Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 20267 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಆ.24:-ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍ಐಆರ್)-2026 ರ ಪರಿಷ್ಕøತ ವೇಳಾ ಪಟ್ಟಿಯ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೋಮವಾರ ಬಿಡುಗಡೆ ಮಾಡಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಜತೆ ಸೋಮವಾರ ನಡೆದ ಸಭೆ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಅವರು, ಪ್ರಕಟಿಸಿದ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 567 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 4,05,803 ಮತದಾರರು ಇದ್ದು, ಇವರಲ್ಲಿ 1,98,294 ಪುರುಷರು ಮತ್ತು 2,07,505 ಮಹಿಳಾ ಮತದಾರರು ಜೊತೆಗೆ 4 ಇತರೆ ಮತದಾರರನ್ನು ಒಳಗೊಂಡಿದೆ ಎಂದರು.
ವಿಧಾನಸಭಾ ಕ್ಷೇತ್ರವಾರು ಗಮನಿಸಿದಾಗ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,09,115 ಮತದಾರರು ಇದ್ದು, 1,01,316 ಪುರುಷ ಮತದಾರರು ಮತ್ತು 1,07,797 ಮಹಿಳಾ ಮತದಾರರು ಇತರರು ಇಬ್ಬರು ಮತದಾರರನ್ನು ಒಳಗೊಂಡಿದ್ದು, 285 ಮತಗಟ್ಟೆಗಳನ್ನು ಹೊಂದಿದೆ ಎಂದು ಹೇಳಿದರು.
ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕರಡು ಮತದಾರರ ಪಟ್ಟಿಯಂತೆ 1,96,688 ಮತದಾರರು ಇದ್ದು, 96,978 ಪುರುಷರು ಮತ್ತು 99,708 ಮಹಿಳಾ ಮತದಾರರು ಮತ್ತು ಇಬ್ಬರು ಇತರ ಮತದಾರರನ್ನು ಒಳಗೊಂಡಿದೆ. ಹಾಗೆಯೇ 282 ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ದಿನಾಂಕ :-01-10-2026 ರ ಅರ್ಹತಾ ದಿನಾಂಕ ಆಗಿದ್ದು, ಕರಡು ಮತದಾರರ ಪಟ್ಟಿಯ ಪ್ರಕಟಣೆ ದಿನದಿಂದ(ಆ.24 ರಿಂದ ಸೆಪ್ಟೆಂಬರ್, 23 ರವರೆಗೆ) ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಹೆಸರು ಸೇರ್ಪಡೆ, ಹೆಸರು ತೆಗೆಯುವುದು ಹಾಗೂ ತಿದ್ದುಪಡಿ, ವರ್ಗಾವಣೆ, ಎಪಿಕ್ ಕಾರ್ಡ್ ಬದಲಾವಣೆ ಮತ್ತು ಪಿಡಬ್ಲ್ಯುಡಿ ಗುರುತು ಮಾಡಲು ನಿಗದಿತ ನಮೂನೆ ಸಲ್ಲಿಸಬಹುದಾಗಿದೆ ಎಂದರು.
