
ಮಡಿಕೇರಿ ಆ.27 NEWS DESK : ಪ್ರಸಕ್ತ ಸಾಲಿನಲ್ಲಿ ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಸಂಬಂಧ ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿದ್ದ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಗುರುವಾರ ನಡೆಯಿತು. ಸಭೆಯಲ್ಲಿ ಮಾಜಿ ಸಚಿವರು ಹಾಗೂ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ವೆಂಕಟೇಶ್, ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಎ.ಮಂಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ನೀರಾವರಿ ಇಲಾಖೆಯ ಎಂಜಿನಿಯರ್‍ಗಳು ಇತರರು ಇದ್ದರು.









