Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
  • *ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
  • *ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ. 26: ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ 144.60 ಕೋಟಿ ರೂ. ವಹಿವಾಟು ನಡೆಸುವ ಮೂಲಕ 46.86 ಲಕ್ಷ ರೂ. ನಿವ್ವಳ ಲಾಭ ಗಳಿಸಿರುವುದಾಗಿ ಸಂಘದ ಅಧ್ಯಕ್ಷ ಮಂದ್ರೀರ ಎನ್. ತೇಜಸ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಸದಸ್ಯರ ಪಾಲು ಹಣದ ಮೇಲೆ ಶೇ. 11.50ರಷ್ಟು ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ತೀರ್ಮಾನಿಸಿದೆ. ಸಂಘದ ವಾರ್ಷಿಕ ಮಹಾಸಭೆಯು ಇದೇ ಆ. 29ರಂದು ಬೆಳಗ್ಗೆ 10.30 ಗಂಟೆಗೆ ಹಾಕತ್ತೂರಿನ ಸಂಘದ ಮುಖ್ಯ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸಂಘವು ಹಾಕತ್ತೂರು, ಬಿಳಿಗೇರಿ, ಕಗ್ಗೋಡ್ಲು ಮತ್ತು ಮೇಕೇರಿ ಗ್ರಾಮಗಳನ್ನು ಒಳಗೊಂಡಂತೆ ಕಾರ್ಯನಿರ್ವಹಿಸುತ್ತಿದ್ದು, ಸಂಘದಲ್ಲಿ 1,261 ಸದಸ್ಯರಿದ್ದಾರೆ. 1.81 ಕೋಟಿ ರೂ. ಪಾಲು ಬಂಡವಾಳ ಹಾಗೂ 2.43 ಕೋಟಿ ರೂ. ಕ್ಷೇಮ ನಿಧಿಯನ್ನು ಹೊಂದಿದೆ. ಸಂಘದ ದುಡಿಯುವ ಬಂಡವಾಳ 27.75 ಕೋಟಿ ರೂ.ಗಳಾಗಿದ್ದು, ಪ್ರಸ್ತುತ 16.39 ಕೋಟಿ ರೂ. ಠೇವಣಿ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶೇ. 99.40ರಷ್ಟು ಸಾಲ ವಸೂಲಾತಿ

ಸಂಘದಿಂದ ಕೃಷಿ ಮತ್ತು ಕೃಷಿಯೇತರ ಸಾಲವಾಗಿ ಒಟ್ಟು 23.02 ಕೋಟಿ ರೂ. ಸಾಲವನ್ನು ವಿತರಿಸಲಾಗಿದೆ. ಈ ಪೈಕಿ ಸಂಘದ ಸ್ವಂತ ಬಂಡವಾಳದಿಂದ ಸುಮಾರು 16.20 ಕೋಟಿ ರೂ. ಸಾಲವನ್ನು ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಸಾಲ ವಸೂಲಾತಿಯ ಪ್ರಮಾಣ ಶೇ. 99.40ರಷ್ಟಿದೆ ಎಂದು ಮಾಹಿತಿ ನೀಡಿದರು.

ಕೃಷಿ ಸಾಮಗ್ರಿ ಮಾರಾಟದಿಂದ 19.62 ಲಕ್ಷ ರೂ. ಲಾಭ

ಸಂಘವು ಹಾಕತ್ತೂರು ಮತ್ತು ಮೇಕೇರಿಯಲ್ಲಿ ಗೋದಾಮುಗಳನ್ನು ಹೊಂದಿದ್ದು, ರಸಗೊಬ್ಬರ, ಕೀಟನಾಶಕ, ಕೃಷಿ ಸಾಮಗ್ರಿ ಹಾಗೂ ಮದ್ದುಗುಂಡುಗಳ ಮಾರಾಟದಿಂದ 2025-26ನೇ ಸಾಲಿನಲ್ಲಿ 19.62 ಲಕ್ಷ ರೂ. ಲಾಭ ಗಳಿಸಿರುವುದಾಗಿ ಮಂದ್ರೀರ ತೇಜಸ್ ಮಾಹಿತಿ ನೀಡಿದರು.

