
ಸೋಮವಾರಪೇಟೆ ಸೆ.1 NEWS DESK : ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ಸ್ಥಳವಾದ ಹೊನ್ನಮ್ಮನ ಕೆರೆ ಸುತ್ತಮುತ್ತ ಸ್ವಚ್ಛತಾ ಶ್ರಮದಾನ ನಡೆಯಿತು. ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ವಿ. ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ, ಸ್ಥಳೀಯ ಗ್ರಾಮಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಕೆರೆಯ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ವೀರೇಶ್, ಕಾರ್ಯದರ್ಶಿ ಪ್ರದೀಪ್ ಕುಮಾರ್, ಗ್ರಾಮ ಸಮಿತಿಯ ಅಧ್ಯಕ್ಷ ವಸಂತ್ ಕುಮಾರ್, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್, ಗೌಡಳ್ಳಿ, ಗಣಗೂರು, ನೇರುಗಳಲೆ, ಹಾನಗಲ್ಲು ಹಾಗೂ ಚೌಡ್ಲು ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸದಸ್ಯರು, ಎನ್‌ಆರ್‌ಎಲ್‌ಎಂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮಸ್ಥರು ಸೇರಿದಂತೆ ಹಲವರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.