ಅಕ್ಟೋಬರ್, 22 ರವರೆಗೆ ಸೂಚನೆಯ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಗೆ ಅವಕಾಶವಿದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‍ಐಆರ್) ಸಂದರ್ಭದಲ್ಲಿ ಮತದಾರರಿಂದ ಗಣತಿ ನಮೂನೆಯನ್ನು ಸಂಗ್ರಹಿಸಿ ಡಿಜಿಟಲೀಕರಣ ಮಾಡಿ ಕರಡು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಮತದಾರರ ಪೈಕಿ ಜಿಲ್ಲೆಯಲ್ಲಿ 58,893 ಮತದಾರರಿಗೆ ಮತದಾರರ ನೋಂದಣಾಧಿಕಾರಿಗಳು/ ಸಹಾಯಕ ಮತದಾರರ ನೋಂದಣಾಧಿಕಾರಿಗಳು ನೋಟೀಸ್ ನೀಡಿ ವಿಚಾರಣೆ ನಡೆಸಿ ಬಿಎಲ್‍ಒಗಳಿಂದ ವರದಿ ಪಡೆದು, ಅಂತಿಮ ದಾಖಲೆಗಳನ್ನು ಪರಿಶೀಲಿಸಲು ಮುಂದಾಗಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಎಸ್‍ಐಆರ್ ಸಂದರ್ಭದಲ್ಲಿ ಮ್ಯಾಪಿಂಗ್ ಆಗದಿರುವುದು, ಹಾಗೆಯೇ ಮ್ಯಾಪಿಂಗ್‍ನಲ್ಲಿ ವ್ಯತ್ಯಾಸಗಳಾಗಿರುವುದು ಕಂಡುಬಂದಿದೆ. ಆದ್ದರಿಂದ ಅನೊಮಲೀಸ್ (Anomalies) ಮತದಾರರಿಗೆ ಸಂಬಂಧಿಸಿದಂತೆ ಭಾರತದ ಚುನಾವಣಾ ಆಯೋಗ ಅಧಿಸೂಚಿಸಿರುವ ದಾಖಲೆಗಳ ಪೈಕಿ ಆಧಾರ್ ಕಾರ್ಡ್ ಜೊತೆಗೆ ಎರಡು ದಾಖಲೆ ಸಲ್ಲಿಸಬೇಕಿದೆ. ಮ್ಯಾಪಿಂಗ್ ಆಗದಿರುವ ಮತದಾರರಿಗೆ ಭಾರತ ಚುನಾವಣಾ ಆಯೋಗ ಅಧಿಸೂಚಿಸಿರುವ ದಾಖಲೆಗಳ ಪೈಕಿ ಎರಡು ದಾಖಲಾತಿ ಸಲ್ಲಿಸಬೇಕಿದೆ ಎಂದರು.
ಹಾಗೆಯೇ ಮ್ಯಾಪಿಂಗ್ ಆಗದಿರುವ ಮತದಾರರು ಸಲ್ಲಿಸಿರುವ ದಾಖಲೆಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳ ಹಂತದಲ್ಲಿ ಪರಿಶೀಲಿಸಲಾಗುತ್ತದೆ. ಈ ಕಾರ್ಯಕ್ಕಾಗಿ 58,893 ಮತದಾರರಿಗೆ ನೋಟೀಸ್ ನೀಡಿ ವಿಚಾರಣೆ ಮಾಡಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು 73 ಹೆಚ್ಚುವರಿ ಸಹಾಯಕ ಮತದಾರರ ನೋಂದಾಣಾಧಿಕಾರಿ ನೇಮಕ ಮಾಡಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ ಸಜಿಲ್‍ಕೃಷ್ಣ ಅವರು ಜಿಲ್ಲೆಯಲ್ಲಿ ಎಸ್‍ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಲಾಗಿದ್ದು, ಬಿಎಲ್‍ಒಗಳು ಸಹ ಶ್ರಮವಹಿಸಿದ್ದಾರೆ ಎಂದು ಹೇಳಿದರು.
ಬಹುಜನ ಸಮಾಜ ಪಕ್ಷದ ದಿವಿಲ್ ಕುಮಾರ್ ಅವರು ಮಾತನಾಡಿ ಹಾಡಿಗಳಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇಲ್ಲದಿರುವ ಕುಟುಂಬಗಳು ಇದ್ದು, ಆದ್ದರಿಂದ ಮತ್ತೊಮ್ಮೆ ಆಧಾರ್ ಕಾರ್ಡ್ ಮಾಡುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮತ್ತೊಮ್ಮೆ ತಾಲ್ಲೂಕು ಮಟ್ಟದಲ್ಲಿ ಆಧಾರ್ ಕಾರ್ಡ್ ಶಿಬಿರ ಏರ್ಪಡಿಸಲಾಗುವುದು ಎಂದು ಭರವಸೆ ನೀಡಿದರು.
ಆಮ್ ಆದ್ಮಿ ಪಕ್ಷದ ಎ.ಕೆ.ಅಪ್ಪಯ್ಯ, ಬೋಜಣ್ಣ, ಪೃಥ್ವಿ ಅವರು ಎಸ್‍ಐಆರ್ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ಸುದ್ದಿಗೋಷ್ಠಿ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರಾಮಣ್ಣ ಇದ್ದರು.
