Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.1 NEWS DESK : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಇದೇ ಸೆಪ್ಟೆಂಬರ್ 6 ರಂದು ನಡೆಯುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪೂರ್ವಸಿದ್ಧತೆಗಳ ಕುರಿತು ಮಂಗಳವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕು ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸಲು ಕ್ರಮವಹಿಸಬೇಕು, ಭದ್ರತೆ ವ್ಯವಸ್ಥೆ ಬಿಗಿಗೊಳಿಸಬೇಕು, ಹಾಗೆಯೇ ಪರೀಕ್ಷಾ ಪ್ರಕ್ರಿಯೆಯನ್ನು ನಿಯಮಾನುಸಾರ ನಡೆಸುವಂತೆ ತಿಳಿಸಿದರು. ಪರೀಕ್ಷಾ ದಿನದಂದು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಕ್ರಮಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ ಅಗತ್ಯ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು, ಸಂಚಾರ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ಮಾತನಾಡಿ, ಮೇಲ್ವಿಚಾರಕರು, ವೀಕ್ಷಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು, ಎಲ್ಲಿಯೂ ಲೋಪ ಉಂಟಾಗದಂತೆ ಎಚ್ಚರ ವಹಿಸಬೇಕು. ಸಿಸಿಟಿವಿಗಳ ಕಣ್ಗಾವಲಿನಲ್ಲಿಯೇ ಪತ್ರಿಕೆ ತರುವಂತಾಗಬೇಕು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎ.ಗಣಪತಿ ಅವರು ಮಾಹಿತಿ ನೀಡಿ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸೆ.6 ರಂದು ಭಾನುವಾರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಒಂದುವರೆ ಗಂಟೆಗಳ ಕಾಲ ಲಿಖಿತ ಪರೀಕ್ಷೆ ನಡೆಯಲಿದೆ. ಮಡಿಕೇರಿಯಲ್ಲಿ 6, ಕುಶಾಲನಗರದಲ್ಲಿ 2 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 8 ಪರೀಕ್ಷಾ ಕೇಂದ್ರಗಳಿದ್ದು, 3,783 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಒಟ್ಟು 3 ಮಾರ್ಗಗಳಿದ್ದು, ಮಡಿಕೇರಿ ನಗರದಲ್ಲಿ 2 ಹಾಗೂ ಕುಶಾಲನಗರದಲ್ಲಿ 1 ಮಾರ್ಗ ಇದೆ ಎಂದರು. ಮಡಿಕೇರಿ ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಜೋಸೇಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್, ಕೊಡಗು ವಿದ್ಯಾಲಯ ಮಡಿಕೇರಿ ಹಾಗೂ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ರಜೆಯ ದಿನ ಆಗಿರುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಮಾತನಾಡಿ, ಈ ಹಿಂದಿನಂತೆ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಲವು ಸಲಹೆ, ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪರೀಕ್ಷಾ ವೀಕ್ಷಕರಾದ ಶ್ರೀನಿವಾಸ, ಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ಜಾಗೃತ ದಳದ ಕೆ.ಕೆ.ಭವಾನಿ, ಸೆಂಟ್ ಜೋಸೆಫ್ ಪಿ.ಯು ಕಾಲೇಜಿನ ಕೆ.ಜಿ.ಸರಸ್ವತಿ, ಪರೀಕ್ಷಾ ಮೇಲ್ವಿಚಾರಕರಾದ ಸತೀಶ್, ಸಂತ ಮೈಕಲರ ಶಾಲೆಯ ಪ್ರಾಂಶುಪಾಲರಾದ ಎಂ.ಎ.ಪಂಕಜ, ಪರೀಕ್ಷಾ ವೀಕ್ಷಕರು, ಮಾರ್ಗಾಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಮೂರ್ನಾಡು ಕಸಾಪದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ: ಕನ್ನಡದ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಈರಮಂಡ ಹರಿಣಿ ವಿಜಯ್

ನವೆಂಬರ್ 1, 2026

ಮಡಿಕೇರಿಯ ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ : ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿದ ಸಚಿವ ನರೇಂದ್ರಸ್ವಾಮಿ

ನವೆಂಬರ್ 1, 2026

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಮಡಿಕೇರಿಯ ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ : ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿದ ಸಚಿವ ನರೇಂದ್ರಸ್ವಾಮಿ

ನವೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ನ.1 : ಮಡಿಕೇರಿ ನಗರದ ಓಂಕಾರ್ ಆಟೋ ಸ್ನೇಹಿತರ ಬಳಗದ ವತಿಯಿಂದ 71 ನೇ ಕನ್ನಡ…

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿಗೆ ರೋಚಕ ತೆರೆ: ಮೂರ್ನಾಡು ಎಂಆರ್‌ಎಫ್, ಪೊನ್ನಂಪೇಟೆ ಕ್ರೀಡಾ ಶಾಲೆ, ಕೂರ್ಗ್ ವಂಡರ್ ಹಾಗೂ ಕೊಡವ ಹಾಕಿ ಅಕಾಡೆಮಿಗೆ ಪ್ರಶಸ್ತಿ

ನವೆಂಬರ್ 1, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡಗಿಗೆ ಯುಟಿ ಸ್ಥಾನಮಾನಕ್ಕೆ ಆಗ್ರಹಿಸಿ ಸಿಎನ್‌ಸಿ ಸತ್ಯಾಗ್ರಹ

ನವೆಂಬರ್ 1, 2026

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಮೌನ ವಿ.ಜೆ.ಗೆ ಅತ್ಯುನ್ನತ ಶ್ರೇಣಿ

ನವೆಂಬರ್ 1, 2026

ಕೊಡಗು ಪತ್ರಿಕಾ ಭವನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಸುಂಟಿಕೊಪ್ಪ ಇಮ್ಯಾನುವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ವಾರ್ಷಿಕ ಬೆಳೆ ಹಬ್ಬ ಆಚರಣೆ

ನವೆಂಬರ್ 1, 2026

ನ.3 ರಂದು ಮಂಗಳವಾರ ಶಾಸಕ ಡಾ.ಮಂತರ್ ಗೌಡ ಅವರಿಗೆ ಮಡಿಕೇರಿಯಲ್ಲಿ ಪೌರಸನ್ಮಾನ

ನವೆಂಬರ್ 1, 2026

ಸುಂಟಿಕೊಪ್ಪದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಿ: ಎ.ಲೋಕೇಶ್ ಕುಮಾರ್

ನವೆಂಬರ್ 1, 2026

ವಿರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ; ಪಥಸಂಚಲನದಲ್ಲಿ ಪಾಲ್ಗೊಂಡ ನೂರಾರು ಗಣವೇಷಧಾರಿ ಹಿಂದೂ ಬಾಂಧವರು

ನವೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.