

ಮಡಿಕೇರಿ ಆ.30 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಲಾಗಿರುವ ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿಗೆ ಕೃತಿಗಳನ್ನು ಸಲ್ಲಿಸುವ ಅವಧಿಯನ್ನು ಒಂದು ವಾರ ವಿಸ್ತರಿಸಲಾಗಿದೆ. ಕೊಡಗು ಜಿಲ್ಲೆಯ ಲೇಖಕರು ರಚಿಸಿರುವ ಉತ್ತಮ ಪುಸ್ತಕಕ್ಕೆ ಪ್ರಶಸ್ತಿ ಪ್ರದಾನಿಸುವ ಉದ್ದೇಶದಿಂದ ಪೇರಿಯಂಡ ಪಿ. ಪೆಮ್ಮಯ್ಯ ಹಾಗೂ ಜಿ.ಕೆ.ದೇವಕಿ ಪೆಮ್ಮಯ್ಯ ದಂಪತಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಸ್ಥಾಪಿಸಿದ್ದಾರೆ. ಈ ಹಿಂದೆ ಪ್ರಕಟಣೆಯಲ್ಲಿ ಕೃತಿಗಳನ್ನು ಸಲ್ಲಿಸಲು ಆಗಸ್ಟ್ 31, 2026 ಕೊನೆಯ ದಿನವೆಂದು ತಿಳಿಸಲಾಗಿತ್ತು. ಇದೀಗ ಒಂದು ವಾರದ ಅವಧಿ ವಿಸ್ತರಿಸಲಾಗಿದ್ದು, ಆಸಕ್ತರು ತಮ್ಮ ಕೃತಿಗಳನ್ನು ಸೆಪ್ಟೆಂಬರ್ 7, 2026ರೊಳಗೆ ತಲುಪಿಸುವಂತೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ. ಕೃತಿಗಳನ್ನು ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 94483 46276 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