ಇನ್ನಷ್ಟು ಮಾಹಿತಿ:-ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪರಿಷ್ಕøತ ವೇಳಾಪಟ್ಟಿ ವಿವರ ಇಂತಿದೆ. ಆಗಸ್ಟ್, 24 ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ, ಆಗಸ್ಟ್, 24 ರಿಂದ ಸೆಪ್ಟೆಂಬರ್, 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯಾಗಿದೆ. ಆಗಸ್ಟ್, 24 ರಿಂದ ಅಕ್ಟೋಬರ್, 22 ರವರೆಗೆ ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಹಾಗೂ ಅಕ್ಟೋಬರ್, 27 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಸಂಬಂಧ ಮೊದಲ ಹಂತವಾಗಿ 2026 ರ ಜೂನ್, 30 ರಿಂದ ಆಗಸ್ಟ್, 17 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ, ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಿ, ನಂತರ ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆಯನ್ನು ಸಂಗ್ರಹಣೆ ಮಾಡಿ, ಬಿಎಲ್‍ಒ ಆಪ್‍ನಲ್ಲಿ ಡಿಜಿಟಲೀಕರಣ ಮಾಡಲಾಗಿದೆ.
2026 ರ ಜೂನ್, 16 ರಂತೆ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 4,68,657 ಮತದಾರರು ಇದ್ದು, ಈ ಪೈಕಿ 405803-(ಶೇ.86.59) ಮತದಾರರಿಂದ ಗಣತಿ ನಮೂನೆ ಸಂಗ್ರಹಿಸಿ ಡಿಜಿಟಲೀಕರಣ ಮಾಡಲಾಗಿದೆ.
ಅಲ್ಲದೇ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ಸಮಯದಲ್ಲಿ ಮೃತಪಟ್ಟ ಮತದಾರರ ಸಂಖ್ಯೆ 13731, ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರ ಸಂಖ್ಯೆ 33381, ಎರಡು ಕಡೆ ಹೆಸರು ಹೊಂದಿರುವ ಮತದಾರರ ಸಂಖ್ಯೆ 6046, ಗೈರು ಮತದಾರರ ಸಂಖ್ಯೆ 9580 ಹಾಗೂ ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದೇ ಇರುವ ಮತದಾರರ ಸಂಖ್ಯೆ 116 ಆಗಿದ್ದು ಒಟ್ಟು 62,854 ಗಣತಿ ನಮೂನೆಗಳನ್ನು ಸಲ್ಲಿಸದೇ ಇರುವ ಮತದಾರರನ್ನು ಗುರುತು ಮಾಡಲಾಗಿದೆ.
ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತಗಟ್ಟೆವಾರು ಅಂತಿಮ ಎಎಸ್‍ಡಿಡಿಒ ಪಟ್ಟಿ (ಗೈರು, ಸ್ಥಳಾಂತರ, ಮರಣ, ಡೂಪ್ಲೀಕೇಟ್ ಮತ್ತು ಇತರೆ ಪ್ರತಿಯನ್ನು ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.in/ ಪ್ರಕಟಿಸಲಾಗಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್, 24 ರಂದು ಎಲ್ಲಾ ಮತಗಟ್ಟೆಗಳಲ್ಲಿ, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ, ಕಂದಾಯಾಧಿಕಾರಿಗಳ ಕಚೇರಿಯಲ್ಲಿ, ನಗರ ಸ್ಥಳೀಯ ಸಂಸ್ಥೆಗಳ ಕಚೇರಿಯಲ್ಲಿ, ತಾಲ್ಲೂಕು ಕಚೇರಿಗಳಲ್ಲಿ, ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ/ ಪರಿಶೀಲನೆಗಾಗಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರು ಪರಿಶೀಲಿಸಿಕೊಳ್ಳಲು ಕೋರಿದೆ.
ಕರಡು ಮತದಾರರ ಪಟ್ಟಿಯನ್ನು https://ceo.karnataka.gov.in ಮತ್ತು https://kodagu.nic.in website ನಲ್ಲಿಯೂ ಸಹ ಅಪ್‍ಲೋಡ್ ಮಾಡಲಾಗಿರುತ್ತದೆ.
