Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಆ.29 NEWS DESK  : ಶಿಸ್ತುಬದ್ಧ ಶಿಕ್ಷಣ ನೀಡಲು ಸಾಧ್ಯವಾದರೆ ಮಾತ್ರ ಸಮಾಜದ ಯಶಸ್ಸು ಹಾಗೂ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರವು ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು. ವಿರಾಜಪೇಟೆ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ಗೋಣಿಕೊಪ್ಪ ಅನುದಾನಿತ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ, ಶಾಸಕಾಂಗ ಹಾಗೂ ಕಾರ್ಯಾಂಗದ ಪ್ರಮುಖ ಜವಾಬ್ದಾರಿಗಳಲ್ಲಿ ಶಿಕ್ಷಣ ನೀಡುವುದೂ ಒಂದಾಗಿದೆ. ಆದರೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಾವು ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ. ಇದರ ಪರಿಣಾಮವಾಗಿ ಖಾಸಗಿ ಶಾಲೆಗಳು ಗುಣಮಟ್ಟದ ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಿದವು. ಆದರೆ ಕಾಲಕ್ರಮೇಣ ಶಿಕ್ಷಣ ಕ್ಷೇತ್ರವು ವ್ಯಾಪಾರೀಕರಣದತ್ತ ಸಾಗುತ್ತಿರುವುದು ವಿಷಾದನೀಯ ಎಂದು ಹೇಳಿದರು. ದೆಹಲಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೈಗೊಂಡಿರುವ ಕ್ರಮಗಳ ಮಾದರಿಯಲ್ಲಿಯೇ ಕರ್ನಾಟಕದಲ್ಲೂ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ. ಇದಕ್ಕಾಗಿ ರಾಜಕೀಯ ಇಚ್ಛಾಶಕ್ತಿ ಮತ್ತಷ್ಟು ಬಲಗೊಳ್ಳಬೇಕಿದ್ದು, ಜನರು, ಪೋಷಕರು ಹಾಗೂ ಮಕ್ಕಳ ಮನಸ್ಥಿತಿಯಲ್ಲೂ ಬದಲಾವಣೆ ಅಗತ್ಯವಿದೆ ಎಂದರು. ಜಗತ್ತು ಬದಲಾಗಿದ್ದು, ಶಿಕ್ಷಣ ವ್ಯವಸ್ಥೆಯೂ ಬದಲಾಗಿದೆ. ಇದರೊಂದಿಗೆ ಅವಕಾಶಗಳ ಸಂಖ್ಯೆಯೂ ಹೆಚ್ಚಾಗಿದೆ. ಮಕ್ಕಳು ಶಿಸ್ತಿನಿಂದ ಬದುಕಿನ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಇಂದು ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡುತ್ತಿದ್ದಾರೆ. ಬಡತನದಿಂದ ಹೊರಬಂದು ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಬದುಕು ನಡೆಸಬೇಕು ಎಂಬ ಹಂಬಲ ಮಕ್ಕಳಲ್ಲಿ ಮೂಡುತ್ತಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶದ ಮಕ್ಕಳು ದೂರದೃಷ್ಟಿ ಹಾಗೂ ಛಲದಿಂದ ದೇಶದಲ್ಲಿರುವ ಅವಕಾಶಗಳನ್ನು ಗುರುತಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು. ಶಿಕ್ಷಣವನ್ನೇ ಶಕ್ತಿಯಾಗಿಸಿಕೊಂಡು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಬದುಕಿನಲ್ಲಿ ಶಿಕ್ಷಕರು ಹಾಗೂ ಪೋಷಕರನ್ನು ದೂರುವ ಬದಲು ಸ್ವಯಂಶಕ್ತಿಯಿಂದ ಜೀವನವನ್ನು ರೂಪಿಸಿಕೊಳ್ಳಬೇಕು. ಅದನ್ನೇ ಗುರಿಯಾಗಿಸಿಕೊಳ್ಳಬೇಕು. ಸಾಧಿಸಲು ಸಾಕಷ್ಟು ಅವಕಾಶಗಳಿದ್ದು, ಶ್ರಮವಹಿಸಿ ಜೀವನದಲ್ಲಿ ಗೆಲುವು ಸಾಧಿಸಬೇಕು. ಸಾಧನೆಯಿಂದ ದೊರೆಯುವ ಸಂತೋಷ ಅಮೂಲ್ಯ ಹಾಗೂ ಸ್ವತಂತ್ರವಾದದ್ದು. ಅದನ್ನು ಗಳಿಸಿಕೊಳ್ಳಲು ಪ್ರತಿಯೊಬ್ಬ ವಿದ್ಯಾರ್ಥಿಯೂ ಪಣತೊಡಬೇಕು ಎಂದು ಸಲಹೆ ನೀಡಿದರು. :: ಶೇ.100 ಫಲಿತಾಂಶ ಪಡೆದ 28 ಶಾಲೆಗಳಿಗೆ ಅಭಿನಂದನೆ ::  ಈ ಸಂದರ್ಭದಲ್ಲಿ ಹತ್ತನೇ ತರಗತಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಸೇರಿದಂತೆ ಒಟ್ಟು 28 ಶಾಲೆಗಳನ್ನು ಅಭಿನಂದಿಸಲಾಯಿತು. ಅಲ್ಲದೆ, ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನೂ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ. ಉತ್ತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ರಾಜೇಶ್, ಗೋಣಿಕೊಪ್ಪ ಅನುದಾನಿತ ಪ್ರೌಢಶಾಲೆಯ ಅಧ್ಯಕ್ಷ ಚಿಣ್ಣಪ್ಪ, ಮುಖ್ಯ ಶಿಕ್ಷಕ ಚೈತನ್ಯ ಡಿ.ಎಸ್., ಅನುದಾನಿತ ಪ್ರೌಢಶಾಲಾ ತಾಲೂಕು ಅಧ್ಯಕ್ಷ ಗಿಡ್ಡಯ್ಯ, ಸರ್ವದೇವತಾ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಪ್ರದೀಪ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಲೋಕೇಶ್ ಎಚ್.ಡಿ., ಚೆಂಗಪ್ಪ, ಮೋಹನ್ ಕುಮಾರಿ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಜಗದೀಶ್ ಜೋಡುಬೀಟಿ 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.