
ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ಸೆ.5 ರಂದು ಬೆಳಗ್ಗೆ 10 ಗಂಟೆಗೆ ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ“ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಕಲಾವತಿ ಪಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ವಿ.ಪ್ರಸಾದ್, ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಇತರರು ಪಾಲ್ಗೊಳ್ಳಲಿದ್ದಾರೆ.