‘ಆಗಸ್ಟ್, 24 ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರವಾರು ಮತದಾರರು ಇರುತ್ತಾರೆ. ಕೊಡಗು ಜಿಲ್ಲೆಯ 208-ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 285 ಮತಗಟ್ಟೆಗಳಿದ್ದು, 101316 ಪುರುಷ ಮತದಾರರು, 107797 ಮಹಿಳಾ ಮತದಾರರು, 2 ಇತರರು, ಒಟ್ಟು 209115 ಮಂದಿ ಮತದಾರರು ಇದ್ದಾರೆ.
209-ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 282 ಮತಗಟ್ಟೆಗಳಿದ್ದು, 96978 ಪುರುಷ ಮತದಾರರು, 99708 ಮಹಿಳಾ ಮತದಾರರು, 02 ಇತರೆ ಒಟ್ಟು 196688 ಮಂದಿ ಮತದಾರರು ಇದ್ದಾರೆ.
ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 567 ಮತಗಟ್ಟೆಗಳಿದ್ದು, 198294 ಪುರುಷರು, 207505 ಮಂದಿ ಮಹಿಳಾ ಮತದಾರರು, 04 ಇತರೆ, ಒಟ್ಟು 4,05,803 ಮಂದಿ ಮತದಾರರು ಇದ್ದಾರೆ.’
ದಿನಾಂಕ:01-10-2026 ಆರ್ಹತಾ ದಿನಾಂಕವಾಗಿರುವುದರಿಂದ ಕರಡು ಮತದಾರರ ಪಟ್ಟಿಯ ಪ್ರಕಟಣೆ ದಿನದಿಂದ ಅಂದರೆ ಆಗಸ್ಟ್, 24 ರಿಂದ ಸೆಪ್ಟೆಂಬರ್, 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು (ಹೆಸರು ಸೇರ್ಪಡೆ, ಹೆಸರು ಕೈಬಿಡಲು ಹಾಗೂ ತಿದ್ದುಪಡಿ, ವರ್ಗಾವಣೆ, ಎಫಿಕ್ ಕಾರ್ಡ್ ಬದಲಾವಣೆ ಮತ್ತು ಪಿಡಬ್ಲ್ಯುಡಿ ಗುರುತು ಮಾಡಲು ನಿಗದಿತ ನಮೂನೆಗಳನ್ನು) ಸಲ್ಲಿಸಬಹುದಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು-ನಮೂನೆ-6, ಅನಿವಾಸಿ ಭಾರತೀಯರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ನಮೂನೆ-6ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು / ಕೈಬಿಡಲು- ನಮೂನೆ-7, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಥವಾ ಕ್ಷೇತ್ರದ ಹೊರಗೆ ನಿವಾಸವನ್ನು ಸ್ಥಳಾಂತರಿಸಲು, ನಮೂದುಗಳನ್ನು ಸರಿಪಡಿಸಲು, ಮತದಾನ ಗುರುತಿನ ಚೀಟಿ (ಎಪಿಕ್)ಯನ್ನು ಬದಲಾಯಿಸಲು ಮತ್ತು ವಿಶೇಷ ಚೇತನ ವ್ಯಕ್ತಿಗಳನ್ನು (ಪಿಡಬ್ಲ್ಯೂ ಡಿ) ಗುರುತು ಮಾಡಲು – ನಮೂನೆ-8. ನಮೂನೆ-6 ಮತ್ತು 8ನ್ನು ಸಲ್ಲಿಸುವಾಗ ಘೋಷಣೆ ಪತ್ರವನ್ನು ಸಲ್ಲಿಸಬೇಕು.
ನಮೂನೆ-6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ದಿ ಪಡಿಸಿರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ (ವೋಟರ್ ಹೆಲ್ಪ್ ಲೈನ್ ಆಪ್) ಹಾಗೂ https://voters.eci.gov.in/ / VOTERS’ SERVICE PORTAL ಮೂಲಕ ಅನ್‍ಲೈನ್‍ನಲ್ಲಿ ನೇರವಾಗಿ ಸಲ್ಲಿಸಬಹುದು.
