
ಮಡಿಕೇರಿ NEWS DESK ಸೆ.4 : 2026-27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಕೆ.ಬಾಡಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸರಸ್ವತಿ ಬಿ.ಕೆ, ಅಯ್ಯಂಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಎಸ್.ಶಾಂತಿ ಮತ್ತು ಮೂರ್ನಾಡು ಪ್ರೌಢ ಶಾಲೆಯ ಪ್ರಶಾಂತ್ ಎಸ್.ಡಿ. ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಉಮೇಶ್ ಕುಮಾರ್ ಕೆ.ಪಿ., ನೆಲ್ಲಿಹುದಿಕೇರಿ ಕೆಪಿಎಸ್ ಪ್ರಾಥಮಿಕ ಶಾಲೆಯ ರೆಮ್ಮಿ ಪಿ.ಸಿ., ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ರತ್ನ ಕುಮಾರ್ ಕೆ.ಆರ್. ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ವಿರಾಜಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಬಾಳುಗೋಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇರಿ ಲೋಬೋ, ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಲಿಮ ಪಿ.ಹೆಚ್. ಹಾಗೂ ಪೊನ್ನಂಪೇಟೆ ಕೆಪಿಎಸ್ ಪ್ರೌಢಶಾಲೆಯ ಅನ್ರಿತಾ ಫುಟಾರ್ಡೊ ಅವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹೇಶ್ ಅವರು ತಿಳಿಸಿದ್ದಾರೆ.









