ಮಡಿಕೇರಿ, NEWS DESK ಆ.24 : ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ 19ನೇ ಪುಣ್ಯಸ್ಮರಣೆಯ ಅಂಗವಾಗಿ ಮಡಿಕೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಮಡಿಕೇರಿಯ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಸಮಾಜ ಸೇವಾ ವಿಭಾಗ ಹಾಗೂ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬ್ರಹ್ಮಾಕುಮಾರಿ ಲೈಟ್ ಹೌಸ್ ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಪಾಲ್ಗೊಂಡು ರಕ್ತದಾನ ಮಾಡಿದರು.
ಬ್ರಹ್ಮಾಕುಮಾರಿ ಲೈಟ್ ಹೌಸ್ ನ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯಿತ್ರಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ರಕ್ತದಾನದ ಮಹತ್ವದ ಕುರಿತು ವಿವರಿಸಿದರು.

ಅತಿಥಿ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿ ಧ್ಯಾನ, ಏಕಾಗ್ರತೆ ಮತ್ತು ಆರೋಗ್ಯದ ಕುರಿತು ಮಾತನಾಡಿದರು.
ಬ್ರಹ್ಮ ಕುಮಾರಿ ಧನಲಕ್ಷಿö್ಮ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಕುಮಾರ್, ಡಾ.ರವಿ ಕರುಂಬಯ್ಯ, ಡಾ.ಸನತ್ ಕುಮಾರ್, ಕೊಡಗು ಚಾನಲ್ ನ ಸಂಪಾದಕ ಜಿ.ವಿ.ರವಿಕುಮಾರ್, ಪ್ರಮುಖರಾದ ನಾಣಯ್ಯ, ಲಲಿತ ಮಣಿ, ರೇಖಾ, ಹರಿಣಾಕ್ಷಿ, ರಮಾದೇವಿ ಅಯ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.