ಮನೆ ಮನೆ ಭೇಟಿ ಸಮಯದಲ್ಲಿ ಮತದಾರರಿಂದ ಗಣತಿ ನಮೂನೆ ಸಂಗ್ರಹಿಸಿ, ಡಿಜಿಟಲೀಕರಣ ಮಾಡಿ ಕರಡು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಮತದಾರರ ಪೈಕಿ ಈ ವರ್ಗಗಳ ಮತದಾರರಿಗೆ ಮತದಾರರ ನೋಂದಣಾಧಿಕಾರಿಗಳು/ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ನೋಟೀಸ್ ನೀಡಿ ವಿಚಾರಣೆ ನಡೆಸಿ, ಬಿಎಲ್‍ಒಗಳಿಂದ ವರದಿ ಪಡೆದು ಮತ್ತು ದಾಖಲೆಗಳನ್ನು ಪರಿಶೀಲಿಸಿ, ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ.
No Mapping (ಕಳೆದ 2002 SIಖ ನಲ್ಲಿ ಇಲ್ಲದ ಮತ್ತು ಅವರು ಕೊನೆ ಎಸ್‍ಐಆರ್‍ನಲ್ಲಿ ಸಂತತಿ ಇಲ್ಲದ) Discrepancies in Mapping (ಮ್ಯಾಪಿಂಗ್ ನಲ್ಲಿ ವ್ಯತ್ಯಾಸಗಳು) ಒಟ್ಟು ಜಿಲ್ಲೆಯಲ್ಲಿ ಈ ಕೆಳಕಂಡ ಮತದಾರರಿಗೆ ನೋಟೀಸ್ ನೀಡಲಾಗುವುದು.
ಕೊಡಗು ಜಿಲ್ಲೆಯ 208-ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 9252 ಅನೊಮಲೀಸ್, ಮ್ಯಾಪಿಂಗ್ ಇಲ್ಲದಿರುವುದು 9533, ಒಟ್ಟು 18785, 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 26558 ಅನೊಮಲೀಸ್, ಮ್ಯಾಪಿಂಗ್ ಇಲ್ಲದಿರುವುದು 13,550 ಒಟ್ಟು 40108. ಒಟ್ಟು ಅನೊಮಲೀಸ್ 35,810 ಮತ್ತು ಮ್ಯಾಪಿಂಗ್ ಇಲ್ಲದಿರುವುದು 23083 ಒಟ್ಟು 58893 ಆಗಿದೆ.
Anomalies (ಅನೊಮಲೀಸ್) ಮತದಾರರಿಗೆ ಸಂಬಂಧಿಸಿದಂತೆ, ಭಾರತ ಚುನಾವಣಾ ಆಯೋಗ ಅಧಿಸೂಚಿಸಿರುವ ದಾಖಲೆಗಳ ಪೈಕಿ ಆಧಾರ್ ಕಾರ್ಡ್ ಜೊತೆಗೆ ಎರಡು ದಾಖಲೆಗಳನ್ನು ಸಲ್ಲಿಸುವುದು.
      No Mapping ಮತದಾರರಿಗೆ ಸಂಬಂಧಿಸಿದಂತೆ, ಭಾರತ ಚುನಾವಣಾ ಆಯೋಗ ಅಧಿಸೂಚಿಸಿರುವ ದಾಖಲಿಗಳ ಪೈಕಿ ಆಧಾರ್ ಕಾರ್ಡ್ ಜೊತೆಗೆ ಎರಡು ದಾಖಲೆಗಳನ್ನು ಸಲ್ಲಿಸುವುದು. ಮ್ಯಾಪ್ತಿಂಗ್ ಇಲ್ಲದಿರುವ ಮತದಾರರು ಸಲ್ಲಿಸುವ ದಾಖಲೆಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳ ಹಂತದಲ್ಲಿ ಪರಿಶೀಲಿಸಲಾಗುತ್ತದೆ. ಒಟ್ಟು 58893 ಮತದಾರರಿಗೆ ನೋಟೀಸ್ ನೀಡಿ ವಿಚಾರಣೆ ಮಾಡಿ ನಿಗದಿತ ಅವದಿಯೊಳಗೆ ಪೂರ್ಣಗೊಳಿಸಲು ಒಟ್ಟು 73 ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಕ ಮಾಡಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.
