Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*
  • *ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*
  • *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, NEWS DESK ಆ.25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಹಾಗೂ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ (ಆ.25) ಹಾರಂಗಿ ಬಳಿಯ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ದಿವಂಗತ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ ಹಾಗೂ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಶೇ.98.77 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದ ಶನಿವಾರಸಂತೆಯ ವಿಘ್ನೇಶ್ವರ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯ ಎಚ್.ಕೆ. ಅವರನ್ನು ಸನ್ಮಾನಿಸಿ, ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವಕಾಮತ್, ವಿದ್ಯಾರ್ಥಿಗಳು ನಾಡು-ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಹೆಚ್ಚಿನ ಅಧ್ಯಯನ ಮಾಡುವ ಮೂಲಕ ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಓದಿನೊಂದಿಗೆ ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳುವುದು ಅತ್ಯಗತ್ಯ. ಸಾಹಿತ್ಯವು ವ್ಯಕ್ತಿತ್ವ ವಿಕಸನಕ್ಕೆ, ಸೃಜನಶೀಲತೆ ಹೆಚ್ಚಿಸಲು ಹಾಗೂ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ನೆರವಾಗುತ್ತದೆ. ಇದು ಭಾಷೆಯ ಮೇಲಿನ ಹಿಡಿತವನ್ನು ಗಟ್ಟಿಗೊಳಿಸುವುದರ ಜೊತೆಗೆ ಜೀವನದ ಮೌಲ್ಯಗಳನ್ನು ಕಲಿಸುತ್ತದೆ ಎಂದರು.

ಸಾಹಿತ್ಯಾಭಿರುಚಿಯಿಂದ ಜ್ಞಾನವೃದ್ಧಿ, ಮಾನಸಿಕ ನೆಮ್ಮದಿ, ಸೃಜನಶೀಲತೆ, ಕ್ರಿಯಾಶೀಲತೆ ಹಾಗೂ ಸಂಸ್ಕೃತಿಯ ಅರಿವಿನಂತಹ ಪ್ರಯೋಜನಗಳು ದೊರೆಯುತ್ತವೆ. ವಿದ್ಯಾರ್ಥಿಗಳು ಗ್ರಂಥಾಲಯಗಳನ್ನು ಬಳಸಿಕೊಂಡು ಉತ್ತಮ ಪುಸ್ತಕಗಳನ್ನು ಆಯ್ಕೆ ಮಾಡಿ ಓದಬೇಕು. ಇದರಿಂದ ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯ ಪರಿಚಯವಾಗುತ್ತದೆ ಎಂದು ಕೇಶವಕಾಮತ್ ಹೇಳಿದರು.

ವಿದ್ಯಾರ್ಥಿನಿ ನವ್ಯ ಅವರು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳು ನವ್ಯ ಅವರಂತೆ ಉತ್ತಮ ಸಾಧನೆ ಮಾಡಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜ್ಞಾನಗಂಗಾ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಟಿ.ಕೆ. ಸುಧೀರ್, ವಿದ್ಯಾರ್ಥಿಗಳು ನಿರಂತರ ಕಲಿಕೆ, ಸತತ ಅಭ್ಯಾಸ, ನಿರ್ದಿಷ್ಟ ಗುರಿ ಹಾಗೂ ಕಠಿಣ ಪರಿಶ್ರಮದ ಮೂಲಕ ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಉತ್ತಮ ಕಲಿಕೆ ಮತ್ತು ಉತ್ತಮ ಶಿಕ್ಷಣದಿಂದ ಉತ್ತಮ ಭವಿಷ್ಯ ಹಾಗೂ ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯ. ಯಶಸ್ವಿ ಜೀವನ ಸಾಧನೆಗೆ ವಿದ್ಯಾರ್ಥಿಗಳಲ್ಲಿ ನಿರಂತರ ಪರಿಶ್ರಮ ಅಗತ್ಯ. ವಿದ್ಯಾರ್ಥಿನಿ ಎಚ್.ಕೆ. ನವ್ಯ ಅವರ ಸಾಧನೆಯು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಸುಧೀರ್ ಹೇಳಿದರು.

ವಿದ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂಬ ಕುರಿತು ಉಪನ್ಯಾಸ ನೀಡಿದ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಭಾಷಾ ಅಧ್ಯಾಪಕ ಮೆ.ನಾ. ವೆಂಕಟನಾಯಕ್, ವಿದ್ಯಾರ್ಥಿಗಳಿಗೆ ಸಾಧಿಸುವ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸಬಹುದು. ಸಾಧನೆ ಎಂಬುದು ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಇಂತಹ ಸಾಧನೆ ಮಾಡಿರುವ ಅನೇಕ ಮಹನೀಯರು ಜಗತ್ತಿನಲ್ಲಿದ್ದಾರೆ. ಭಾರತದ ಹೆಸರನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ನೋಬೆಲ್ ಪುರಸ್ಕೃತ ವಿಜ್ಞಾನಿ ಸರ್. ಸಿ.ವಿ. ರಾಮನ್, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ಸರ್ ಎಂ. ವಿಶ್ವೇಶ್ವರಯ್ಯ, ಕೆ.ಆರ್. ನಾರಾಯಣ್ ಮತ್ತಿತರ ಸಾಧಕರು ವಿದ್ಯಾರ್ಥಿಗಳಿಗೆ ಆದರ್ಶ ವ್ಯಕ್ತಿಗಳಾಗಿದ್ದಾರೆ ಎಂದರು.

ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯದ ದೃಷ್ಟಿಯಿಂದ ಇಷ್ಟಪಟ್ಟು ಓದಬೇಕೇ ಹೊರತು ಕಷ್ಟಪಟ್ಟು ಓದಬಾರದು. ಏಕಾಗ್ರತೆ, ಸದೃಢತೆ ಹಾಗೂ ಓದುವ ಛಲವನ್ನು ವಿದ್ಯಾರ್ಥಿಗಳು ತಮ್ಮ ಬದುಕಿನುದ್ದಕ್ಕೂ ಬೆಳೆಸಿಕೊಂಡರೆ ಸಮಾಜದಲ್ಲಿ ಉತ್ತಮ ಸಾಧನೆ ಮಾಡಿ ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬಹುದು ಎಂದರು.

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಯಾವುದೇ ಆತಂಕಪಡದೆ, ಕಠಿಣ ಪರಿಶ್ರಮ ಹಾಗೂ ಸತತ ಅಭ್ಯಾಸದೊಂದಿಗೆ ಪರೀಕ್ಷೆ ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಂಡರೆ ಯಶಸ್ಸು ಗಳಿಸಲು ಸಾಧ್ಯ ಎಂದು ವೆಂಕಟನಾಯಕ್ ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿನಿ ನವ್ಯ ಎಚ್.ಕೆ., ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಕಾರಣರಾದ ಶಾಲಾ ಶಿಕ್ಷಕರು ಹಾಗೂ ಪೋಷಕರಿಗೆ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಉತ್ತಮ ಸಾಧನೆ ಮಾಡಬಹುದು ಎಂದು ಅವರು ಹೇಳಿದರು.

ಜ್ಞಾನಗಂಗಾ ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಬಿ.ಎಸ್. ನಿಂಗಪ್ಪ, ಕನ್ನಡ ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.98.77 ಫಲಿತಾಂಶ ಗಳಿಸಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿ ಎಚ್.ಕೆ. ನವ್ಯ ಅವರ ಸಾಧನೆ ಹೆಮ್ಮೆಯ ಸಂಗತಿ ಎಂದರು.

ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್, ಜಿಲ್ಲಾ ಕ.ಸಾ.ಪ. ಸಂಘಟನಾ ಕಾರ್ಯದರ್ಶಿ ಕೆ.ಎನ್. ದೇವರಾಜ್ ಹಾಗೂ ಎಸ್.ಬಿ.ಐ. ಬ್ಯಾಂಕ್‌ನ ನಿವೃತ್ತ ಹಿರಿಯ ವ್ಯವಸ್ಥಾಪಕಿ ಸೂದನ ರತ್ನಾವತಿ ಮಾತನಾಡಿದರು.

ತಾಲ್ಲೂಕು ಕ.ಸಾ.ಪ. ಕೋಶಾಧಿಕಾರಿ ಕೆ.ವಿ. ಉಮೇಶ್, ಶಾಲೆಯ ಪ್ರಾಂಶುಪಾಲರಾದ ಜೆ.ಎ. ಸಂಜನಾ, ಕನ್ನಡ ಭಾಷಾ ಶಿಕ್ಷಕರಾದ ಎಚ್. ಭಾಸ್ಕರ್, ಜಲಾವತಿ ಹಾಗೂ ವಿದ್ಯಾರ್ಥಿನಿ ನವ್ಯ ಅವರ ಪೋಷಕರಾದ ಕೃಷ್ಣಪ್ಪ ಮತ್ತು ಕವಿತ ಉಪಸ್ಥಿತರಿದ್ದರು.

ಇದೇ ವೇಳೆ ಜ್ಞಾನಗಂಗಾ ವಸತಿ ಶಾಲೆಯ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯ ಅವರಿಗೆ ಕಿರು ಕಾಣಿಕೆ ನೀಡಿ ಅಭಿನಂದಿಸಲಾಯಿತು. ಕನ್ನಡ ಭಾಷಾ ಶಿಕ್ಷಕಿ ಜಲಾವತಿ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಯಶಿಕಾ ರಾಜ್ ಸ್ವಾಗತಿಸಿದರು. ವಿದ್ಯಾರ್ಥಿ ತನ್ಮಯ್ ವಂದಿಸಿದರು. ವಿದ್ಯಾರ್ಥಿನಿ ಪಲ್ಗುಣಿ ಪ್ರಾರ್ಥಿಸಿದರು.

ಶಾಲೆಯ ಶಿಕ್ಷಕರು, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಗೀತ ಶಿಕ್ಷಕಿ ರತ್ನಾವತಿ ಕನ್ನಡ ನಾಡಿನ ಕುರಿತ ಗೀತೆ ಹಾಡಿದರು.

ಜಿಲ್ಲಾ ಚೆಸ್ ಚಾಂಪಿಯನ್ ಆಗಿರುವ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಉನ್ನತ್ ಸಾರಥ್ಯ ಅವರನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*

ಆಗಷ್ಟ್ 25, 2026

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಹಾಗೂ ಅತ್ತೂರು…

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.