
ವಿರಾಜಪೇಟೆ ಆ.28 NEWS DESK : ವಿರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ವತಿಯಿಂದ ಬಿಟ್ಟಂಗಾಲದ ಅಂಬಟ್ಟಿಯಲ್ಲಿರುವ ಶ್ರೀ ನಾರಾಯಣ ಗುರು ಮಂದಿರದಲ್ಲಿ ಶ್ರೀ ನಾರಾಯಣ ಗುರು ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರುಗಳ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ, ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಸಮಾರಂಭದಲ್ಲಿ ವಿರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ. ಗಣೇಶ್, ಗೌರವಾಧ್ಯಕ್ಷ ಬಿ.ಆರ್. ರಾಜ, ಉಪಾಧ್ಯಕ್ಷ ಪುರುಷೋತ್ತಮ್, ಕಾರ್ಯದರ್ಶಿ ಜನಾರ್ದನ್, ಖಜಾಂಚಿ ಬಿ.ಎಂ. ಸತೀಶ್, ಸಹ ಕಾರ್ಯದರ್ಶಿಗಳಾದ ಲಕ್ಷ್ಮಣ್ ಹಾಗೂ ಮಣಿ, ಮಹಿಳಾ ಘಟಕದ ಪ್ರಮುಖರಾದ ರೂಪ ಹಾಗೂ ಚಿತ್ರಾ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.









