ಕೊಡಗಿನ ಗ್ರಾಮಗಳನ್ನು ಸೇರಿಸಿರುವುದು ಸಹಜವಾಗಿ ಆತಂಕ ಮೂಡಿಸುತ್ತದೆ‌. ಪರಿಸರ ಸಂರಕ್ಷಣೆಯೊಂದಿಗೆ ಜನರ ಹಿತಾಸಕ್ತಿ ಕಾಪಾಡುವುದು ಕೂಡ ಸರಕಾರದ ಕರ್ತವ್ಯವಾಗಿದೆ ಎಂದು ಪೊನ್ನಣ್ಣ ಅಭಿಮತ ವ್ಯಕ್ತಪಡಿಸಿದರು.
ಪರಿಸರ ಹಾಗೂ ಪಶ್ಚಿಮಘಟ್ಟ ಖಂಡಿತವಾಗಿಯೂ ಸಂರಕ್ಷಣೆಯಾಗಲೇ ಬೇಕು‌ ಇದು ರಕ್ಷಣೆಯಾದರೆ ಮಾತ್ರ ದೇಶ ಉಳಿಯುತ್ತದೆ.ನೈಸರ್ಗಿಕ ಸಮತೋಲನ ಕಾಯ್ದುಕೊಳ್ಳಬಹುದಾಗಿದೆ‌. ಈ ವಿಷಯದಲ್ಲಿ ಪರ-ವಿರೋಧದೊಂದಿಗೆ ವಾಸ್ತವಾಂಶವನ್ನು ತಿಳಿದುಕೊಳ್ಳಬೇಕಾಗಿದೆ. ವರದಿ ಜಾರಿಯಿಂದ ಗ್ರಾಮೀಣ ಭಾಗದ ಜನಜೀವನ, ಕೃಷಿ ಚಟುವಟಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈಗಾಗಲೇ ಅರಣ್ಯ ಇಲಾಖೆಯಿಂದ ಅನೇಕ ಕಡಿವಾಣಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಕರಡು ಅಧಿಸೂಚನೆಯನ್ನು ಒಪ್ಪಲಾಗುವುದಿಲ್ಲ. ಕೇಂದ್ರ ಸರಕಾರ ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಯಾವುದಕ್ಕೆ ನಿರ್ಬಂಧ ಹೇರಲಾಗುವುದು ಎಂಬುದನ್ನು ಸ್ಪಷ್ಟಪಡಿಸಲಿ. ಗಣಿಗಾರಿಕೆ, ಕ್ವಾರಿ, ಐಷಾರಾಮಿ ರೆಸಾರ್ಟ್ ಗಳನ್ನು ಬಂದ್ ಮಾಡಲ್ಲಿ ಅದಕ್ಕೆ ನಮ್ಮ ವಿರೋಧವಿಲ್ಲ ಎಂದು ಹೇಳಿದ ಅವರು, ಕೃಷಿ ಚಟುವಟಿಕೆ ಸಂಬಂಧ ಬಾವಿ ನಿರ್ಮಾಣ, ಮರ ಕಪಾತ್ ನಂತಹ ಚುವಟಿಕೆಗಳಿಗೆ ನಿರ್ಬಂಧ ಹೇರುವುದನ್ನು ಒಪ್ಪಲಾಗುವುದಿಲ್ಲ ಎಂದರು.
ವನ್ಯಜೀವಿ-ಮಾನವ ಸಂಘರ್ಷವನ್ನು ತಡೆಯುವ ಕೆಲಸವಾಗುತ್ತಿದ್ದು, ಮತ್ತಷ್ಟು ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಆ. 28ಕ್ಕೆ ಅರಣ್ಯ ಸಚಿವರೇ ಜಿಲ್ಲೆಗೆ ಆಗಮಿಸಲಿದ್ದು, ಜನರು ಹಾಗೂ ಬಾಧಿತರೊಂದಿಗೆ ಸಮಾಲೋಚಿಸಲು ಮುಕ್ತ ಅವಕಾಶ ಕಲ್ಪಿಸಲಾಗುವುದು. ಸಭೆ ನಡೆಸಿ ಪರಿಹಾರದ ಬಗ್ಗೆ ಚರ್ಚಿಸಲಾಗುವುದು. ಈಗಾಗಲೇ ಕಾಡಾನೆ ಕಾರ್ಯಾಚರಣೆ ಕೈಗೊಂಡು 2 ಆನೆಗಳನ್ನು ಸೆರೆಹಿಡಿಯಲಾಗಿದೆ‌. ಆದರೆ, ಮತ್ತೇ ಅದನ್ನು ಕಾಡಿಗೆ ಬಿಟ್ಟರೆ ಮರಳಿ ತೋಟಗಳಿಗೆ ಲಗ್ಗೆಯಿಡುತ್ತವೆ. ಈ ಹಿನ್ನೆಲೆ ಕಲವೊಂದು ವ್ಯವಸ್ಥಿತ ಕ್ರಮಗಳ ಅಗತ್ಯವಿದೆ ಎಂದು ಪೊನ್ನಣ್ಣ ಅಭಿಪ್ರಾಯಿಸಿದರು.