ಮತದಾರರು ಸಲ್ಲಿಸಬೇಕಾದ ದಾಖಲೆಗಳಪಟ್ಟಿ: ಯಾವುದೇ ಕೇಂದ್ರ ಸರ್ಕಾರ / ರಾಜ್ಯ ಸರ್ಕಾರ/ ಸಾರ್ವಜನಿಕ ವಲಯ ಉದ್ಯಮದ ಖಾಯಂ ಉದ್ಯೋಗಿ/ ಪಿಂಚಣಿದಾರರಿಗೆ ನೀಡಿರುವ ಯಾವುದೇ ಗುರುತಿನ ಚೀಟಿ/ ಪಿಂಚಣಿ ಸಂದಾಯ ಆದೇಶ.
ಭಾರತದಲ್ಲಿ 01.07.1987 ಕ್ಕೂ ಮುಂಚೆ ಸರ್ಕಾರ/ ಸ್ಥಳೀಯ ಪ್ರಾಧಿಕಾರಗಳು/ ಬ್ಯಾಂಕುಗಳು/ ಅಂಚೆ ಕಚೇರಿ/ ಜೀವ ವಿಮಾ ನಿಗಮ/ ಸಾರ್ವಜನಿಕ ವಲಯ ಉದ್ಯಮಗಳು ನೀಡಿರುವ ಯಾವುದೇ ಗುರುತಿನ ಚೀಟಿ/ ಪ್ರಮಾಣಪತ್ರ/ ದಸ್ತಾವೇಜು. ಸಕ್ಷಮ ಪ್ರಾಧಿಕಾರವು ನೀಡಿರುವ ಜನನ ಪ್ರಮಾಣಪತ್ರ. ಪಾಸ್ಪೋರ್ಟ್. ಮಾನ್ಯತೆ ಪಡೆದ ಮಂಡಳಿಗಳು/ ವಿಶ್ವವಿದ್ಯಾಲಯಗಳು ನೀಡಿರುವ ಮೆಟ್ರಿಕ್ಯೂಲೇಷನ್/ ಶೈಕ್ಷಣಿಕ ಪ್ರಮಾಣಪತ್ರ., ರಾಜ್ಯದ ಸಕ್ಷಮ ಪ್ರಾಧಿಕಾರವು ನೀಡಿರುವ ಖಾಯಂ ನಿವಾಸ ಪ್ರಮಾಣಪತ್ರ, ಅರಣ್ಯ ಹಕ್ಕು ಪ್ರಮಾಣಪತ್ರ., ಸಕ್ಷಮ ಪ್ರಾಧಿಕಾರವು ನೀಡಿರುವ ಒಬಿಸಿ/ ಪ.ಜಾ/ಪ.ಪಂ ಅಥವಾ ಯಾವುದೇ ಜಾತಿ ಪ್ರಮಾಣಪತ್ರ, ರಾಷ್ಟ್ರೀಯ ಪೌರತ್ವ ರಿಜಿಸ್ಟರ್ (ಅದು ಎಲ್ಲಾದರೂ ಅಸ್ತಿತ್ವದಲ್ಲಿರಲಿ) ರಾಜ್ಯ/ ಸ್ಥಳೀಯ ಪ್ರಾಧಿಕಾರಗಳು ಸಿದ್ದಪಡಿಸಿದ ಕುಟುಂಬ ರಿಜಿಸ್ಟರ್. ಸರ್ಕಾರವು ನೀಡಿದ ಯಾವುದೇ ಜಮೀನು/ ಮನೆ ಹಂಚಿಕೆ ಪ್ರಮಾಣಪತ್ರ.