ಸಂಘದಿಂದ ವರ್ಷಂಪ್ರತಿ ಸದಸ್ಯರ ಮಕ್ಕಳಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹಕ ಬಹುಮಾನ ನೀಡುತ್ತಾ ಬರಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಂಘದ ಮೇಲ್ಛಾವಣಿ ನಿರ್ಮಾಣ ಹಾಗೂ ಕಾಂಪೌಂಡ್ ವಾಲ್ ನಿರ್ಮಾಣದ ಗುರಿಗಳನ್ನು ಹೊಂದಿರುವುದಾಗಿ ತಿಳಿಸಿದರು.

ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಲು ಮನವಿ

ಸಂಘದ ಉಪಾಧ್ಯಕ್ಷರಾದ ಮಂಜೀರ ಉಮೇಶ್ ಅಪ್ಪಣ್ಣ ಮಾತನಾಡಿ, ಗ್ರಾಮೀಣರು ತಮ್ಮ ಜಾಗದ ಅಗತ್ಯ ದಾಖಲೆ ಪತ್ರಗಳನ್ನು ಹೊಂದಿಸಿಕೊಳ್ಳಲು ಸಾಧ್ಯವಾಗದೆ ಸಂಘದ ಸದಸ್ಯತ್ವದಿಂದ ದೂರ ಉಳಿದು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯು ಗ್ರಾಮಸ್ಥರ ಜಾಗದ ದಾಖಲೆಗಳನ್ನು ಸರಿಪಡಿಸಲು ಸಮಾಲೋಚಕರನ್ನು ನಿಯೋಜಿಸಿ ನೆರವಾಗಬೇಕೆಂದು ಮನವಿ ಮಾಡಿದರು.

ಕಳೆದ ಕೆಲ ವರ್ಷಗಳಿಂದ ಮುಂಗಾರು ವಿಳಂಬ ಮತ್ತು ಅತಿವೃಷ್ಟಿಯಿಂದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರನ್ನು ಬಳಸುವ ಕರ್ನಾಟಕ ಮತ್ತು ನೆರೆಯ ತಮಿಳುನಾಡು ಸರ್ಕಾರಗಳು ಕಾವೇರಿಯ ನಾಡು ಕೊಡಗಿಗೆ ವಿಶೇಷ ಪ್ಯಾಕೇಜ್ ಒದಗಿಸುವಂತೆ ಉಮೇಶ್ ಅಪ್ಪಣ್ಣ ಕೋರಿದರು. ಅಲ್ಲದೆ, ಜೂನ್ ಆರಂಭಿಕ ಹಂತದಲ್ಲೇ ರಾಜ್ಯ ಸರ್ಕಾರ ಮಳೆ ದೇವರು ಪಾಡಿ ಶ್ರೀ ಇಗ್ಗುತ್ತಪ್ಪನಿಗೆ ವಿಶೇಷ ಪೂಜೆ ಸಲ್ಲಿಸಲು ಮುಂದಾಗಬೇಕೆಂದು ಕೋರಿದರು.

ಮಂಗಗಳ ಸ್ಥಳಾಂತರಕ್ಕೆ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಮಂಗಗಳ ಉಪಟಳದಿಂದ ಕೃಷಿಕ ಸಮೂಹ ಕಂಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಕಂಡುಬರುವ ಮಂಗಗಳನ್ನು ಸೆರೆಹಿಡಿದು ಅರಣ್ಯಕ್ಕೆ ಬಿಡುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ನಿರ್ದೇಶಕರಾದ ಪರ್ಲಕೋಟಿ ಎ. ಕಾವೇರಪ್ಪ, ತುಂತಜ್ಜಿರ ಆರ್. ತಿಮ್ಮಯ್ಯ, ಚೋಂಡಿರ ಜಿ. ಚಂಗಪ್ಪ, ಹೆಚ್.ಆರ್. ವಾಸಪ್ಪ ಹಾಗೂ ಲೋಕೇಶ್ ಟಿ.ವಿ. ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.26: ಕೊಡಗು ಜಿಲ್ಲೆಯಲ್ಲಿ ಮೋಡ ಭಿತ್ತನೆ ಮಾಡಲ್ಲ. ಅದರ ಅಗತ್ಯವೂ ಜಿಲ್ಲೆಗೆ ಇಲ್ಲ ಎಂದು ಮಡಿಕೇರಿ…

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026

*ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.