Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಆ.27ರಂದು ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ವತಿಯಿಂದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟ ನಡೆಯಿತು. ಒಟ್ಟು ಒಂಬತ್ತು ಶಾಲೆಗಳ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಉಪಾಧ್ಯಕ್ಷ ಡಿ.ಎಸ್. ವಿಶ್ವನಾಥ್, ಕಾರ್ಯದರ್ಶಿ ದಿವಾಕರ್ ಎಚ್.ಎಂ., ಕೊಡ್ಲಿಪೇಟೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರವೀಶ್, ಬೆಸೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮುರಳೀಧರ್, ಮುಖ್ಯ ಶಿಕ್ಷಕ ಅಭಿಲಾಷ್ ಎಚ್.ಎಂ., ದೈಹಿಕ ಶಿಕ್ಷಕ ಪುನೀತ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿ ಸಂಘದ ಕ್ರೀಡಾ ಸಚಿವ ಮಿಥುನ್ ಕ್ರೀಡಾ ಜ್ಯೋತಿಯನ್ನು ಓಟದ ಮೂಲಕ ತಂದು ಗಣ್ಯರಿಗೆ ಹಸ್ತಾಂತರಿಸಿದರು. ಕ್ರೀಡಾ ಜ್ಯೋತಿ ಸ್ವೀಕರಿಸಿದ ದಿವಾಕರ್ ಎಚ್.ಎಂ. ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವ ಬೆಳೆಸುವುದರ ಜೊತೆಗೆ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ರೂಪಿಸುತ್ತದೆ ಎಂದರು.
ಬಳಿಕ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯಿತು. ಕೊಕ್ಕೋ, ವಾಲಿಬಾಲ್, ಥ್ರೋಬಾಲ್, ಕಬಡ್ಡಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಳೆದ ಬಾರಿಯಂತೆ ಈ ಬಾರಿಯೂ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಸಮಗ್ರ ಚಾಂಪಿಯನ್‌ಶಿಪ್ ಗೆದ್ದುಕೊಂಡರು. ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬೆಸೂರು ಕ್ರೀಡಾಕೂಟದಲ್ಲೂ ಗಮನಾರ್ಹ ಸಾಧನೆ
ಆ.31ರಂದು ಬೆಸೂರು ಶಾಲೆಯಲ್ಲಿ ನಡೆದ 17 ವರ್ಷದೊಳಗಿನ ಪ್ರೌಢಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿಯೂ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಬಾಲಕರ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ, ಬಾಲಕಿಯರ ಥ್ರೋಬಾಲ್ ಹಾಗೂ ಕೊಕ್ಕೋದಲ್ಲಿ ದ್ವಿತೀಯ ಸ್ಥಾನ, ಬಾಲಕರ ಫುಟ್ಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್‌ನಲ್ಲಿಯೂ ವಿದ್ಯಾರ್ಥಿಗಳು ವಿವಿಧ ಸ್ಥಾನಗಳನ್ನು ಗಳಿಸಿದ್ದಾರೆ.
14 ವರ್ಷದೊಳಗಿನ ಪ್ರಾಥಮಿಕ ವಿಭಾಗದಲ್ಲಿ ಬಾಲಕರ ಹಾಗೂ ಬಾಲಕಿಯರ ಕೊಕ್ಕೋದಲ್ಲಿ ಪ್ರಥಮ ಸ್ಥಾನ, ಬಾಲಕರ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಸೇರಿದಂತೆ ಅಥ್ಲೆಟಿಕ್ಸ್‌ನಲ್ಲಿ ವಿವಿಧ ಸ್ಥಾನಗಳನ್ನು ಪಡೆದು ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮೆರೆದಿದ್ದಾರೆ.
ಎರಡೂ ಹಂತಗಳ ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹ, ಶಿಸ್ತು ಹಾಗೂ ಕ್ರೀಡಾಸ್ಫೂರ್ತಿಯಿಂದ ಸ್ಪರ್ಧಿಸಿ ಸಾಧನೆ ಮಾಡಿದ್ದು, ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.