ಆಧಾರ್‍ಗೆ ಸಂಬಂಧಿಸಿದಂತೆ, ಆಯೋಗವು ದಿನಾಂಕ 09.09.2025ರ ಪತ್ರ ಸಂಖ್ಯೆ 23/2025-ಇಆರ್‍ಎಸ್ /ಸಂಪುಟ II ರಲ್ಲಿ ಹೊರಡಿಸಲಾದ ನಿರ್ದೇಶನಗಳು ಅನ್ವಯಿಸುತ್ತವೆ. (ಆಧಾರ್ ಕಾರ್ಡ್ ಅನ್ನು ಗುರುತಿನ ಪುರಾವೆಯಾಗಿದೆ ಸ್ವೀಕರಿಸಲಾಗುವುದು. ಆಧಾರ್ ಕಾರ್ಡ್ ಪೌರತ್ವ, ವಿಳಾಸ ಅಥವಾ ಜನ್ಮ ದಿನಾಂಕದ ಪುರಾವೆಯಾಗಿರುವುದಿಲ್ಲ.)
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 1200 ಕ್ಕಿಂತ ಹೆಚ್ಚು ಮತದಾರರು ಇದ್ದ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 15 ಮತಗಟ್ಟೆಗಳನ್ನು ವಿಭಜನೆ/ ಪುನರ್ ವಿಂಗಡಣೆ ಮಾಡಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಮತ್ತು ಮತಗಟ್ಟೆಗಳ ಬದಲಾವಣೆ ಬಗ್ಗೆ ಭಾರತ ಚುನಾವಣಾ ಆಯೋಗಕ್ಕೆ ಅನುಮೋದನೆ ಕೋರಿ ಪ್ರಸ್ಥಾವನೆಯನ್ನು ಸಲ್ಲಿಸಲಾಗಿತ್ತು. ಭಾರತ ಚುನಾವಣಾ ಆಯೋಗವು ಪ್ರಸ್ತಾವನೆಗೆ ಅನುಮೋದನೆ ನೀಡಿರುತ್ತದೆ. ಪ್ರಸ್ತುತ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಈ ಕೆಳಕಂಡಂತೆ ಮತಗಟ್ಟೆಗಳು ಇರುತ್ತದೆ. ಎರಡು ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳ ಪಟ್ಟಿಯನ್ನು https://kodagu.nic.in website ನಲ್ಲಿ ಪ್ರಕಟಿಸಲಾಗಿದೆ.
208-ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಹಿಂದೆ ಇದ್ದ ಮತಗಟ್ಟೆಗಳ ಸಂಖ್ಯೆ 275 ವಿಭಜನೆ/ಪುನರ್ ವಿಂಗಡಣೆ ಮಾಡಲಾದ ಮತಗಟ್ಟೆಗಳ ಸಂಖ್ಯೆ 10, ಮತಗಟ್ಟೆ ಸ್ಥಳ ಬದಲಾವಣೆ 05, ಪ್ರಸ್ತುತ ಇರುವ ಮತಗಟ್ಟೆಗಳ ಸಂಖ್ಯೆ 285.
209-ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಹಿಂದೆ ಇದ್ದ ಮತಗಟ್ಟೆಗಳ ಸಂಖ್ಯೆ 277 ಮತಗಟ್ಟೆಗಳಿದ್ದು, ವಿಭಜನೆ/ಪುನರ್ ವಿಂಗಡಣೆ ಮಾಡಲಾದ ಮತಗಟ್ಟೆಗಳ ಸಂಖ್ಯೆ 05, ಒಟ್ಟು ಪ್ರಸ್ತುತ ಇರುವ ಮತಟ್ಟೆಗಳ ಸಂಖ್ಯೆ 282. ಈ ಹಿಂದೆ ಇದ್ದ ಮತಗಟ್ಟೆಗಳ ಸಂಖ್ಯೆ 552, ವಿಭಜನೆ/ಪುನರ್ ವಿಂಗಡಣೆ ಮಾಡಲಾದ ಮತಗಟ್ಟೆಗಳ ಸಂಖ್ಯೆ 15 ಮತ್ತು ಮತಗಟ್ಟೆ ಸ್ಥಳ ಬದಲಾವಣೆ 2 ಒಟ್ಟು ಪ್ರಸ್ತುತ ಇರುವ ಮತಗಟ್ಟೆಗಳ ಸಂಖ್ಯ 567 ಆಗಿರುತ್ತದೆ.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24:-ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍ಐಆರ್)-2026 ರ ಪರಿಷ್ಕøತ ವೇಳಾ ಪಟ್ಟಿಯ ಕರಡು ಮತದಾರರ ಪಟ್ಟಿಯನ್ನು…

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.