ಕೊಡಗಿನಲ್ಲಿ ದುಬಾರೆ ಮತ್ತು ಮತ್ತಿಗೋಡಿನಲ್ಲಿ ಮಾತ್ರ ಸಾಕಾನೆ ಶಿಬಿರಗಳಿದ್ದು, ಸೆರೆಯಾದ ಆನೆಯನ್ನು ದುಬಾರೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲಿರುವ ಕ್ರಾಲ್ ಗಳ ಸಂಖ್ಯೆ ಹೆಚ್ಚಾಗಬೇಕು. ವ್ಯವಸ್ಥೆಗಳನ್ನು ಬಲಪಡಿಸಬೇಕಾಗಿದೆ. ಅಲ್ಲದೆ ಈ ಹಿಂದಿನ ಅರಣ್ಯ ಸಚಿವರು ಕಾಡಾನೆಯನ್ನು ಸಾಫ್ಟ್ ಲಾಂಚ್ ಮಾಡುವ ಸಂಬಂಧ ಯೋಜನೆ ರೂಪಿಸಿದ್ದರು. ಅದು ಲಾಭದಾಯಕವಾಗಿದ್ದರೆ ಯೋಜನೆ ಅನುಷ್ಠಾನಕ್ಕೂ ಪ್ರಯತ್ನಿಸಲಾಗುವುದು. ರೈಲ್ವೆ ಬ್ಯಾರಿಕೇಡ್, ಕಂದಕ, ಸೋಲಾರ್ ಬೇಲಿ ಸೇರಿದಂತೆ ಹಂತಹಂತವಾಗಿ ಕಾರ್ಯಕ್ರಮ ಹಮ್ಮಿಕೊಂಡು ಕಾಡಾನೆ ಹಾವಳಿ ನಿಯಂತ್ರಣಕ್ಕೆ ಪ್ರಯತ್ನಿಸಲಾಗುತ್ತಿದೆ. ಕಾಡಾನೆ ಕಡಿಮೆ ಇರುವ ರಾಜ್ಯಗಳಿಗೂ ಅನೆಗಳನ್ನು ಹಸ್ತಾಂತರಿಸಬಹುದಾಗಿದೆ ಎಂದ ಅವರು, ಉಸ್ತುವಾರಿ ಸಚಿವರ ಮೂಲಕ ಮಾಜಿ ಶಾಸಕರಿಗೆ ಸಭೆಗೆ ಆಹ್ವಾನ ನೀಡಲಾಗುವುದು ಎಂದರು.
ಪ್ರಾಜೆಕ್ಟ್ ಎಲಿಫೆಂಟ್ ಯೋಜನೆ ಇದ್ದು, ಅದರ ಮೂಲಕ ಒಂದು ರೂಪಾಯಿ ಅನುದಾನವೂ ಬಂದಿಲ್ಲ. ಇಂತಹ ವಿಚಾರದಲ್ಲಿ ಪಕ್ಷಾತೀತವಾಗಿ ಕೈಜೋಡಿಸಿ ಪರಿಹಾರೋಪಾಯಕ್ಕೆ ಬೆಂಬಲ ನೀಡಬೇಕು. ಪ್ರತಿಭಟನೆ ಮಾಡುವ ಬದಲು ಕೇಂದ್ರ ಸಚಿವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರಕ್ಕೆ ವಿಪಕ್ಷ ಬಿಜೆಪಿ ಪ್ರಯತ್ನಿಸಬೇಕೆಂದರು.
ಕೊಡಗಿನ ರಸ್ತೆ ಮೊದಲಿಗಿಂತ ಸುಧಾರಿಸಿದ್ದು, ಕೆಲವೊಂದು ರಸ್ತೆಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ಪೊನ್ನಣ್ಣ ಮಾಹಿತಿ ನೀಡಿದರು.
 ಭಾಗಮಂಡಲ ರಸ್ತೆ ಉತ್ತಮವಾಗಿ ನಿರ್ಮಾಣವಾಗಿದ್ದು, ವೀರಾಜಪೇಟೆ-ಮಡಿಕೇರಿ ಹಾಗೂ ನಾಪೋಕ್ಲು ರಸ್ತೆ ದುರಸ್ತಿಗೆ ಟೆಂಡರ್ ಆಗಿದೆ. ವೀರಾಜಪೇಟೆ ರಸ್ತೆ ನಿರ್ಮಾಣಕ್ಕೆ ರೂ. 40 ಕೋಟಿ ಅನುದಾನವೂ ಬಿಡುಗಡೆಯಾಗಿದೆ‌. ಗ್ರಾಮೀಣ ರಸ್ತೆಗಳು ದುರಸ್ತಿಯಾಗುತ್ತಿದ್ದು, ರಾಜಕೀಯ ಪ್ರಚಾರಕ್ಕಾಗಿ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಎಲ್ಲಾ ರಸ್ತೆಯೂ ಸರಿಯಾಗಿದೆ ಎಂದು ಹೇಳಲಾಗುವುದಿಲ್ಲ. ಆದರೆ, 3 ವರ್ಷಗಳಲ್ಲಿ ಗರಿಷ್ಠ ಪ್ರಮಾಣದ ಕೆಲಸವಾಗಿದೆ ಎಂದರು.
ವೀರಾಜಪೇಟೆ ಆಸ್ಪತ್ರೆ ಮೇಲ್ದರ್ಜೆಗೆ ಅನುಮೋದನೆಯಾಗಿದೆ. ವಿದ್ಯುತ್ ಜಾಲ ಬಲವರ್ಧನೆಗೊಳಿಸಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಪ್ರಯತ್ನವನ್ನು ಪ್ರಮಾಣಿಕವಾಗಿ ಮಾಡಲಾಗುವುದು ಎಂದು ಪೊನ್ನಣ್ಣ ಹೇಳಿದರು.
ಇದೇ ಸಂದರ್ಭ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಪೊನ್ನಣ್ಣ ಅವರನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ಹಾಜರಿದ್ದರು.
ರಾಕೇಶ್ ಸ್ವಾಗತಿಸಿ, ಖಜಾಂಚಿ ಸುನಿಲ್ ಪೊನ್ನೇಟಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.