
ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಆಗಸ್ಟ್, 28 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎನ್.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಸಿದ್ದಾಪುರ ಕೊಡಗು ಯೂನಿಯನ್ ಎಸ್ಎನ್ಡಿಪಿ ಅಧ್ಯಕ್ಷರಾದ ವಿ.ಕೆ.ಲೋಕೇಶ್, ಕೊಡಗು ಜಿಲ್ಲೆ ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷರು ಹಾಗೂ ನಿವೃತ್ತ ಪೊಲೀಸ್ ಉಪ ಅಧೀಕ್ಷಕರಾದ ಬಿ.ಆರ್.ಲಿಂಗಪ್ಪ, ಮಡಿಕೇರಿ ತಾಲ್ಲೂಕು ಬಿಲ್ಲವ ಸಮಾಜದ ಸೇವಾ ಸಂಘದ ಅಧ್ಯಕ್ಷರಾದ ಟಿ.ಎಸ್.ಲೀಲಾವತಿ, ಮಕ್ಕಂದೂರು ಸಾಧ್ಯ ಟ್ರಸ್ಟಿ ಆಫ್ ಸೋಶೀಯಲ್ ಡೆವಲಪ್ಮೆಂಟ್ ಟ್ರಸ್ತಿ ಬಿ.ಎನ್.ರಮೇಶ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನ ಎಸ್.ಹಾದಿಮನಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ.









